ವಿಟ್ಲ: ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘಕ್ಕೆ ಸತತ ಐದನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪುರಸ್ಕಾರ ಲಭಿಸಿದೆ.
https://chat.whatsapp.com/FCEnlTkAKCC0MGPhXtX4i4
2025-26ನೇ ಆರ್ಥಿಕ ಸಾಲಿನಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘವು ರೂ.1088 ಕೋಟಿ ವ್ಯವಹಾರ, ರೂ.149. 84 ಕೋಟಿ ಠೇವಣಿ, ರೂ.125.63 ಕೋಟಿ ಸಾಲ ಹಾಗೂ ರೂ. 4.04 ಕೋಟಿ ಲಾಭ ಗಳಿಸಿ, ಅಭೂತಪೂರ್ವ ಸಾಧನೆ ಮಾಡಿ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್ ಜಗನ್ನಾಥ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶಾಮ್ ಕೆ ಅವರನ್ನು ಪ್ರಶಸ್ತಿ ನೀಡಿ ಸಭೆಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್, ಸಂಘದ ನಿರ್ದೇಶಕರಾದ ವಿಶ್ವನಾಥ ಎಂ, ದಯಾನಂದ ಆಳ್ವ ಮತ್ತಿತರರು ಉಪಸ್ಥಿತರಿದ್ದರು.



