ಮೂಡುಬಿದಿರೆ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ಮೂಡುಬಿದಿರೆ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಉಚಿತ ವೈದ್ಯಕೀಯ ಶಿಬಿರವು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಡಂಗಲ್ಲು ರಾಣೆಯಾರ್ ಸಭಾಭವನದಲ್ಲಿ ಭಾನುವಾರ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಜನಸ್ನೇಹಿ ಸೇವೆ ನೀಡಿ ಅಲ್ಪಾವಧಿಯಲ್ಲೇ ಪ್ರಗತಿ ಸಾಧಿಸಿದ ಪ್ರಿಯದರ್ಶಿನಿ ಸೊಸೈಟಿ ಸಾಮಾಜಿಕ ಸೇವೆಗಳಲ್ಲೂ ತೊಡಗಿಸಿಕೊಂಡಿರುವುದು ಶ್ಲಾಘನಾರ್ಹ ಕಾರ್ಯ. ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡು ಮಾತನಾಡಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ತನ್ನ ಲಾಭಾಂಶದಲ್ಲಿ ಜನಪರ ಸೇವೆ ಮಾಡುತ್ತಾ ಬಂದಿದೆ. ಮೂಡುಬಿದಿರೆ ಶಾಖೆಯು ಉತ್ತಮ ಅಭಿವೃದ್ಧಿ ಕಾಣುತ್ತಿದ್ದು ಸೊಸೈಟಿಯ ಐದನೇ ಶಾಖೆ ಶೀಘ್ರದಲ್ಲಿ ಉಡುಪಿಯಲ್ಲಿ ಆರಂಭವಾಗಲಿದೆ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಡಾ.ಆಶೀರ್ವಾದ್, ದೇವಾಡಿಗರ ಸುಧಾರಕರ ಸಂಘದ ಅಧ್ಯಕ್ಷ ಪುರಂದರ ದೇವಾಡಿಗ, ಪುರಸಭೆ ಮಾಜಿ ಸದಸ್ಯರಾದ ಕೊರಗಪ್ಪ, ರೂಪಾ ಸಂತೋಷ್ ಶೆಟ್ಟಿ, ಯುವವಾಹಿನಿ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಹೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಜ್ವಲ್ ಕುಲಾಲ್, ರಾಣಿಯಾರ್ ಸಮಾಜ ಸೇವಾ ಸಂಘದ ಅಧ್ಯಕ್ಷ ರಮೇಶ್ ಕೆ.ಎಸ್, ರೈತ ಸಂಘ ಮಾರ್ಪಾಡಿ ಘಟಕದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಸೊಸೈಟಿ ನಿರ್ದೇಶಕರಾದ ಧನಂಜಯ್ ಮಟ್ಟು ಉಪಸ್ಥಿತರಿದ್ದರು. ಸೊಸೈಟಿ ಮ್ಯಾನೇಜರ್ ಅಭಿಷ್ಠಾ ಜೈನ್ ಕಾರ್ಯದರ್ಶಿ ನಿರೂಪಿಸಿದರು. ಸಿಇಒ ಸುದರ್ಶನ್ ವಂದಿಸಿದರು. ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು ಇದರ ಆಡಳಿತ ನಿರ್ದೇಶಕ ಡಾ.ಶಿವಾನಂದ ಪ್ರಭು ನೇತೃತ್ವದ ತಂಡ ಆರೋಗ್ಯ ಶಿಬಿರ ನಡೆಸಿಕೊಟ್ಟಿತು.


