Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    adminBy adminAugust 22, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2025-26” ಪ್ರಶಸ್ತಿಯನ್ನು ದಿನಾಂಕ 22.08.2026 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಿದರು.

    https://chat.whatsapp.com/FCEnlTkAKCC0MGPhXtX4i4

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 35 ಶಾಖೆಗಳನ್ನು ಹೊಂದಿರುವ ಸಂಘವು 2025-26 ನೇ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ. 179.28 ಲಕ್ಷ ಷೇರು ಬಂಡವಾಳ, ರೂ. 30,531.54 ಲಕ್ಷ ಠೇವಣಿಯನ್ನು ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ರೂ. 27,884.33 ಲಕ್ಷ ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ರೂ. 32,317.19 ಲಕ್ಷ ಹೊಂದಿದ್ದು, ರೂ. 308.58 ಲಕ್ಷ ಲಾಭ ಗಳಿಸಿರುತ್ತದೆ.

    ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. ವಾದಿರಾಜ್ ಶೆಟ್ಟಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ಎಸ್.ಬಿ. ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಜೈರಾಜ್ ಬಿ. ರೈ, ಶ್ರೀ ಕುಶಾಲಪ್ಪ ಗೌಡ ಪಿ., ಶ್ರೀ ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಶ್ರೀ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ಶ್ರೀ ರಾಜೇಶ್ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೋಪಾಲಕೃಷ್ಣ ಭಟ್ ಕೆ., ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಹೆಚ್.ಎನ್, ರಮೇಶ್, ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ. ಆರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಪರಮೇಶ್ವರ ಜಿ. ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಗೋಪಾಲ್ ಎಮ್. ಮತ್ತಿತ್ತರರು ಉಪಸ್ಥಿತರಿದ್ದರು.

    ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಎಂಟು ಬಾರಿ `ಉತ್ತಮ ಸಹಕಾರಿ ಸಂಘ’ ರಾಜ್ಯ ಪ್ರಶಸ್ತಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ 10 ವರ್ಷಗಳಿಂದ ಇ-ಸ್ಟಾಂಪಿ0ಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ, ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 10 ವರ್ಷಗಳಿಂದ “ವಿಮಾ ಪ್ರಶಸ್ತಿ”, 2019ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಪೌಂಡೇಶನ್ ನಿಂದ “ಆವಾರ್ಡ್ ಪೋರ್ ಎಕ್ಸ ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ” ರಾಷ್ಟಿಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 11 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಎಂದರೆ ಶೇ. 100 ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಶೇ.95 ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು ಸುಮಾರು 113ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 950ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ ಚಿಕಿತ್ಸಾ ವೆಚ್ಚ ಹಾಗೂ 21,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸಿದೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 12 ವರ್ಷದಿಂದ ಆಯೋಜಿಸಿ ಸುಮಾರು 900 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐ.ಎ.ಎಸ್ / ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದೆ.

     

    Athmashakti Vividhoddesha Sahakara Sangha Chittaranjan Bolar Co Operative ministry Cooperative Department Saadhanaa award
    Previous Articleಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    Related Posts

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026

    ದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ

    August 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.