Close Menu
    Top News

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ

    November 17, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪುನರಾಯ್ಕೆ

    November 17, 2026

    ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ ಆಯ್ಕೆ 

    November 17, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಉತ್ತಮ ಕೃಷಿ ಪತ್ತಿನ ಸಹಕಾರ ಸಂಘ ಪ್ರಶಸ್ತಿ
    News

    ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಉತ್ತಮ ಕೃಷಿ ಪತ್ತಿನ ಸಹಕಾರ ಸಂಘ ಪ್ರಶಸ್ತಿ

    adminBy adminNovember 17, 2026

    ಮಂಗಳೂರು: ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ ನೀಡಲಾಗುವ ಉತ್ತಮ ಸಹಕಾರ ಸಂಘ ಪ್ರಶಸ್ತಿಯ ಪೈಕಿ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲೊಂದಾದ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘವು ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಕೃಷಿ ಪತ್ತಿನ ಸಹಕಾರ ಸಂಘ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    https://chat.whatsapp.com/FCEnlTkAKCC0MGPhXtX4i4
    1956ರಲ್ಲಿ ಕಾವೂರಿನಲ್ಲಿ ಆರಂಭವಾಗಿ ಕಾವೂರು, ಪಂಜಿಮೊಗರು, ದೇರೆಬೈಲ್, ಬೋಳೂರು, ಕುಂಜತ್‌ಬೈಲ್, ಪಡುಕೋಡಿ, ಬಂಗ್ರಕೂಳೂರು ಗ್ರಾಮಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘವು 2006ರಲ್ಲಿ ಸುವರ್ಣ ಮಹೋತ್ಸವ ಆಚರಿಸಿದೆ. ವ್ಯವಸಾಯ ಉತ್ಪಾದನೆ ಹೆಚ್ಚಿಸಲು ಅಲ್ಪಾವಧಿ, ಮದ್ಯಮಾವಧಿ ಸಾಲಗಳನ್ನು ಸದಸ್ಯರಿಗೆ ಪೂರೈಸುವುದು, ಸಾಲ ವಿತರಿಸುವಾಗ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪ್ರಾಮುಖ್ಯತೆ ಕೊಡುವುದು ಸಂಸ್ಥೆಯ ಪ್ರಮುಖ ಉದ್ದೇಶಗಳಲ್ಲಿ ಒಂದು. ಸದಸ್ಯರಿಗೆ ಅಗತ್ಯ ವ್ಯವಸಾಯ ಸಾಮಗ್ರಿಗಳು, ಬಿತ್ತನೆ ಬೀಜ, ರಸಗೊಬ್ಬರಗಳು, ಕ್ರಿಮಿನಾಶಕಗಳನ್ನು ಪೂರೈಸುವುದು, ಸದಸ್ಯರು ಮತ್ತು ಸದಸ್ಯೇತರರಿಂದ ಠೇವಣಿ ಸ್ವೀಕಾರ, ಸದಸ್ಯರ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಮತ್ತು ಮೇಲ್ಕಾಣಿಸಿದ ಉದ್ದೇಶಗಳಿಗೊಳಪಟ್ಟು ಕಾರ್ಯ ರೂಪಿಸುವುದು ಸಂಘದ ಮುಖ್ಯ ಚಿಂತನೆಗಳು. ಸಂಘದ ಕೇಂದ್ರ ಕಚೇರಿ ಕಾವೂರಿನಲ್ಲಿದ್ದು, 2025-26ನೇ ಸಾಲಿನಲ್ಲಿ 2.84 ಕೋಟಿ ರೂಪಾಯಿ ಲಾಭ ಗಳಿಸಿದೆ. ಪ್ರಸಕ್ತ ಸಾಲಿನಲ್ಲಿ ಶೇ.18 ಡಿವಿಡೆಂಡ್‌ ನೀಡಲಾಗಿದೆ.

    ಕ್ರಿಯಾಶೀಲ ಆಡಳಿತ ಮಂಡಳಿ
    ಕ್ರಿಯಾಶೀಲ ಆಡಳಿತ ಮಂಡಳಿಯ ಮೂಲಕ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಉತ್ತಮ ಕಾರ್ಯನಿರ್ವಹಣೆಗಾಗಿ ಸತತ ಮೂರನೇ ಬಾರಿ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪುರಸ್ಕಾರಕ್ಕೆ ಪಾತ್ರವಾಗುತ್ತಿದೆ. ಕಳೆದೆರಡು ವರ್ಷಗಳಲ್ಲಿ ಉತ್ತಮ ಆಡಳಿತಾತ್ಮಕ ಸಹಕಾರ ಸಂಘ ಪುರಸ್ಕಾರಕ್ಕೆ ಭಾಜನವಾಗಿದ್ದರೆ ಈ ಬಾರಿ ಉತ್ತಮ ಕೃಷಿ ಪತ್ತಿನ ಸಹಕಾರ ಸಂಘ ಪುರಸ್ಕಾರಕ್ಕೆ ಭಾಜನವಾಗಿದೆ. ಪ್ರಸ್ತುತ ಎ.ಲೋಕೇಶ್‌ ಭಂಡಾರಿಯವರು ಸಂಘದ ಅಧ್ಯಕ್ಷರಾಗಿಯೂ, ಎಸ್‌.ಧನಂಜಯ ಬಂಗೇರ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ನಿರ್ದೇಶಕರಾಗಿ ಪ್ರೇಮಾ, ಸುಮಂತ್‌ ರಾವ್‌, ನೇಮಿರಾಜ ಶೆಟ್ಟಿ, ಮೇಘರಾಜ ಆರ್‌.ಜೈನ್‌, ಶ್ರೀರಂಜಿನಿ, ಸೀತೇಶ್‌ ಕೊಂಡೆ, ಗಣೇಶ್‌ ಶೆಟ್ಟಿ, ಶರ್ಮಿಳಾ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿಯಾಗಿ ಕಿರಣ್‌ ಕುಮಾರ್‌ ಶೆಟ್ಟಿ ಅವರಿದ್ದಾರೆ. ಪ್ರೀತಮ್‌ ಪೂಜಾರಿಯವರು ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಪಭಾರ) ಕಾರ್ಯನಿರ್ವಹಿಸುತ್ತಿದ್ದಾರೆ.

