Close Menu
    Top News

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 20, 2026

    ಸಕಾರಾತ್ಮಕ ಬದಲಾವಣೆಗೆ ಶ್ರೀಶಾ ಸೌಹಾರ್ದ ಸಹಕಾರಿ ಸಂಘ ಮುನ್ನುಡಿ

    November 20, 2026

    ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಗೆ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

    November 20, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಗೆ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ
    News

    ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಗೆ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

    adminBy adminNovember 20, 2026

    ಮಂಗಳೂರು: “ಗೋಲ್ಡ್‌ ಬ್ಯಾಂಕ್‌ʼʼ ಎಂದೇ ಪ್ರಸಿದ್ಧವಾಗಿರುವ ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಸಾಧನೆಯನ್ನು ಪುರಸ್ಕರಿಸಿ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಶುಕ್ರವಾರ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ರಾಜ್ಯಮಟ್ಟದ ಸಮಾರೋಪ ಸಮಾರಂಭದಲ್ಲಿ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಪ್ರಶಸ್ತಿ ಸ್ವೀಕರಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್‌ ಪ್ರಶಸ್ತಿ ಪ್ರದಾನ ಮಾಡಿದರು. ಸಹಕಾರ ಸಚಿವ ಲಕ್ಷ್ಮಣ ಸವದಿ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ, ನಿರ್ದೇಶಕ ಹಾಗೂ ದ.ಕ. ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್‌, ಯಶ್‌ಪಾಲ್‌ ಸುವರ್ಣ, ಐವನ್‌ ಡಿಸೋಜ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
    ದೇವಮಾನವ ಪಾಲ್ಕೆ ಬಾಬುರಾಯ ಆಚಾರ್ಯರ ನೇತೃತ್ವದಲ್ಲಿ 1964ರಲ್ಲಿ ಸ್ಥಾಪನೆಯಾದ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯು, ಪ್ರಸಕ್ತ 23,530 ಸದಸ್ಯರನ್ನು ಹೊಂದಿದ್ದು, ರೂ.732.86 ಲಕ್ಷ ಪಾಲು ಬಂಡವಾಳ, ಠೇವಣಿ ರೂ.31700.96 ಲಕ್ಷ ಹಾಗೂ ದುಡಿಯುವ ಬಂಡವಾಳ ರೂ.35,516.39 ಲಕ್ಷ ಹೊಂದಿದ್ದು, ಕರ್ನಾಟಕ ರಾಜ್ಯದಲ್ಲಿ ಸಹಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕೆಲವೇ ಕೆಲವು ಸಹಕಾರಿ ಸಂಸ್ಥೆಯಲ್ಲಿ ಒಂದಾಗಿದೆ. ಪ್ರಸಕ್ತ ದಕ್ಷಿಣ ಕನ್ನಡ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 17 ಬ್ಯಾಂಕಿಂಗ್ ಮತ್ತು ಒಂದು ಕೈಗಾರಿಕಾ ಶಾಖೆಯನ್ನು ಹೊಂದಿದೆ. ಕೊಟ್ಟಾರ ಚೌಕಿಯಲ್ಲಿ ಸ್ವಂತ ಕಟ್ಟಡ ವಿಶ್ವಸೌಧದಲ್ಲಿ ಹವಾನಿಯಂತ್ರಿತ ನವೀಕೃತ ಆಡಳಿತ ಕಚೇರಿಯನ್ನು ಹೊಂದಿದೆ. 2025-26ರ ಸಾಲಿನಲ್ಲಿ ರೂ. 807.74 ಲಕ್ಷ ನಿವ್ವಳ ಲಾಭ ಗಳಿಸಿದೆ.

    ಸಹಕಾರ ಸಪ್ತಾಹದಲ್ಲಿ ಸತತ ಮೂರನೇ ಪುರಸ್ಕಾರ
    ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಉನ್ನತ ಸಾಧನೆಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಸತತ ಮೂರನೇ ಬಾರಿ ಪ್ರಶಸ್ತಿ ಪಡೆಯುತ್ತಿರುವುದು ಹಮ್ಮೆಯ ವಿಷಯ. 2024ರಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಂದು ಉತ್ತಮ ಸಹಕಾರ ಸಂಘ ವಿಶೇಷ ಪ್ರಶಸ್ತಿ ಲಭಿಸಿದ್ದರೆ, 2025ರಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದಂದು ವಜ್ರಮಹೋತ್ಸವ ಪೂರೈಸಿದ ಸಹಕಾರಿ ಸಂಘ ಎಂದು ವಿಶೇಷ ಪ್ರಶಸ್ತಿ ಲಭಿಸಿತು. ಈ ಬಾರಿ ಸಹಕಾರಿ ಮಾಣಿಕ್ಯ ಪುರಸ್ಕಾರ ಲಭಿಸಿರುವುದು ಸಂಸ್ಥೆಯ ಸಾಧನೆಗೆ ಸಂದ ಪುರಸ್ಕಾರವಾಗಿದೆ.

    Co Operative ministry Cooperative Cooperative Department Cooperative Registrar Sahakara Manikya SK Goldsmiths Industrial Co Operative Society
    Previous Articleಎಂಸಿಸಿ ಬ್ಯಾಂಕ್‌ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ
    Next Article ಸಕಾರಾತ್ಮಕ ಬದಲಾವಣೆಗೆ ಶ್ರೀಶಾ ಸೌಹಾರ್ದ ಸಹಕಾರಿ ಸಂಘ ಮುನ್ನುಡಿ

    Related Posts

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 20, 2026

    ಸಕಾರಾತ್ಮಕ ಬದಲಾವಣೆಗೆ ಶ್ರೀಶಾ ಸೌಹಾರ್ದ ಸಹಕಾರಿ ಸಂಘ ಮುನ್ನುಡಿ

    November 20, 2026

    ಎಂಸಿಸಿ ಬ್ಯಾಂಕ್‌ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ

    November 20, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 20, 2026

    ಸಕಾರಾತ್ಮಕ ಬದಲಾವಣೆಗೆ ಶ್ರೀಶಾ ಸೌಹಾರ್ದ ಸಹಕಾರಿ ಸಂಘ ಮುನ್ನುಡಿ

    November 20, 2026

    ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಗೆ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

    November 20, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.