ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ. 218.48 ಕೋಟಿ ವ್ಯವಹಾರ ನಡೆಸಿ, ರೂ. 51.13 ಲಕ್ಷ ನಿವ್ವಳ ಲಾಭ ಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.36.69 ಲಕ್ಷ ಪಾಲು ಬಂಡವಾಳ ಇದ್ದು ರೂ. 48.10 ಕೋಟಿ ಠೇವಣಿ ಸಂಗ್ರಹವಾಗಿದ್ದು ರೂ. 38.48 ಕೋಟಿ ಸಾಲ ವಿತರಿಸಿದ್ದು ರೂ.54.08 ಕೋಟಿ ದುಡಿಮೆ ಬಂಡವಾಳ ಹೊಂದಿದೆ.
https://chat.whatsapp.com/FCEnlTkAKCC0MGPhXtX4i4
ಭಾನುವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಮಾತನಾಡಿ ಸಂಘದ 2025-26ನೇ ಸಾಲಿನಲ್ಲಿ ಸಂಘದ ಪ್ರಗತಿಯನ್ನು ಹಾಗೂ ಸಂಘವು ಆರ್ಥಿಕ ಸಾಲಿನಲ್ಲಿ ನಡೆಸಿದ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ, ಸಂಘದ ಆಡಳಿತ ನಡೆಸಲು ಅನುವು ಮಾಡಿಕೊಟ್ಟ ಸದಸ್ಯ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಸಂಘವು ಆರ್ಥಿಕ ಸಾಲಿನಲ್ಲಿ 25 ಸಂವತ್ಸರಗಳನ್ನು ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವುದು ಹರ್ಷದಾಯಕವಾಗಿರುತ್ತದೆ. ಈ ಸಸಂಧರ್ಭದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡು ಕಾರ್ಯಚರಿಸಿದ್ದು ಮುಂದಿನ ದಿನಗಳಲ್ಲಿಯು ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲದೇ ಸಂಘದ ಸದಸ್ಯರಿಗೆ ಸದುಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮನೋಭಾವ ಹೊಂದಿರುತ್ತೇವೆ ಎಂದು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಶ್ರೀ ಇವರು 2026-27ನೇ ಸಾಲಿನ ಬಜೆಟ್ ಮಂಡಿಸಿದರು. ಯೋಗೀಶ್ ಸಾಲ್ಯಾನ್ ಇವರು ಮಹಾಸಭೆಯ ನೋಟೀಸನ್ನು ಓದಿ ದಾಖಲಿಸಿದರು. ಶ್ರೀ ದಿನೇಶ್ ಕುಮಾರ್ ವೈ ಇವರು 2025-26ನೇ ಸಾಲಿನ ಬಜೆಟಿಗಿಂತ ಹೆಚ್ಚು ಖರ್ಚಾಗಿರುವುದನ್ನು ಓದಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು. 2025-26ನೇ ಸಾಲಿನಲ್ಲಿ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸಂಘದ 25ನೇ ವರ್ಷದ ಬೆಳ್ಳಿಹಬ್ಬದ ವಾರ್ಷಿಕ ಸಭೆಯಲ್ಲಿ ವಿಶೇಷವಾಗಿ ಕುಕ್ಕುಂದೂರು ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ, ಕುಕ್ಕುಂದೂರು ಗ್ರಾಮ ಪಂಚಾಯತ್‌ನ ಸ್ವಚ್ಛತಾ ಕಾರ್ಯಕರ್ತರಿಗೆ ಹಾಗೂ ಸುದೀರ್ಘ 17 ವರ್ಷಗಳ ಕಾಲ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಕುಮುದಾವತಿ ಇವರನ್ನು ಸನ್ಮಾನಿಸಲಾಯಿತು.

ದೀಪಾ ಎಸ್ ವಾಗ್ಳೆ ಪ್ರಾರ್ಥನೆ ಹಾಡಿದರು. ಸುಷ್ಮಿತಾ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷರಾದ ವೃಷಭರಾಜ್ ಕಡಂಬ ವಂದಿಸಿದರು. ಸಂಘದ ನಿರ್ದೇಶಕರಾದ ಸಂದೀಪ್ ನಾಯಕ್, ತ್ರಿವಿಕ್ರಮ ಕಿಣಿ, ದಿನೇಶ್ ಕುಮಾರ್ ವೈ, ಯೋಗೀಶ್ ಸಾಲ್ಯಾನ್, ಪಾಂಡುರಂಗ ನಾಯಕ್, ಗಣೇಶ್, ಸಂಜೀವ ನಾಯ್ಕ, ಸುಶ್ಮಿತಾ ರಾವ್, ದೀಪಾ ಎಸ್ ವಾಗ್ಳೆ, ಪುಷ್ಪರಾಜ್ ಎಸ್ ಶೆಟ್ಟಿ, ಅನಿಲ್ ಕುಮಾರ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಶ್ರೀ ಉಪಸ್ಥಿತರಿದ್ದರು. ಪ್ರತಿಭಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.