    * ಸಂಘದ ಕಾರ್ಯಕ್ಷೇತ್ರದಲ್ಲಿರುವ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಾಲೆಯ ಶುಲ್ಕ ಪಾವತಿಸಲಾಗುತ್ತಿದೆ.
    * ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮನೆ ಕುಸಿತ, ಬೆಂಕಿ ಅನಾಹುತ ಸಂಭವಿಸಿದಲ್ಲಿ ಸದಸ್ಯರ ಕ್ಷೇಮನಿಧಿಯಿಂದ ಧನಸಹಾಯ ನೀಡಲಾಗುತ್ತಿದೆ.
    * ಆರ್ಥಿಕವಾಗಿ ಹಿಂದುಳಿದ ಸದಸ್ಯರು ಆಕಸ್ಮಿಕವಾಗಿ ಮೃತಪಟ್ಟಲ್ಲಿ ಅಂಥ ಕುಟುಂಬದ ಅವಲಂಬಿತರಿಗೆ ರೂ. 5,000 ಪರಿಹಾರ ನೀಡಲಾಗುತ್ತಿದೆ.
    * ಸರಕಾರದ ಯೋಜನೆಗಳಾದ ಸಾರ್ವಜನಿಕ ಪಡಿತರ ಸಾಮಗ್ರಿಗಳ ವಿತರಣೆ ವ್ಯವಸ್ಥೆ, ರೈತರಿಗೆ ಬೇಕಾಗುವ ಎಲ್ಲ ರೀತಿಯ ಕೃಷಿ ಉಪಕರಣಗಳನ್ನು ಒದಗಿಸಲಾಗುತ್ತದೆ.
    * ಸಂಘದ ಕಾರ್ಯಕ್ಷೇತ್ರದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿದ್ಯಾಸಂಸ್ಥೆಗಳಿಗೆ ದೇಣಿಗೆ ನೀಡಲಾಗುತ್ತಿದೆ.
    * ರ‍್ಯಾಂಕ್ ವಿಜೇತರಿಗೆ ಬಹುಮಾನ ಹಾಗೂ ಇತರ ಸಾರ್ವಜನಿಕ ಸಂಸ್ಥೆಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮಗಳನ್ನು ಪ್ರತಿವರ್ಷ ಕೈಗೊಳ್ಳಲಾಗುತ್ತದೆ.
    * ಸದಸ್ಯರಿಗೆ ಅನುಕೂಲವಾಗುವಂತೆ ಸಂಘದ ಸಭಾಂಗಣವನ್ನು ಮದುವೆ ಮತ್ತು ಇತರ ಸಮಾರಂಭಗಳಿಗೆ ಕಡಿಮೆ ಬಾಡಿಗೆಯಲ್ಲಿ ನೀಡಲಾಗುತ್ತಿದೆ.
    * ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದೆ.
    * ಸರ್ಕಾರ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಸದಸ್ಯರಿಗೆ ಅನುಕೂಲವಾಗುವಂತೆ ಅನುಷ್ಠಾನಗೊಳಿಸಿ ಸದಸ್ಯರನ್ನು ನೋಂದಾಯಿಸಲಾಗಿದೆ. ಇದರಲ್ಲಿ ಹಲವಾರು ಸದಸ್ಯರು ವಿಮಾ ಯೋಜನೆಯ ಪ್ರಯೋಜನ ಪಡೆದಿದ್ದಾರೆ.

    Banking Co Operative ministry Cooperative Cooperative Department Cooperative Registrar Kavooru Vyavasay Seva Sahakari Sangha Uttama Krushi Patthina Sahakara Sangha Prashasti
    Previous Articleಎಸ್.ಕೆ ಗೋಲ್ಡ್ ಸ್ಮಿತ್ಸ್, ಒಡಿಯೂರು, ಕಾವೂರು ಸೊಸೈಟಿಗಳಿಗೆ ಪುರಸ್ಕಾರ
    Next Article ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ ಆಯ್ಕೆ 

    Related Posts

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ

    November 17, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪುನರಾಯ್ಕೆ

    November 17, 2026

    ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ ಆಯ್ಕೆ 

    November 17, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ

    November 17, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪುನರಾಯ್ಕೆ

    November 17, 2026

    ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ ಆಯ್ಕೆ 

    November 17, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.