ಶಿರ್ವ: ಗ್ರಾಹಕರ ವಿಶ್ವಾಸ ಗಳಿಸಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ದ್ವಿತೀಯ ಶಾಖೆಯು ಅಕ್ಟೋಬರ್ 31ರಂದು ಶಿರ್ವ ಮುಖ್ಯ ರಸ್ತೆಯ ಬೆಹರೈನ್ ಟವರ್ಸ್ ನೆಲಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ.
https://chat.whatsapp.com/FCEnlTkAKCC0MGPhXtX4i4
ಉಡುಪಿಯ ಕುಂಜಿಬೆಟ್ಟುವಿನಲ್ಲಿ ಪ್ರಧಾನ ಶಾಖೆ ಹಾಗೂ ಪ್ರಥಮ ಶಾಖೆಯನ್ನು ಹೊಂದಿರುವ ಈ ಸೊಸೈಟಿಯು ತನ್ನ ಸೇವಾವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಶಿರ್ವದಲ್ಲಿ ನೂತನ ಶಾಖೆಯನ್ನು ಆರಂಭಿಸುತ್ತಿದೆ. ಕೇವಲ ಮೂರು ವರ್ಷಗಳ ಹಿಂದೆ ಆರಂಭಗೊಂಡಿರುವ ಸೊಸೈಟಿಯು ಗ್ರಾಹಕರ ವಿಶ್ವಾಸದೊಂದಿಗೆ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಶಿರ್ವದಲ್ಲಿ ಎರಡನೇ ಶಾಖೆಯ ಉದ್ಘಾಟನೆಯೊಂದಿಗೆ ಸೊಸೈಟಿಯ ಸೇವೆಗಳು ಮತ್ತಷ್ಟು ಜನರಿಗೆ ತಲುಪಲಿವೆ ಎಂಬ ನಿರೀಕ್ಷೆಯಿದೆ.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೂತನ ಶಾಖೆ ಉದ್ಘಾಟಿಸಲಿದ್ದು, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ವಂ.ಫಾ. ಚಾರ್ಲ್ ಮಿನೇಜಸ್ ಆಶೀರ್ವಚನ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋ-ಆಪರೇಟಿವ್, ಬೆಂಗಳೂರು ಇದರ ನಿರ್ದೇಶಕ ಮಂಜುನಾಥ್ ಎಸ್. ಕೆ., ಕೇರಳದ ಡಿವೈನ್ ರಿಟ್ರೇಟ್ ಸೆಂಟರ್ ಧರ್ಮಗುರು ಫಾ.ರಿಚಡ್೯ ಕ್ವಾಡ್ರಸ್, ಉಡುಪಿ ಜಿಲ್ಲಾ ಸೌಹಾರ್ದ ಕೋ-ಆಪರೇಟಿವ್ ಯೂನಿಯನ್ ಅಧ್ಯಕ್ಷ ಪಿ.ಜಗನ್ನಾಥ ಶೆಟ್ಟಿ, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ಮೆಲ್ವಿನ್ ಆರಾನ್ನ, ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್. ಹಾಗೂ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸೊಸೈಟಿಯ ನಿರ್ದೇಶಕ ಮಂಡಳಿಯ ಮಾರ್ಗದರ್ಶನ, ಸಿಬ್ಬಂದಿಯ ಅವಿರತ ಪರಿಶ್ರಮ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೀವನ್ ಡಿಸೋಜ ಅವರ ಸಹಕಾರಿ ಕ್ಷೇತ್ರದ ಅನುಭವ ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಸೊಸೈಟಿ ಮೆಚ್ಚುಗೆ ಗಳಿಸಿದೆ. ಇದೇ ಬೆಳವಣಿಗೆಯ ಹಾದಿಯಲ್ಲಿ ಸಂಸ್ಥೆಯ ಮೂರನೇ ಶಾಖೆಯು ನವೆಂಬರ್ ತಿಂಗಳಲ್ಲಿ ಪೆರಂಪಳ್ಳಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೀವನ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








