ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ಎಂಟನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ರಂಜಿತ್ ಮೈರಾ, ಶ್ರೀ ಶ್ರೀಧರ್ ಪೂಜಾರಿ ಹಾಗೂ ಶ್ರೀ ಚಂದ್ರಹಾಸ್ ಕೊಟ್ಟಾರಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ರಾಮಕೃಷ್ಣ ಜಿ. ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ವಿಶಾಲ ಹೃದಯ ಮನೋಭಾವವನ್ನು ಪ್ರಶಂಶಿಸಿದರು. ಗ್ರಾಹಕರಾದ ಶ್ರೀ ಕೆ ಅಣ್ಣು ಪೈ ರವರು ಮಾತನಾಡಿ ಈಗಾಗಲೇ ಸಂಘವು ಪಿಗ್ಮಿಯನ್ನು ಮೊಬೈಲ್ ಆಪ್ ಮೂಲಕ ಸಂಗ್ರಹಿಸಿತ್ತಿದ್ದು,ಇನ್ನು ಮುಂದಕ್ಕೆ ಸಾಲಗಳ ಮರುಪಾವತಿ ಹಾಗೂ ಇತರ ಯಾವುದೇ ಖಾತೆಗೆ ಹಣವನ್ನು ಜಮೆಮಾಡುವ ವಿಶಿಷ್ಟ ರೀತೀಯ ಯೋಜನೆಗಳನ್ನು ರೂಪಿಸಿ ಸಮಾಜಕ್ಕೆ ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು.
ಶ್ರೀ ರಂಜಿತ್ ಮೈರಾ ಗ್ರಾಹಕ ಸಭೆಗೆ ಶುಭವನ್ನು ಹಾರೈಸಿ ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸ್ಟೇಟ್ ಬ್ಯಾಂಕ್ ಶಾಖೆಯ ಎಂಟನೇ ವಾರ್ಷಿಕೋತ್ಸವಕ್ಕೆ ಹರ್ಷವನ್ನು ವ್ಯಕ್ತಪಡಿಸಿ ಸಂಘವು ಇ-ಸ್ಟಾಂಪಿAಗ್ ಸೇವೆಗೆ ನಿರಂತರವಾಗಿ ಪ್ರಶಸ್ತಿಯನ್ನು ಪಡೆಯಲು ಸ್ಟೇಟ್‌ಬ್ಯಾಂಕ್ ಶಾಖೆಯ ಗ್ರಾಹಕರ ಸಹಕಾರದಿಂದ ಸಾಧ್ಯವಾಗಿದೆ. ಸ್ಟೇಟ್ ಬ್ಯಾಂಕ್ ಶಾಖೆಯಿಂದ ಹೆಚ್ಚಿನ ಠೇವಣಿಯನ್ನು ಸಂಗ್ರಹಿಸಿದ್ದು ಆ ಠೇವಣಿಯಿಂದ ೧೦ ಕೋಟಿಗೂ ಮಿಕ್ಕಿ ಸಾಲವನ್ನು ನೀಡಲು ಸಾಧ್ಯವಾಗಿದೆ. ಸಂಘದಲ್ಲಿ ಲಭ್ಯವಿರುವ ವಿಮಾ ಸೇವೆಯ ಜೊತೆಗೆ ಲಭ್ಯವಿರುವ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಗ್ರಾಹಕರ ಸಲಹೆ ಸಹಕಾರವನ್ನು ಸದಾ ಬಯಸುತ್ತಾ ಸಂಘವು ಇನ್ನಷ್ಟು ಎತ್ತರಕ್ಕೆ ಏರಲು ಇನ್ನು ಮುಂದೆಯೂ ಗಾಹಕರು ಕೈ ಜೋಡಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್,ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ದೀಪಿಕ ಸನಿಲ್,ಹಿರಿಯ ಶಾಖಾಧಿಕಾರಿ ಶ್ರೀ ಹರಿಣಾಕ್ಷಿ ಪ್ರಶಾಂತ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದ್ದರು.
ಶಾಖೆಯ ಸಿಬ್ಬಂದಿಯಾAದ ಕುಮಾರಿ ನಿರೀಕ್ಷಾ ಸುವರ್ಣ ರವರು ಸ್ವಾಗತಿಸಿ, ಶ್ರೀ ವೀಕ್ಷಿತ್ ರವರು ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ರಮ್ಯಾ ಎನ್. ರವರು ಕಾರ್ಯಕ್ರಮ ನಿರೂಪಿಸಿದರು.
Related Posts
Add A Comment