Close Menu
    Top News

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರೈತರ ಒಳಿತಿಗಾಗಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶ್ರಮ
    News

    ರೈತರ ಒಳಿತಿಗಾಗಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶ್ರಮ

    adminBy adminSeptember 7, 2026

    ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ

    ವಿಟ್ಲ: ಸಿಬ್ಬಂದಿಯ ಅರ್ಪಣಾ ಮನೋಭಾವದಿಂದ ಸಂಘವು ಯಶಸ್ವಿಯಾಗಿ ಮುನ್ನಡೆದಿದೆ. ಸೇವೆಯೇ ಸಾಧನೆಯಾಗಬೇಕು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ರೈತರ ಒಳಿತಿಗಾಗಿ ಶ್ರಮಿಸುತ್ತಿದೆ. ಸಹಕಾರಿ ಸಂಘದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

    https://chat.whatsapp.com/FCEnlTkAKCC0MGPhXtX4i4
    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಭಾನುವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಅವರು ಅನುಗ್ರಹ ಸಂದೇಶ ನೀಡಿದರು.
    ಸಾಧ್ವಿ ಶ್ರೀ ಮಾತಾನಂದಮಯೀ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿ, ಗುರುಗಳ ಸಂಕಲ್ಪದಿಂದ ಸಹಕಾರಿ ಸಂಘವು ಅತ್ಯಂತ ವೇಗವಾಗಿ 24 ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ. ಸಮರ್ಥ ನಾಯಕತ್ವದ ಅಧ್ಯಕ್ಷರು, ನಿರ್ದೇಶಕ ಮಂಡಳಿ, ಸಿಇಒ ಮತ್ತು ಸಿಬ್ಬಂದಿಗಳ ಶ್ರಮದಿಂದ ಸಂಘ ಅಭಿವೃದ್ಧಿ ಹೊಂದಿರುವುದು ಸಂತಸವಾಗಿದೆ ಎಂದರು.
    ಸಂಘದ ಅಧ್ಯಕ್ಷ ಸಹಕಾರ ರತ್ನ ಎ. ಸುರೇಶ್ ರೈ ಅಧ್ಯಕ್ಷತೆ ವಹಿಸಿ, ಮಾತನಾಡಿ, ಸಂಘವು 831 ಕೋಟಿ ರೂ. ವ್ಯವಹಾರ ದಾಖಲಿಸಿದೆ. 2025-26ನೇ ಸಾಲಿನಲ್ಲಿ 51,323 ಸದಸ್ಯರಿಂದ 2.53 ಕೋಟಿ ರೂ. ಶೇರು ಮೊತ್ತ ಸಂಗ್ರಹ ಮಾಡಿ, 458.71 ಕೋಟಿ ಠೇವಣಿ ಸಂಗ್ರಹ ಮಾಡಿದೆ. 7.56 ಕೋಟಿ ರೂ. ಲಾಭ ಗಳಿಸಿದ್ದು, ಎ ಗ್ರೇಡ್ ಅರ್ಹತೆ ಪಡೆದಿದೆ. ಸದಸ್ಯರಿಗೆ ಶೇ.21 ಲಾಭಾಂಶ ನೀಡಲಾಗುವುದು. ಮುಂದಿನ ದಿನಗಳಲ್ಲಿ ನೆಲ್ಯಾಡಿ, ಪಂಜ, ಗುತ್ತಿಗಾರು ಮತ್ತು ಮುಡಿಪುಗಳಲ್ಲಿ ಶಾಖೆಗಳನ್ನು ತೆರೆಯಲಿದೆ. ಸೆ.20ರಂದು ಗ್ರಾಮ ವಿಕಾಸ ಯೋಜನೆಯ ಬೆಳ್ಳಿ ಹಬ್ಬದ ಆಚರಣೆ ನಡೆಯಲಿದೆ ಎಂದು ಹೇಳಿದರು.


    ಲೆಕ್ಕಪರಿಶೋಧಕ ಬಾಲಸುಬ್ರಹ್ಮಣ್ಯ ಎನ್., ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಆಡಳಿತ ಮಂಡಳಿಯ ನಿರ್ದೇಶಕರಾದ ವೇಣುಗೋಪಾಲ ಮಾರ್ಲ, ತಾರಾನಾಥ ಶೆಟ್ಟಿ, ಶಾರದಾಮಣಿ, ಸರಿತಾ ಅಶೋಕ್, ಮೋನಪ್ಪ ಪೂಜಾರಿ ಕೆರೆಮನೆ, ಸೋಮಪ್ಪ ನಾಯ್ಕ್‌ ಕಡಬ, ಗಣೇಶ್ ಅತ್ತಾವರ, ಭವಾನಿಶಂಕ‌ರ್, ಅಶೋಕ್ ಕುಮಾರ್‌ ಯು.ಎಸ್, ಜಯಪ್ರಕಾಶ್ ರೈ ನೂಜಿಬೈಲು ಉಪಸ್ಥಿತರಿದ್ದರು.
    ಉತ್ತಮ ನಿರ್ವಹಣೆ ತೋರಿದ ಶಾಖೆ ಮತ್ತು ಶಾಖಾ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಐವರು ಅದೃಷ್ಟವಂತ ಸದಸ್ಯರಿಗೆ ವಿಶೇಷ ಬಹುಮಾನ ನೀಡಲಾಯಿತು. ನಿರ್ದೇಶಕ ಗಣಪತಿ ಭಟ್ ಸೇರಾಜೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ವರದಿ ವಾಚಿಸಿದರು. ನಿರ್ದೇಶಕ ಯು.ದೇವಪ್ಪ ನಾಯಕ್ ಉಪ್ಪಳಿಗೆ ವಂದಿಸಿದರು. ಪುತ್ತೂರು ಶಾಖೆಯ ವ್ಯವಸ್ಥಾಪಕಿ ಪವಿತ್ರ ಪ್ರಸಾದ್ ನಿರೂಪಿಸಿದರು.

    A Suresh Rai dayananda Shetty bakrebail Odiyuru Shree Gurudevadatta Samsthana Odiyuru Shree Gurudevananda Swameeji Odiyuru Shree Vividhoddesha Co Operative Society
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಆರನೇ ಶಾಖೆ ಪದವಿನಂಗಡಿಯಲ್ಲಿ ಉದ್ಘಾಟನೆ
    Next Article ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    Related Posts

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.