ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಬೈಂದೂರು ಕಳೆದ ಸಾಲಿನಲ್ಲಿ ಸುಮಾರು 300 ಕೋಟಿ ರೂ.ಗೂ ಅಧಿಕ ವ್ಯವಹಾರ ನಡೆಸಿ, 80,47,094.07 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಭಾನುವಾರ ನಡೆದ 2025-26ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜಿಲ್ಲೆಯಲ್ಲಿ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರು ಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ, ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಕಳೆದ 17 ವರ್ಷದ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರ ಸ್ಥಾನದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ನಾಗೂರು, ಗೋಳಿಹೊಳೆ, ನಾವುಂದ, ಉಪ್ಪುಂದ, ಮರವಂತೆ, ಕಂಬದಕೋಣೆಯಲ್ಲಿ ಶಾಖೆ ತೆರೆಯಲಾಗಿದ್ದು 300 ಕೋಟಿಗೂ ಅಧಿಕ ವ್ಯವಹಾರ ಹೊಂದಿದ್ದು ಶೇ.13 ಡಿವಿಡೆಂಡ್ ನೀಡಲಾಗುವುದು ಎಂದರು.

ಸೊಸೈಟಿಯ ಉಪಾಧ್ಯಕ್ಷರಾದ ಎಂ.ವಿನಾಯಕ ರಾವ್, ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ, ರಾಮಕೃಷ್ಣಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ, ಪ್ರಶಾಂತ ಪೂಜಾರಿ, ಪುಟ್ಟ ಎಂ.ಬಿಲ್ಲವ, ನಾಗರತ್ನ, ಬೇಬಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಉಪಪ್ರಾಂಶುಪಾಲ ಡಾ| ನಾಗರಾಜ ಪೂಜಾರಿ ಉಪಸ್ಥಿತರಿದ್ದರು. ಶಾಖಾಧಿಕಾರಿ ಸಂತೋಷ ಸ್ವಾಗತಿಸಿದರು. ಸಂಘದ ಪ್ರಭಾರ ಸಿಇಒ ಕಿಟ್ಟಣ್ಣ ರೈ ವಾರ್ಷಿಕ ವರದಿ ಮಂಡಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಕಂಬದಕೋಣೆ ಶಾಖಾಧಿಕಾರಿ ರಾಜೇಂದ್ರ ವಂದಿಸಿದರು. ಶಾಖಾಧಿಕಾರಿಗಳಾದ ರಾಘವೇಂದ್ರ ಪೂಜಾರಿ, ರತಿ ಆರ್.ಪೂಜಾರಿ, ಉಮೇಶ ಸಹಕರಿಸಿದರು.










