ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 22ನೇ ಹವಾನಿಯಂತ್ರಿತ ನೂತನ ಶಾಖೆ ಕಾಪುವಿನಲ್ಲಿ ಅಕ್ಟೋಬರ್ 21ರಂದು ಬುಧವಾರ ಶುಭಾರಂಭಗೊಳ್ಳಲಿದೆ.
https://chat.whatsapp.com/FCEnlTkAKCC0MGPhXtX4i4
ಕಾಪುವಿನ ಮಂಜುಶ್ರೀ ಎನ್ಕ್ಲೇವ್ನ ಮೊದಲನೇ ಮಹಡಿಯಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಕಾಪು ಬಂಟರ ಸಂಘದ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ದೀಪ ಪ್ವಜ್ವಲನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ಬಿಲ್ಲವರ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು, ಕಾಪು ಮೊಗವೀರ ಮಹಾಸಭಾದ ಅಧ್ಯಕ್ಷರಾದ ಸುಜಿತ್ ಕುಮಾರ್, ಕಾಪು ಪೊಲಿಪು ಜಾಮಿಯಾ ಮಸೀದಿಯ ಅಧ್ಯಕ್ಷರಾದ ಶೇಖ್ ನಜೀರ್ ಅಹಮದ್, ಮಂಜುಶ್ರೀ ಎನ್ಕ್ಲೇವ್ ಕಟ್ಟಡದ ಮಾಲೀಕರಾದ ಪ್ರಸಾದ್ ಎಸ್.ಕಾಮತ್ ಭಾಗವಹಿಸಲಿದ್ದಾರೆ.

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೋರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಎಸ್.ಜಯರಾಮ್ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಎಚ್., ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ. “ಸಾಧನಾ”, ಕೃಷ್ಣ ರೈ ಟಿ., ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ ಪಾಡ್ಯಾರು, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ “ನವಶಕ್ತಿ”, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ, ಶಾಖಾ ಪ್ರಬಂಧಕರಾದ ಬಿ.ಬಾಲಕೃಷ್ಣ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.


