ಮಂಗಳೂರು: 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 2022 ರ ಆಚರಣೆಯ ಅಂಗವಾಗಿ ಬುಧವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ರಾಷ್ಟ್ರೀ ಯ ಸೇವಾಯೋಜನೆ ಹಾಗೂ ಯೋಜನಾ ವೇದಿಕೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಸಹಭಾಗಿತ್ವದಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವಿಚಾರ ಸಂಕಿರಣ ಅಯೋಜಿಸಲಾಯಿತು. ಕಾರ್ಯಕ್ರಮದಲ್ಲಿ “ಸಹಕಾರಿ ಕ್ಷೇತ್ರದ ಹುಟ್ಟು, ಬೆಳವಣಿಗೆ ಬಗ್ಗೆ ನಾವು ಅರಿವು ಮೂಡಿಸಿಕೊಳ್ಳಬೇಕು. ಸಹಕಾರಿ ಕ್ಷೇತ್ರದ ಹುಟ್ಟಿನಿಂದ ಇಲ್ಲಿಯವರೆಗೂ ಇದರ ಪಯಣ, ಸಾಧನೆ ಅಪ್ರತಿಮವಾದುದು” ಎಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಮುಖ್ಯ ಅತಿಥಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಸಹಕಾರ ಅಧ್ಯಾಯನ ಮತ್ತು ಅಭಿವೃದ್ದಿ ಸಂಸ್ಥೆ ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಸ್.ಆರ್ ಹರೀಷ್ ಆಚಾರ್ಯ ಇವರು ಮಾತನಾಡಿ, ಜಾತಿ, ಧರ್ಮ, ರಾಜಕೀಯ ನಿಲುವುಗಳು, ಲಿಂಗ ಭಿನ್ನತೆಯನ್ನು ಮೀರಿ ಸಹಕಾರಿ ತತ್ವ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಳೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಸಹಕಾರಿ ಇಲಾಖೆಯ, ಅಧೀಕ್ಷಕ ಎನ್.ಜೆ.ಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಸಂಘದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ನಿರ್ದೇಶಕರಾದ ವಿನಯ್ಕುಮಾರ್ ಸೂರಿಂಜೆ, ಚಿತ್ತರಂಜನ್ ಬೋಳಾರ್, ಅನುಪಮಾ ಎ.ರಾವ್, ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸುರೇಶ್, ಡಾ.ಗಾಯತ್ರಿ ಎನ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ನಿರ್ದೇಶಕಿ ಸಾವಿತ್ರಿ ರೈ. ಕೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು . ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.