ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರೀತಿಯ ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳು ಮತ್ತು ಆಡಳಿತಾಧಿಕಾರಿಳಿಗೆ ಉಚಿತ ಕೋವಿಡ್ ಲಸಿಕಾ ಶಿಬಿರವು ನಗರದ ಎಮ್.ಸಿ.ಸಿ. ಬ್ಯಾಂಕ್‌ನ ಸಹಯೋಗದೊಂದಿಗೆ ಜರಗಿತು. ನಗರದ ಪತ್ತಿನ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು, ವಿವಿದೋದ್ದೇಶ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕುಗಳು ಸೇರಿದಂತೆ ನಗರದ ಎಲ್ಲಾ ರೀತಿಯ ಸಹಕಾರ ಸಂಘಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಒಟ್ಟು ದಾಖಲೆಯ 473 ಜನ ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆದರು.
ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಅವರು ಮಾತನಾಡಿ ಲಸಿಕೆ ಪಡೆಯುವುದರ ಅಗತ್ಯತೆ ಬಗ್ಗೆ ಪ್ರಸ್ತುತ ಪಡಿಸಿದರು. ವೈದ್ಯಾಧಿಕಾರಿಗಳಾದ ಡಾ. ಸುಷ್ಮಾ ಜಾಸ್ಮಿನ್ ಅವರು ಆದ್ಯತಾವಲಯದ ಸಿಬ್ಬಂದಿಗಳು ಸ್ವತಃ ಲಸಿಕೆಯನ್ನು ಪಡೆಯುವುದು ಮಾತ್ರವಲ್ಲ ಮುಂದಿನ ದಿನಗಳಲ್ಲಿ ಎಲ್ಲಾ ಜನಸಮುದಾಯದಗಳಿಗೂ ಲಸಿಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕೆಂದು ಮನವಿ ಮಾಡಿಕೊಂಡರು.
ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಹರೀಶ್ ಆಚಾರ್ಯ, ಎಮ್.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೋ, ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಚಿತ್ತರಂಜನ್ ಬೋಳಾರ್, ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುರೇಶ್ ಕುಮಾರ್ ರೈ, ಸ್ವಹಾರ್ದ ಒಕ್ಕೂಟದ ಅಭಿವೃದ್ಧಿ ಅಧಿಕಾರಿ ಶ್ರೀ ಗುರುಪ್ರಸಾದ್, ಶ್ರೀ ದಯಾನಂದ ಅಡ್ಯಾರ್ ಮುಂತಾದವರ ಮೇಲ್ವಿಚಾರಣೆಯಲ್ಲಿ ಈ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಈ ಉಚಿತ ಲಸಿಕಾ ಶಿಬಿರವು ಜರುಗಿತು.
ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಯೋಗದೊಂದಿಗೆ ಶಿಬಿರವು ಯಶಸ್ವಿಯಾಗಿ ನೆರವೇರಿತು.