ಬೆಂಗಳೂರು: ಇಲ್ಲಿನ ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಬ್ಯಾಂಕಿನ ಅಧ್ಯಕ್ಷರಾದ ನಂಜೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ನಂಜೇಗೌಡ ಅವರು, ಬ್ಯಾಂಕು 2025-26ನೇ ವರ್ಷಾಂತ್ಯಕ್ಕೆ ರೂ 69.35 ಕೋಟಿ ಸಾಲ ಹೊರಬಾಕಿ ಹಾಗೂ ರೂ 100.38 ಕೋಟಿ ಠೇವಣಿ ಗಳಿಸಿದೆ. ಬ್ಯಾಂಕಿನ ಪ್ರತಿಯೊಂದು ಸಾಧನೆಗೂ ಬ್ಯಾಂಕಿನ ಸದಸ್ಯರು, ಗ್ರಾಹಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳ ಪರಿಶ್ರಮ ಕಾರಣವಾಗಿದೆ. 2025-26ನೇ ಸಾಲಿನಲ್ಲಿ ಬ್ಯಾಂಕು ರೂ 1.15 ಕೋಟಿ ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನ ಸದಸ್ಯರಿಗೆ ಈ ಬಾರಿ ಶೇ.16ರಂತೆ ಡಿವಿಡೆಂಡ್ ಘೋಷಣೆ ಮಾಡಲಾಗಿದೆ. ಈಗಾಗಲೇ ಬ್ಯಾಂಕಿನ ಮೂರು ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆಯಲು ಬ್ಯಾಂಕಿನ ಆಡಳಿತ ಮಂಡಳಿ ಕಾರ್ಯಪ್ರವೃತವಾಗಿದೆ. ಪ್ರತಿಬಾರಿಯಂತೆ ಈ ಬಾರಿ 200 ಜನ ಬ್ಯಾಂಕಿನ ಹಿರಿಯ ಸ್ಥಾಪಕ ಸದಸ್ಯರುಗಳಿಗೆ ಸನ್ಮಾಲಿಸಲಾಗಿದೆ ಎಂದು ಹೇಳಿದರು. ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಬಾರಿಯಂತೆ ಈ ಬಾರಿಯೂ ಪ್ರತಿಭಾ ಪುರಸ್ಕಾರ ನೀಡಿ ಉತ್ತೆಜನ ನೀಡಲಾಯಿತು.


ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಬಿ.ಎಂ ಮಾತನಾಡಿ, ಬ್ಯಾಂಕಿನ ಇತಿಹಾಸದಲ್ಲಿ ಮೊದಲ ಬಾರಿ ರೂ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ಟೈರ್ 1 ಬ್ಯಾಂಕಿನಿಂದ ಟೈರ್ 2 ಬ್ಯಾಂಕಾಗಿ ಪರಿವರ್ತನೆಗೊಂಡಿದೆ. ಇದು ಬ್ಯಾಂಕಿನ ಸದಸ್ಯರು ಹಾಗೂ ಗ್ರಾಹಕರು ಬ್ಯಾಂಕಿನ ಮೇಲೆ ಇರಿಸಿರುವ ವಿಶ್ವಾಸ ಹಾಗೂ ನಂಬಿಕೆಗೆ ಸಾಕ್ಷಿಯಾಗಿದೆ ಎಂದರು.
ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಬಾರಿಯಂತೆ ಈ ಬಾರಿಯೂ ಪ್ರತಿಭಾ ಪುರಸ್ಕಾರ ನೀಡಿ ಉತ್ತೇಜನ ನೀಡಲಾಯಿತು. ಬ್ಯಾಂಕಿನ ಉಪಾಧ್ಯಕ್ಷರಾದ ಸಿ.ಹೆಚ್ ಶ್ರೀನಿವಾಸ್, ಮಾಜಿ ಅಧ್ಯಕ್ಷರಾದ ಕೃಷ್ಣೇಗೌಡ, ನಿರ್ದೇಶಕರುಗಳಾದ ಎ.ಕೇಶವ, ಡಿ.ಅಶೋಕ್, ಕೆ.ರಾಮಯ್ಯ, ಆರ್.ಶ್ರೀನಿವಾಸಮೂರ್ತಿ, ಜಿ.ದೇವರಾಜು, ಜಿ.ಕೃಷ್ಣ, ಎಂ.ಆರ್.ರಾಜೇಶ್ವರೀ, ಡಿ.ಆರ್.ಸುರೇಖಾ, ಜಿ.ಟಿ.ವೆಂಕಟೇಶ್ (ರೇವಣ್ಣ), ಬಿ.ಆರ್.ದೀಪಕ್, ಗೋವಿಂದಪ್ಪ ಮಂಜುನಾಥ,, ಬಿ.ಎಸ್.ಶಿವಪ್ರಸಾದ್ ಉಪಸ್ಥಿತರಿದ್ದರು.









