Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನರ ಆರೋಗ್ಯಕ್ಕಾಗಿ ಉಚಿತ ಆರೋಗ್ಯ ಶಿಬಿರ
    News

    ಜನರ ಆರೋಗ್ಯಕ್ಕಾಗಿ ಉಚಿತ ಆರೋಗ್ಯ ಶಿಬಿರ

    adminBy adminJuly 8, 2024

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಳಜಿಗೆ ಗಣ್ಯರ ಮೆಚ್ಚುಗೆ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್ ಇವರ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಭಾನುವಾರ ನಡೆಯಿತು.
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು, ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಹಲಸು ಹಬ್ಬದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರದಿಂದ ಜನರಿಗೆ ಅನುಕೂಲವಾಗಲಿ. ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ಹೇಳಿದರು. ಇನ್ನೋರ್ವ ಮುಖ್ಯ ಅತಿಥಿ ಜೇಸಿಐ ಉಪ್ಪಿನಂಗಡಿಯ ಅಧ್ಯಕ್ಷೆ ಲವೀನಾ ಪಿಂಟೋ ಮಾತನಾಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನೂ ಹೆಚ್ಚು ಹೆಚ್ಚು ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವಂತಾಗಲಿ ಎಂದು ಎಂದು ಶುಭ ಹಾರೈಸಿದರು.


    ಅದ್ವಿಕ್ ದಂತ ಕ್ಲಿನಿಕ್ ನ ದಂತವೈದ್ಯ ಡಾ||ಆಶಿತ್ ಎಂ.ವಿ. ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರವಲ್ಲದೆ ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಣಚೂರು ಆಯುರ್ವೇದ ಆಸ್ಪತ್ರೆಯ ವೈದ್ಯ ಡಾ||ಜೈನುದ್ದೀನ್ ಮಾತನಾಡಿ, ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.


    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌ ಅಧ್ಯಕ್ಷತೆ ವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಂ, ಚಂದ್ರಾವತಿ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಪಾಲೇರಿ , ಜೇಸಿಐ ವಲಯ ನಿರ್ದೇಶಕ ಭರತ್ ಶೆಟ್ಟಿ ಮತ್ತಿತರರು ಉಪಸ್ಧಿತರಿದ್ದರು. 160ಕ್ಕೂ ಅಧಿಕ ಶಿಬಿರಾರ್ಥಿಗಳು ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಸ್ವಾಗತಿಸಿ, ಶಾಖಾಧಿಕಾರಿ ಭವ್ಯ ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಶ್ರೀಮತಿ ಕವಿತಾ ಐ ನಿರ್ವಹಿಸಿದರು.

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿ ಸಾಧಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷಧ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು 15,000ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ.
    | ಚಿತ್ತರಂಜನ್‌ ಬೋಳಾರ್‌
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್:   sahakaraspandana@gmail.com
    ಮಾಹಿತಿಗೆ ಸಂಪರ್ಕಿಸಿ: 9901319694.

    Advik Dental Clinic Athmashakthi Chittaranjan Bolar Cooperative KANACHURU Hospital Sahakara Spandana Spandana Cooperative uppinangady JCI
    Previous ArticleMCC Bank honors Ivan D’Souza, Stani, Umar U.H
    Next Article ಈ ಬಾರಿ ಮಂಡನೆಯಾಗಲಿದೆ ದೇಶದ 93ನೇ ಬಜೆಟ್‌

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.