ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಲಿ., ಮಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ವಿಶೇಷ ತರಬೇತಿ ಕಾರ್ಯಾಗಾರವು ಸೋಮವಾರ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್ ಮನ್ಮಥ ಕಾರ್ಯಕ್ರಮ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ. ರವಿರಾಜ್ ಹೆಗ್ಡೆ, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವಿಕ್ರಮ್ ಅಡ್ಪಂಗಾಯ, ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ| ರವಿರಾಜ್ ಉಡುಪ, ಉಪವ್ಯವಸ್ಥಾಪಕರಾದ ಡಾ.ಸತೀಶ್ ರಾವ್, ಸಹಕಾರ ಸಂಘಗಳ ನಿವೃತ್ತ ಉಪನಿಬಂಧಕರಾದ ಬಾಲಸುಬ್ರಹ್ಮಣ್ಯ ಕೆ.ಎಸ್, ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಭರತ್ ನೆಕ್ರಾಜೆ ಮುಖ್ಯ ಅತಿಥಿಗಳಾಗಿದ್ದರು. ದ.ಕ. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ವಿಷ್ಣು ಭಟ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ವಂದಿಸಿದರು.


