ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಮ್) ಬೆಂಗಳೂರು ಇವರಿಂದ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಇವರ ಸಮನ್ವಯದಲ್ಲಿ ಮಂಗಳೂರು ಕೇಂದ್ರವಾಗಿಸಿಕೊಂಡು ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮಾ(ಹೆಚ್.ಡಿ.ಸಿ.ಎಮ್) ಕೋರ್ಸಿನ ದೂರ ಶಿಕ್ಷಣದ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಯಾದ ಶ್ರೀಮತಿ ವನಿತಾ ಡಿ, ದ್ವಿತೀಯ ರ‍್ಯಾಂಕ್ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ಸಿಬ್ಬಂದಿಯಾದ ಶ್ರೀಮತಿ ದೀಪಿಕಾ ಸನಿಲ್ ಹಾಗೂ ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಯಾದ ಶ್ರೀ ಕೃಷ್ಣಪ್ಪ ಎ. ತೃತೀಯ ರ‍್ಯಾಂಕ್ ಪಡೆದಿರುತ್ತಾರೆ.
ನವದೆಹಲಿಯ ನ್ಯಾಷನಲ್ ಕೌನ್ಸಿಲ್ ಫಾರ್ ಕೋ-ಆಪರೇಟಿವ್ ಟ್ರೈನಿಂಗ್ (ಎನ್.ಸಿ.ಸಿ.ಟಿ) ಇದರ ಅಂಗಸಂಸ್ಥೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಮ್) ಬೆಂಗಳೂರು, ಇವರಿಂದ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮ (ಹೆಚ್.ಡಿ.ಸಿ.ಎಮ್) ತರಬೇತಿಯನ್ನು ಕಳೆದ ಎಳು ವರ್ಷಗಳಿಂದ ಮಂಗಳೂರನ್ನು ಕೇಂದ್ರಿಕೃತವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಅವಿಭಜಿತ ದ.ಕ, ಉಡುಪಿ ಮತ್ತು ಕಾಸರಗೋಡ್ ಜಿಲ್ಲೆಯ ಸಹಕಾರಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನಿರಂತರವಾಗಿ ನಡೆಸುತ್ತಾ ಬಂದಿರುತ್ತದೆ.
ಪ್ರತೀ ಬ್ಯಾಚ್‌ನಲ್ಲಿ ಶತಕಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಭಾಗವಹಿಸಿದ್ದು. ಈ ಬ್ಯಾಚ್‌ನಲ್ಲಿ 105 ಶಿಕ್ಷಣಾರ್ಥಿಗಳು ಹೆಚ್.ಡಿ.ಸಿ.ಎಮ್ 53,54 ಮತ್ತು 57ನೇ ಅಧಿವೇಶನದಲ್ಲಿ ಪರೀಕ್ಷೆ ಬರೆದಿದ್ದು, ೧೨ ಶಿಕ್ಷಣಾರ್ಥಿಗಳು ಉನ್ನತ ಶ್ರೇಣಿ, 61 ಶಿಕ್ಷಣಾರ್ಥಿಗಳು ಪ್ರಥಮ ದರ್ಜೆ, 18 ಶಿಕ್ಷಣಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವುದು ಅವಿಭಜಿತ ಜಿಲ್ಲೆಗಳಿಗೆ ಹೆಮ್ಮೆಯ ವಿಷಯವಾಗಿದೆ. ಈ ನಿಟ್ಟಿನಲ್ಲಿ ತರಬೇತಿ ಸಮನ್ವಯ ಅಧಿಕಾರಿ ಹಾಗೂ ಉಪನ್ಯಾಸಕರಾದ ಶ್ರೀ ಸುರೇಶ್ ಪಿ.ಎನ್ ಇವರ ಸಲಹೆ, ಸಹಕಾರ ಮತ್ತು ಪ್ರೋತ್ಸಾಹ ಶ್ಲಾಘನೀಯವಾಗಿದೆ. ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ಈಗಾಗಲೇ ಒಟ್ಟು 7 ಬ್ಯಾಚ್‌ನಲ್ಲಿ 708 ಶಿಕ್ಷಣಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದುಕೊಂಡಿದ್ದು.