ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕಗಳ ಜಂಟಿ ಸಹಯೋಗದಲ್ಲಿ ಜೂನ್ 23ರಂದು ಭಾನುವಾರ ಬೆಳಿಗ್ಗೆ 9.3೦ರಿಂದ ಮಧ್ಯಾಹ್ನ 12.3೦ರವರೆಗೆ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ)ಯಲ್ಲಿ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿ.ಪಿ. ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗೀಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕ ಉಚಿತವಾಗಿ ವಿತರಿಸಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ:
Email: editor@sahakaraspandana.in, sahakaraspandana@gmail.com
ಮಾಹಿತಿಗೆ: 9901319694.