ಮರೋಳಿಯಲ್ಲಿ 116ನೇ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ಗಣೇಶ್ ಶೆಟ್ಟಿ ಗುಡ್ಡೆಗುತ್ತು ಅಭಿಪ್ರಾಯ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡೀಲ್ ಶಾಖೆಯ ವತಿಯಿಂದ 116ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಹಾಗೂ ರಕ್ತದಾನ ಶಿಬಿರವು ಹಿಂದೂ ಯುವಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ ಹಾಗೂ ಗ್ರಾಮ ಸಮಿತಿ ಮರೋಳಿ, ಟೀಮ್ ಮರೋಳಿ, ಶ್ರೀ ರಾಮ ಭಜನಾ ಮಂದಿರ, ಮರೋಳಿ ಮತ್ತು ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರ ಜಂಟಿ ಸಹಯೋಗದಲ್ಲಿ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸೂರ್ಯರಶ್ಮಿ ಸಭಾಂಗಣದಲ್ಲಿ ಜರುಗಿತು.
https://chat.whatsapp.com/FCEnlTkAKCC0MGPhXtX4i4
ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಗುಡ್ಡೆಗುತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವ ಹಾಗೂ ಆಡಳಿತ ಮಂಡಳಿಯ ಮಾರ್ಗದರ್ಶನದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಿ, ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಜನಸಾಮಾನ್ಯರಿಗೆ ತುಂಬಾ ಅನುಕೂಲಕರವಾಗಿದೆ. ಸಂಘದ ಈ ಕಾರ್ಯವು ಶ್ಲಾಘನೀಯ. ಈ ಶಿಬಿರದಲ್ಲಿ ಅನೇಕ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಹಿಂದೂ ಯುವಸೇನೆ ಕೆಂದ್ರೀಯ ಮಂಡಳಿಯ ಅಧ್ಯಕ್ಷರಾದ ಯಶೋಧರ ಚೌಟ ಮಾತನಾಡಿ, “ಹಿಂದೂ ಯುವಸೇನೆಯು ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಚಟುವಟಿಕೆ ಮಾಡುವ ಮುಖಾಂತರ ಜನರ ಮನ್ನಣೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಹಾಗೂ ಆಡಳಿತ ಮಂಡಳಿಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬರುತ್ತಿದೆ ಎಂದರು.


ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬಡವರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಮುಂದೆಯೂ ಆರೋಗ್ಯ ಸೇವೆಯಲ್ಲಿ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರ ನೀಡುತ್ತದೆ ಎಂದು ತಿಳಿಸಿದರು. ಈ ಶಿಬಿರ ಏರ್ಪಡಿಸಲು ಸಹಕರಿಸುತ್ತಿರುವ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇವರ ನುರಿತ ವೈದ್ಯರ ತಂಡದವರಿಗೆ, ಇದರ ಆಡಳಿತ ವರ್ಗ, ಹಾಗೂ ಸಿಬ್ಬಂದಿ ವರ್ಗದವರಿಗೂ, ಈ ಶಿಬಿರದಲ್ಲಿ ಉಚಿತ ಕನ್ನಡಕ ವಿತರಿಸುತ್ತಿರುವ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ಸರ್ವ ಪದಾಧಿಕಾರಿಗಳಿಗೂ, ರಕ್ತದಾನ ಶಿಬಿರ ಹಾಗೂ ಆರೋಗ್ಯ ಶಿಬಿರವನ್ನು ಆಯೋಜಿಸಲು ಸಂಪೂರ್ಣ ಸಹಕಾರ ನೀಡಿರುವ ಹಿಂದೂ ಯುವ ಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ, ಗ್ರಾಮ ಸಮಿತಿ ಮರೋಳಿ, ಟೀಮ್ ಮರೋಳಿ, ಶ್ರೀ ರಾಮ ಭಜನಾ ಮಂದಿರ, ಮರೋಳಿ ಇದರ ಎಲ್ಲಾ ಪದಾಧಿಕಾರಿಗಳಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಯುವ ಯಕ್ಷಗಾನ ಕಲಾವಿದೆ ಯಕ್ಷಪ್ರಿಯೆ ಆರ್ಷಿಯಾ ಖಾನ್ ಇವರನ್ನು ಗೌರವಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಕಾರ್ಫೊರೇಟರ್ ಕೇಶವ ಮರೋಳಿ, ಲಯನ್ಸ್ ಜಿಲ್ಲೆ ೩೧೭ಡಿ ಇದರ ನಿಕಟಪೂರ್ವ ವಲಯ ಅಧ್ಯಕ್ಷರಾದ ಲಯನ್ ಶೀನ ಪೂಜಾರಿ. ಲಯನ್ಸ್ ಮಂಗಳೂರು ಆದಿತ್ಯ ಇದರ ಕೋಶಾಧಿಕಾರಿ ಲಯನ್ ಮೈತ್ರೇಯ, ಹಿಂದೂ ಯುವ ಸೇನೆ ಸೂರ್ಯನಾರಾಯಣ ಶಾಖೆಯ ಅಧ್ಯಕ್ಷರಾದ ಲಿಖಿನ್ ಶೆಟ್ಟಿ ಮರೋಳಿ, ಗ್ರಾಮ ಸಮಿತಿ ಮರೋಳಿ ಅಧ್ಯಕ್ಷರಾದ ವಾಸುದೇವ ಮರೋಳಿ, ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ರುಕ್ಮಯ ದೇವಾಡಿಗ, ಆಸ್ಪತ್ರೆ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಇದರ ಕಣ್ಣಿನ ತಜ್ಞರಾದ ಡಾ| ರೋಶನ್ ,ಆಸ್ಪತ್ರೆ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇದರ ಪ್ರಾಧ್ಯಾಪಕರಾದ ಡಾ| ಚಿರಾಗ್, ಆಸ್ಪತ್ರೆ ಎ.ಜೆ ರಕ್ತನಿಧಿ ಇದರ ಮ್ಯಾನೇಜರ್ ಗೋಪಾಲಕೃಷ್ಣ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಮಾರು ೨೫೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಕನ್ನಡಕ ವಿತರಣೆ, ದಂತ ತಪಾಸಣೆ, ರಕ್ತದಾನ ಶಿಬಿರ ಹಾಗೂ ನೇತ್ರ ತಪಾಸಣೆ ನಡೆಸಲಾಯಿತು. ಮಾಲತಿ ಅರುಣ್ ಶೆಟ್ಟಿ ಸ್ವಾಗತಿಸಿ, ಮನೋಹರ್ ವಂದಿಸಿದರು. ಭಾಸ್ಕರ್ ಮರೋಳಿ ಕಾರ್ಯಕ್ರಮ ನಿರೂಪಿಸಿದರು.


