ಮಂಗಳೂರು: ಮಂಗಳೂರಿನ ಬಿಜೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಆರ್ ಪ್ರಶಸ್ತಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷರಾದ ಭೋಜ ಎಸ್ ಕುಲಾಲ್, ನಿರ್ದೇಶಕರಾದ ವಿಶ್ವನಾಥ ಬಂಗೇರ, ಭೋಜ ಯು ಮೂಲ್ಯ, ಸುರೇಶ್ ಕೆ ಕುಲಾಲ್ ಮತ್ತು ಮೋಹನದಾಸ್ ಬಿ. ಇವರುಗಳು ಪ್ರಶಸ್ತಿ ಸ್ವೀಕರಿಸುವ ವೇಳೆ ಉಪಸ್ಥಿತರಿದ್ದರು.











