Close Menu
    Top News

    ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಮೃತ ಮಹೋತ್ಸವ ಆಚರಣೆ ಅರ್ಥಪೂರ್ಣ ಕಾರ್ಯಕ್ರಮ

    November 19, 2026

    ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    November 18, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    November 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಮೃತ ಮಹೋತ್ಸವ ಆಚರಣೆ ಅರ್ಥಪೂರ್ಣ ಕಾರ್ಯಕ್ರಮ
    News

    ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಮೃತ ಮಹೋತ್ಸವ ಆಚರಣೆ ಅರ್ಥಪೂರ್ಣ ಕಾರ್ಯಕ್ರಮ

    adminBy adminNovember 19, 2026

    ಸಹಕಾರ ಸಚಿವ ಲಕ್ಷ್ಮಣ ಸವದಿ ಅಭಿಪ್ರಾಯ

    ಬೆಳ್ತಂಗಡಿ: ಗ್ರಾಮೀಣ ಪ್ರದೇಶದಲ್ಲಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 75 ವರ್ಷಗಳ ನಿರಂತರ ಸಾಧನೆಯ ಮೂಲಕ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸುತ್ತಿರುವುದು ಅರ್ಥಪೂರ್ಣ. ಆಡಳಿತ  ಮಂಡಳಿ ಮತ್ತು ಸಿಬ್ಬಂದಿ ಪಾರದರ್ಶಕವಾಗಿ ಕಾರ್ಯನಿರ್ವಹಿಸಿದರೆ ಸಂಘವು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘು ಯಶಸ್ವಿಯಾಗಿ ಆಚರಿಸಲಿ ಎಂದು ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಹಾರೈಸಿದರು.

    https://chat.whatsapp.com/FCEnlTkAKCC0MGPhXtX4i4

    ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಚೇರಿ ಪಾಂಚಜನ್ಯದ ಆವರಣದಲ್ಲಿ ಬುಧವಾರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ, ನೂತನ ಸಂಗ ಸಭಾಭವನ ಮತ್ತು ಗೋದಾಮು ಕಟ್ಟಡದ ಉದ್ಘಾಟನೆ ಹಾಗೂ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಹಕಾರ ಸಂಘಗಳ ಮೂಲಕ ವಿದ್ಯಾವಂತ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆರು ತಿಂಗಳ ತರಬೇತಿ ನೀಡಿ ಬಳಿಕ ಸಹಕಾರ ಸಂಘಗಳ ಲೆಕ್ಕಪರಿಶೋಧನೆಯ ಕಾರ್ಯದಲ್ಲಿ ಅವರನ್ನು ತೊಡಗಿಸಿಕೊಳ್ಳುವ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

    ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಮಾತನಾಡಿ, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಗ್ರಾಮೀಣ ಪ್ರದೇಶದಲ್ಲಿದ್ದರೂ ಉತ್ತಮ ಬೆಳವಣಿಗೆ ಕಂಡಿದ್ದು, ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿದ್ದು ಸಾಲ ಮರುಪಾವತಿಯಲ್ಲಿಯೂ ಮಹಿಳೆಯರು ಶಿಸ್ತು ತೋರಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಹಕಾರವೇ ಮುಖ್ಯ. ಇಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಮುಖ್ಯ. ಪೆರಾಡಿ ಪ್ಯಾಕ್ಸ್‌ ರೈತರಿಗೆ ಉತ್ತಮ ಸವಲತ್ತು ನೀಡುತ್ತಿದ್ದು, ಸಂಘದ ಅಭಿವೃದ್ಧಿಗೆ ಹತ್ತು ಲಕ್ಷ ರೂ. ನೆರವು ನೀಡಲಾಗುವುದು ಎಂದು ಹೇಳಿದರು.

    ಸಂಘದ ಅಧ್ಯಕ್ಷ ಸತೀಶ್‌ ಕೆ.ಕಾಶಿಪಟ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರ ಸಹಕಾರ, ಮಾರ್ಗದರ್ಶನ ಹಾಗೂ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಂಘವು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಂಘದ ಅಮೃತ ಮಹೋತ್ಸವ ಸವಿನೆನಪಿಗಾಗಿ 3.33 ಲಕ್ಷ ರೂ ವೆಚ್ಚದಲ್ಲಿ ಗೋದಾಮು, ಸಭಾಂಗಣ ನಿರ್ಮಿ ಸಲಾಗಿದೆ. ಜಿಲ್ಲಾ ಸಂಘದಿಂದ 13 ವರ್ಷಗಳಿಂದ ನಮ್ಮ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ದೊರೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

