ಸುರತ್ಕಲ್ ಕೃಷ್ಣಾಪುರದ ಆರನೇ ಬ್ಲಾಕ್‌ನಲ್ಲಿ ಸೋಮವಾರದಿಂದ ಕಾರ್ಯಾರಂಭ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ನೂತನ ಶಾಖೆಯು ಸುರತ್ಕಲ್ ಕೃಷ್ಣಾಪುರದ 6ನೇ ಬ್ಲಾಕ್‌ನಲ್ಲಿರುವ “HNGC ಐಕನ್ ಪ್ಲಾನೆಟ್”ನಲ್ಲಿ ಜುಲೈ 15ರಂದು ಸೋಮವಾರ ಬೆಳಗ್ಗೆ 10.3೦ಕ್ಕೆ ಉದ್ಘಾಟನೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡುವರು. ಶಾಸಕ ಡಾ.ವೈ.ಭರತ್ ಶೆಟ್ಟಿ ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡುವರು. ಮಾಜಿ ಶಾಸಕ ಮೊಯ್ದೀನ್ ಬಾವ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್. ಎನ್., ಸ್ಥಳೀಯ ಕಾರ್ಪೋರೇಟರ್‌ಗಳಾದ ಲಕ್ಷ್ಮೀ ಶೇಖರ್ ದೇವಾಡಿಗ ಹಾಗೂ ಶಂಶಾದ್ ಅಬೂಬಕ್ಕರ್ , ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಧ್ಯಕ್ಷ ದೇವೇಂದ್ರ ಕೋಟ್ಯಾನ್ , ಕಾಟಿಪಳ್ಳ ನಾರಾಯಣಗುರು ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ದಯಾಕರ್, ಮಾಜಿ ಕಾರ್ಪೋರೇಟರ್ ತಿಲಕ್‌ರಾಜ್ ಕೃಷ್ಣಾಪುರ ಹಾಗೂ ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆರೋಗ್ಯ ತಪಾಸಣಾ ಶಿಬಿರ
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇವರ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಹಾಗೂ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಪ್ ಡೆಂಟಲ್ ಸೈನ್ಸ್ ಮುಕ್ಕ, ಸುರತ್ಕಲ್ ಇಲ್ಲಿನ ವೈದ್ಯರ ತಂಡದಿಂದ ಉಚಿತ ದಂತ ತಪಾಸಣಾ ಶಿಬಿರ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಆಯೋಜಿಸಲಾಗಿದೆ. ಖ್ಯಾತ ಕಲಾವಿದ ನವೀನ್ ಡಿ.ಪಡೀಲ್ ಗೌರವ ಉಪಸ್ಥಿತಿಯಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಾದ ಹುಸೈನ್ ಕಾಟಿಪಳ್ಳ ಹಾಗೂ ತಂಡದಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ.
ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ನೀಡಲಾಗುವುದು ಹಾಗೂ ಗ್ರಾಹಕರಿಗೆ ಉಚಿತ ಉಡುಗೊರೆಯ ಜೊತೆಗೆ ಪ್ರತಿ ಗ್ರಾಂಗೆ ಗರಿಷ್ಠ ಚಿನ್ನಾಭರಣ ಸಾಲ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದೆ. ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694.