ಮಂಗಳೂರು: ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ಮಂಗಳೂರು ಸಂಸ್ಥೆಯ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ 2025-26ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನೀಡಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಎಸ್ಸಿಡಿಸಿಸಿ ಬ್ಯಾಂಕ್ ಲಿಮಿಟೆಡ್, ಮಂಗಳೂರು ವತಿಯಿಂದ ನೀಡಲಾಗುವ ಈ ಸಾಧನಾ ಪ್ರಶಸ್ತಿಯನ್ನು ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸತತ ನಾಲ್ಕನೇ ಬಾರಿಗೆ ಪಡೆದುಕೊಂಡಿದೆ.
ಸಂಸ್ಥೆಯ ಉತ್ತಮ ಕಾರ್ಯನಿರ್ವಹಣೆ, ವ್ಯವಹಾರದಲ್ಲಿ ಸಾಧಿಸಿದ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ದೊರೆತ ಈ ಪ್ರಶಸ್ತಿ, ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರ ನಿರಂತರ ಪ್ರಯತ್ನಕ್ಕೆ ಸಂದ ಗೌರವವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಪ್ರತಿನಿಧಿಗಳು ಪ್ರಶಸ್ತಿ ಹಾಗೂ ಪ್ರಮಾಣಪತ್ರವನ್ನು ಸ್ವೀಕರಿಸಿದರು.