    ಸಂಘದ ಮಾಜಿ ಅಧ್ಯಕ್ಷರು, ಸಾಧಕರನ್ನು ಸಮ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸಹಕಾರ ರತ್ನ ಸತೀಶ್ ಕೆ ಕಾಶಿಪಟ್ಣ ಅವರನ್ನು ಗೌರವಿಸಲಾಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಪದ್ಮರಾಜ್ ಅಜಿಲ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಶಾಸಕ ಹರೀಶ್‌ ಪೂಂಜ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ದ.ಕ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ಬಾಲ್ಯೊಟ್ಟು, ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಆನುವಂಶೀಯ ಆಡಳಿತ ಮೊಕ್ತೇಸರ ಜೀವಂದರ್ ಕುಮಾರ್‌ ಯಾನೆ ಕಂಚಿ ಪೂವಣಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಶಿರ್ತಾಡಿ ಕಾರ್ಮೆಲ್‌ ಮಾತೆಯರ ದೇವಾಲಯದ ಧರ್ಮಗುರು ವಂ. ಸಿಲ್ವೆಸ್ಟರ್‌ ವಿನ್ಸೆಂಟ್‌ ಲೋಬೊ, ಎಸ್‌ಕೆಡಿಆರ್‌ಡಿಪಿ ಸಿಇಒ ಅನಿಲ್‌ ಕುಮಾರ್‌, ಗ್ಯಾರಂಟಿ ಅನುಷ್ಠಾನ ಸಮಿತಿ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್‌ ಶಿವರಾಮ್‌, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ದ.ಕ. ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ಪುತ್ತೂರು ವಿಭಾಗ ಸಹಕಾರಿ ಸಂಘಗಳ ನಿಬಂಧಕ ಎಸ್‌.ಎಂ.ರಘು, ಸಂಘದ ಸಿಇಒ ಹೇಮಾ,  ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಅಜಿತ್‌ ಕುಮಾರ್‌ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ ವಂದಿಸಿದರು.

    ಆಕರ್ಷಕ ಮೆರವಣಿಗೆ

    73ನೇ ದ.ಕ. ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕಾಶಿಪಟ್ಣ ಪ್ರೌಢಶಾಲೆಯಿಂದ ಸಂಘದ ಕೇಂದ್ರ ಕಚೇರಿವರೆಗೆ ಅದ್ದೂರಿ ಸಹಕಾರಿ ಜಾಥಾ ನಡೆಯಿತು. ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಆನುವಂಶೀಯ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ಯಾನೆ ಕಂಚಿ ಪೂವಣಿಯವರು ಜಾಥಾಕ್ಕೆ ಚಾಲನೆ ನೀಡಿದರು. ಸಹಕಾರಿ ಕ್ಷೇತ್ರದ ಸಾಧನೆ, ಗ್ರಾಮೀಣ ಅಭಿವೃದ್ಧಿ ಹಾಗೂ ಸಹಕಾರದ ಮಹತ್ವವನ್ನು ಸಾರುವ ಸ್ತಬ್ಧಚಿತ್ರಗಳು ಜಾಥಾದ ಮೆರುಗು ಹೆಚ್ಚಿಸಿದವು. ವಿವಿಧ ಸಹಕಾರಿ ಸಂಘಗಳ ಪ್ರತಿನಿಧಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡರು. ಮೆರವಣಿಗೆಯ ಬಳಿಕ ನೂತನ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ನೂತನ ಸಭಾಭವನವನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ಸಂಘದ ವಿವಿಧ ಸೌಲಭ್ಯಗಳನ್ನು ಗಣ್ಯರು ಉದ್ಘಾಟಿಸಿದರು.

    Previous Articleನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    Related Posts

    ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    November 18, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    November 18, 2026

    ದೀಪಾವಳಿ ಹಬ್ಬ ಅಜ್ಞಾನ, ಅಂಧಕಾರ ದೂರ ಮಾಡಿ ಜ್ಞಾನ, ಬೆಳಕು ಪಸರಿಸುವ ಸಂಕೇತ

    November 18, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಮೃತ ಮಹೋತ್ಸವ ಆಚರಣೆ ಅರ್ಥಪೂರ್ಣ ಕಾರ್ಯಕ್ರಮ

    November 19, 2026

    ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    November 18, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    November 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.