ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಶುಕ್ರವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆಯನ್ನು ಪರಿಗಣಿಸಿ 2026ನೇ ಸಾಲಿನ “ಉತ್ತಮ ಸಹಕಾರ ಸಂಘ” ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪ್ರಶಸ್ತಿ ಸ್ವೀಕರಿಸಿದರು. ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧಿಸುತ್ತಾ ಬಂದಿರುವ ಅಪರಿಮಿತ ಯಶಸ್ಸಿನ ಫಲವಾಗಿ ಸಂಘವು ಸತತ 9ನೇ ಬಾರಿ “ಉತ್ತಮ ಸಹಕಾರ ಸಂಘ” ಪ್ರಶಸ್ತಿಯನ್ನು ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮುಡಿಗೇರಿಸಿಕೊಳ್ಳುತ್ತಿರುವುದು ಉಲ್ಲೇಖನೀಯವಾಗಿದೆ.
https://chat.whatsapp.com/FCEnlTkAKCC0MGPhXtX4i4
ಕಾರ್ಯಕ್ರಮದಲ್ಲಿ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಗೌರವ ಉಪಸ್ಥಿತಿಯಲ್ಲಿ ಗಣ್ಯರ ಸಮ್ಮುಖದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ- ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಎ.ಸುವರ್ಣ, ವಿಧಾನ ಪರಿಷತ್‌ನ ಸದಸ್ಯರಾದ ಐವನ್ ಡಿಸೋಜ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ಸಹಕಾರ ಸಂಘಗಳ ನಿಬಂಧಕರಾದ ವೆಂಕಟೇಶ್ ಎಂ.ವಿ, ಸಹಕಾರ ಸಂಘಗಳ ಅಪರ ನಿಬಂಧಕರಾದ ಪ್ರಸಾದ್ ರೆಡ್ಡಿ ಪಿ., ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶಶಿಧರ್ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯಾ ಕೆ.ಆರ್., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್ ನವೀನ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ್ ಭಟ್, ಭಾಸ್ಕರ್ ಎಸ್.ಕೋಟ್ಯಾನ್, ವಾದಿರಾಜ ಶೆಟ್ಟಿ, ಎಸ್.ಬಿ. ಜಯರಾಮ ರೈ, ಅಶೋಕ್ ಕುಮಾರ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ, ಜೈರಾಜ್ ಬಿ.ರೈ, ಕುಶಾಲಪ್ಪ ಗೌಡ, ಎಸ್.ಎನ್.ಮನ್ಮಥ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ರಮಾನಾಥ್ ಸನಿಲ್, ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್.ಕೊಂಡಾಣ, ಗೋಪಾಲ್ ಎಂ, ಆನಂದ ಕೆ., ಗಣೇಶ್, ಎಂ.ಪಿ ರವಿಶಂಕರ್, ಶ್ರೀಕಾಂತ್ ಸುವರ್ಣ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಜರಿದ್ದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ ಶೆಟ್ಟಿ ಸ್ವಾಗತಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ವಂದಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.


