ಮೂಲ್ಕಿ ತಾಲೂಕು ಪಂಚಾಯತ್ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆಲ್ವಿನ್ ಕ್ಲೆಮೆಂಟ್ ಕುಟಿನ್ಹೊ ಆಶಯ
ಮೂಲ್ಕಿ: ಯಾವುದೇ ಸಂಸ್ಥೆ ಅಥವಾ ಸೊಸೈಟಿಯನ್ನು ಪ್ರಾರಂಭಿಸುವುದು ಸುಲಭ. ಆದರೆ ಪ್ರಿಯದರ್ಶಿನಿ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಉತ್ತಮ ರೀತಿಯಲ್ಲಿ ಮುಂದುವರಿಯಲು ಕಾರಣಕರ್ತರಾದ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಈ ಸೊಸೈಟಿಯು ಇನ್ನೂ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಿ ಸಹಕಾರಿ ರಂಗದಲ್ಲಿ ಉತ್ತಮ ಹೆಸರು ಪಡೆಯುವಂತಾಗಲಿ ಎಂದು ಮೂಲ್ಕಿ ತಾಲೂಕು ಪಂಚಾಯತ್ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಆಲ್ವಿನ್ ಕ್ಲೆಮೆಂಟ್ ಕುಟಿನ್ಹೊ ಆಶಯ ವ್ಯಕ್ತಪಡಿಸಿದರು.
https://chat.whatsapp.com/FCEnlTkAKCC0MGPhXtX4i4
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ ಆಶ್ರಯದಲ್ಲಿ ಸಹಕಾರ ಸಪ್ತಾಹ 2026ರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಹಕಾರ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪಡುಪಣಂಬೂರು ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ನಿ ಹಳೆಯಂಗಡಿ ಇದರ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಬಿ.ರತ್ನಾಕರ ಯಾನೆ ಕಾಂತಣ್ಣ ಗುರಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕೋಳಿ ಮಾರಾಟಗಾರರ ಸಹಕಾರ ಸಂಘ ನಿ ಮಂಗಳೂರು ಇದರ ನಿರ್ದೇಶಕ ಹಾಗೂ ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ನಿ ಹಳೆಯಂಗಡಿ ಇದರ ಮಾಜಿ ನಿರ್ದೇಶಕ ವಿನೋದ್ ಸಾಲ್ಯಾನ್, ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಹಳೆಯಂಗಡಿ ಇದರ ನಿವೃತ್ತ ಅಧಿಕಾರಿ ಸುಮಂಗಲಾ ಭಟ್ ಅವರನ್ನು ಸೊಸೈಟಿ ಪರವಾಗಿ ಗೌರವಿಸಲಾಯಿತು.


ಮುಖ್ಯ ಅತಿಥಿಗಳಾಗಿ ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಜೀವ ಮೂಲ್ಯ, ಮತ್ತು ಪಡುಪಣಂಬೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಜಾತಾ ಸಾಂದರ್ಭಿಕವಾಗಿ ಮಾತನಾಡಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ ಇದರ ಉಪಾಧ್ಯಕ್ಷ ವಿಜಯಕುಮಾರ್ ಸನಿಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಧನಂಜಯ ಮಟ್ಟು, ಉಮಾನಾಥ ಜೆ ಶೆಟ್ಟಿಗಾರ್ ಉಪಸ್ಥಿತರಿದ್ದರು. ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ಸ್ವಾಗತಿಸಿದರು, ಶಾಖಾ ಪ್ರಬಂಧಕರಾದ ಪ್ರಜ್ಞಾಶ್ರೀ ವಂದಿಸಿದರು. ಲೆಕ್ಕಿಗರಾದ ಲೋಲಾಕ್ಷಿ, ಸಾಲ ವಿಭಾಗದ ಹಿರಿಯ ವ್ಯವಸ್ಥಾಪಕರಾದ ಮೋಹನ್ದಾಸ್ ಸಹಕರಿಸಿದರು.











