ಸಾಲ ಮರುಪಾವತಿ ಮಾಡುವಂತೆ ಒತ್ತಾಯಿಸುವುದು, ಬೆದರಿಸುವುದು ಆತ್ಮಹತ್ಯೆಗೆ ಪ್ರಚೋದನೆಯಾಗಲಾರದು1
ಸಾಲ ಮರುಪಾವತಿ ಮಾಡಬೇಕೆಂದು ಒತ್ತಾಯಪಡಿಸುವುದು ಅಥವಾ ಬಲವಂತಪಡಿಸುವುದು ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನೀಡಿದ ಸಾಲವನ್ನು ಮರಳಿ ಪಡೆಯಲು ಮಾಡುವ ಪ್ರಯತ್ನಗಳು ಆತ್ಮಹತ್ಯೆಗೆ ಪ್ರಚೋದನೆಯಾಗಲಾರದೆಂದು ಮಾನ್ಯ ಉಚ್ಛ ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ ಮತ್ತು ಈ ಕಾರಣದಿಂದ ಆರೋಪಿಯನ್ನು ಐಪಿಸಿ ಸೆಕ್ಷನ್ 306ರ ಅಡಿ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಉಚ್ಛ ನ್ಯಾಯಾಲಯವು ಉಲ್ಲೇಖಿಸಿದೆ ಹಾಗು ಸಾಲ ಮರುಪಾವತಿಗೆ ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿ ವಿಧಿಸಿದ್ದ ಶಿಕ್ಷೆಯನ್ನು ಅದು ರದ್ದುಗೊಳಿಸುತ್ತಾ ಈ ಆಭಿಪ್ರಾಯವನ್ನು ವ್ಯಕ್ತಪಡಿಸಿದೆ.
- https://vijaykarnataka.com/news/bengaluru-city/harassment-for-loan-repayment-not-abetment-of-suicide-says-karnataka-high-court/articleshow/104077998.cms ↩︎