ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಗೆ ಒಲಿದ ಮೊದಲ ಗೌರವ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಇವರು ಆಯ್ಕೆಯಾಗಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಗೆ ದೊರಕಿದ ಮೊದಲ ಗೌರವ ಆಗಿದೆ.
https://chat.whatsapp.com/FCEnlTkAKCC0MGPhXtX4i4
ಕ್ರಿಯಾಶೀಲ ನಾಯಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅನ್ನು ಮುನ್ನಡೆಸುತ್ತಿರುವ ಶಶಿಕುಮಾರ್ ರೈ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿದ್ದು, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಪುತ್ತೂರು ಟಿಎಪಿಸಿಎಂಎಸ್ ನಿರ್ದೇಶಕರು ಕೂಡಾ ಆಗಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.


