Close Menu
    Top News

    ಸದಸ್ಯ ಕೇಂದ್ರಿತ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಿ

    October 6, 2026

    ಸತಾರಾ ಡಿಸಿಸಿ ಬ್ಯಾಂಕ್ ಚುನಾವಣೆ: 10 ವರ್ಷಗಳ ನಿರ್ದೇಶಕರ ಅವಧಿ ವಿವಾದಕ್ಕೆ ಹೊಸ ತಿರುವು

    October 6, 2026

    ಸಹಕಾರ ಸ್ವಾಯತ್ತತೆಗೆ ಕರ್ನಾಟಕದ ಸೌಹಾರ್ದ ಚಳವಳಿ ಮಾದರಿ

    October 5, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸದಸ್ಯ ಕೇಂದ್ರಿತ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಿ
    News

    ಸದಸ್ಯ ಕೇಂದ್ರಿತ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಿ

    adminBy adminOctober 6, 2026

    ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸಲಹೆ

    ಉಡುಪಿ: ಸಹಕಾರ ಸಂಸ್ಥೆಗಳ ಯಶಸ್ಸಿನಲ್ಲಿ ವೃತ್ತಿಪರತೆ, ಪಾರದರ್ಶಕ ಆಡಳಿತ, ಆಧುನಿಕ ನಿರ್ವಹಣಾ ಕೌಶಲ್ಯ ಹಾಗೂ ಮಾನವ ಸಂಪನ್ಮೂಲಗಳ ಸಮರ್ಪಕ ಬಳಕೆಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಸಹಕಾರ ಸಂಸ್ಥೆಗಳು ತಂತ್ರಜ್ಞಾನ ಮತ್ತು ಜ್ಞಾನಾಧಾರಿತ ಕಾರ್ಯವೈಖರಿಯನ್ನು ಅಳವಡಿಸಿಕೊಂಡು ಸದಸ್ಯ ಕೇಂದ್ರಿತ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಬೇಕು ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸಲಹೆ ನೀಡಿದರು.

    https://chat.whatsapp.com/FCEnlTkAKCC0MGPhXtX4i4
    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಸಹಕಾರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ತರಬೇತುದಾರರಾಗಿ ಭಾಗವಹಿಸಿದ್ದ ಶಿವಮೊಗ್ಗದ ಸನ್ನದು ಲೆಕ್ಕಪರಿಶೋಧಕರಾದ ವರುಣ್ ಭಟ್ ಮಾತನಾಡಿ, ಸಹಕಾರಿಗಳಲ್ಲಿ ವೃತ್ತಿಪರತೆ ಮತ್ತು ವ್ಯವಹಾರಗಳ ಅಭಿವೃದ್ಧಿಗಾಗಿ ಅದರ ಬಳಕೆ ಹಾಗೂ ಮಾನವ ಸಂಪನ್ಮೂಲಗಳು, ಅವುಗಳ ಬಳಕೆ ಹಾಗೂ ಅಭಿವೃದ್ಧಿ ಎಂಬ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡಿ, ಸಂಸ್ಥೆಗಳ ಬೆಳವಣಿಗೆಯಲ್ಲಿ ವೃತ್ತಿಪರ ನಿರ್ವಹಣೆ ಮತ್ತು ಸಿಬ್ಬಂದಿಯ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ವಿವರಿಸಿದರು.


    ಗಾಂಧಿ ಜಯಂತಿಯ ಅಂಗವಾಗಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಖಾದಿ ನೂಲಿನ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಬಿ.ಜಯಕರ ಶೆಟ್ಟಿ ಇಂದ್ರಾಳಿಯವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನಾದರ್ಶಗಳನ್ನು ಸ್ಮರಿಸಿ, ಸತ್ಯ, ಸರಳತೆ, ಸ್ವಾವಲಂಬನೆ, ಶಿಸ್ತು ಮತ್ತು ಸಮಾಜಮುಖಿ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.
    ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಲೆಕ್ಕಿಗರಾದ ಅಶ್ವಿನಿ ಕುಮಾರ್ ಎಂ, ಆಡಳಿತ ಮಂಡಳಿಯ ನಿರ್ದೇಶಕರಾದ ಸಾಧು ಸಾಲ್ಯಾನ್, ಎಲ್.ಉಮಾನಾಥ್, ಜಯಾ ಶೆಟ್ಟಿ ಹಾಗೂ ಸದಾಶಿವ ನಾಯ್ಕ್ ಉಪಸ್ಥಿತರಿದ್ದರು. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಲ್ಪೆ ಶಾಖೆಯ ವ್ಯವಸ್ಥಾಪಕರಾದ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರೆ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ವಂದಿಸಿದರು.

     

    B.Jayakara Shetty Indrali Badagabettu Credit Co Operative Society Banking Co Operative ministry Cooperative Cooperative Department Cooperative Registrar Gandhi Jayanthi
    Previous Articleಸತಾರಾ ಡಿಸಿಸಿ ಬ್ಯಾಂಕ್ ಚುನಾವಣೆ: 10 ವರ್ಷಗಳ ನಿರ್ದೇಶಕರ ಅವಧಿ ವಿವಾದಕ್ಕೆ ಹೊಸ ತಿರುವು

    Related Posts

    ಸತಾರಾ ಡಿಸಿಸಿ ಬ್ಯಾಂಕ್ ಚುನಾವಣೆ: 10 ವರ್ಷಗಳ ನಿರ್ದೇಶಕರ ಅವಧಿ ವಿವಾದಕ್ಕೆ ಹೊಸ ತಿರುವು

    October 6, 2026

    ಸಹಕಾರ ಸ್ವಾಯತ್ತತೆಗೆ ಕರ್ನಾಟಕದ ಸೌಹಾರ್ದ ಚಳವಳಿ ಮಾದರಿ

    October 5, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯಿಂದ ಉತ್ತಮ ಸೇವೆ

    October 5, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸದಸ್ಯ ಕೇಂದ್ರಿತ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಿ

    October 6, 2026

    ಸತಾರಾ ಡಿಸಿಸಿ ಬ್ಯಾಂಕ್ ಚುನಾವಣೆ: 10 ವರ್ಷಗಳ ನಿರ್ದೇಶಕರ ಅವಧಿ ವಿವಾದಕ್ಕೆ ಹೊಸ ತಿರುವು

    October 6, 2026

    ಸಹಕಾರ ಸ್ವಾಯತ್ತತೆಗೆ ಕರ್ನಾಟಕದ ಸೌಹಾರ್ದ ಚಳವಳಿ ಮಾದರಿ

    October 5, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.