ಮಂಗಳೂರು: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘವು ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಸತತ ಮೂರನೇ ಬಾರಿ ಈ ಪ್ರಶಸ್ತಿ ನೀಡಲಾಯಿತು. ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷರಾದ ವಸಂತ ಬೆರ್ನಾಡ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಪಂಜ ಅವರಿಗೆ ಪುರಸ್ಕಾರ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಸದಾಶಿವ ಉಳ್ಳಾಲ್ ಮೊದಲಾದವರು ಹಾಜರಿದ್ದರು.



