ರೂ.1.13 ಕೋಟಿ ಲಾಭ; ಶೇ.13 ಡಿವಿಡೆಂಡ್ ಘೋಷಣೆ
ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ಏಳನೇ ವಾರ್ಷಿಕ ಮಹಾಸಭೆ ಭಾನುವಾರ ಕೈಕಂಬದಲ್ಲಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.
https://chat.whatsapp.com/FCEnlTkAKCC0MGPhXtX4i4
ಸ್ಥಾಪಕ ನಾಮನಿರ್ದೇಶಿತ ನಿರ್ದೇಶಕ ಯು.ಬಿ. ವಿಜಯಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಮೋದ್ ವಾರ್ಷಿಕ ವರದಿ ಮಂಡಿಸಿ, ಸಂಘದಲ್ಲಿ ಪ್ರಸ್ತುತ 5,376 ಸದಸ್ಯರಿದ್ದು, ಸಂಘವು ರೂ.1.13 ಕೋಟಿ ಒಟ್ಟು ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು. ಸಂಘದ ನಿರ್ದೇಶಕ ಮಾಧವ ಮಾವೆ ನಿರ್ದೇಶಕರ ಪರವಾಗಿ ಮಾತನಾಡಿದರು. ಅಧ್ಯಕ್ಷ ಸಂಜೀವ ಅಡ್ಯಾರ್ ಅವರು ಸಂಘದ ಮುಂದಿನ ಕಾರ್ಯಯೋಜನೆಗಳು ಹಾಗೂ ಭವಿಷ್ಯದ ಅಭಿವೃದ್ಧಿಯ ಕುರಿತು ವಿವರಿಸಿದರು.

ಸುಕೇಶ್ ಪ್ರಾರ್ಥನೆ ನೆರವೇರಿಸಿದರು. ನಂತರ ಸಂಘದ ಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಹಾಗೂ ವರದಿ ವರ್ಷದಲ್ಲಿ ಅಗಲಿದ ನಿರ್ದೇಶಕರು ಮತ್ತು ಸದಸ್ಯರಿಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಿರ್ದೇಶಕ ಮಹಾಬಲ ಅಡ್ಯಾರ್ ಸ್ವಾಗತಿಸಿದರು. ಸದಸ್ಯರಾದ ಪ್ರಕಾಶ್ ಎಚ್., ಸುಂದರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಪುನೀತ್ ಕುಮಾರ್ ಶೆಟ್ಟಿ, ಮನೋಹರ್, ಪದ್ಮನಾಭ ಪಜೀರ್ ಹಾಗೂ ಯೋಗಿನಿ ಸೋಮೇಶ್ವರ ಸೇರಿದಂತೆ ಮತ್ತಿತರರು ವಿವಿಧ ವಿಷಯಗಳ ಕುರಿತು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು.
ರಾಷ್ಟ್ರೀಯ ಮಟ್ಟದ ಮಹಿಳಾ ಕ್ರೀಡಾಪಟು, ಸಂಘದ ಸದಸ್ಯೆ ರೋಹಿಣಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ನಿರ್ದೇಶಕಿ ಮೋಹಿನಿ ಎಚ್. ಅವರು ಸನ್ಮಾನ ಪತ್ರ ವಾಚಿಸಿದರು. ಸಂಘದ ಉಪಾಧ್ಯಕ್ಷ ಪ್ರೇಮಾನಂದ ವಿ. ಹಾಗೂ ನಿರ್ದೇಶಕರಾದ ವೆಂಕಟೇಶ್, ತಿರುಮಲೇಶ್, ಅನಿತಾ,ತಿ ಸತ್ಯಪ್ರಭಾ, ಭಾಸ್ಕರ ಸವಲಗಿ, ಅನಿಲ್ ಅತ್ತಾವರ ಹಾಗೂ ಮಾಧವ ಸುವರ್ಣ ಉಪಸ್ಥಿತರಿದ್ದರು. ನಿರ್ದೇಶಕ ಹರಿದಾಸ್ ಯು. ವಂದಿಸಿದರು.










