ಬಲ್ನಾಡು ಸಿಎ ಬ್ಯಾಂಕ್ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್ ಗಳು ಯಶಸ್ವಿಯಾಗಿ ತಮ್ಮ ಸೇವೆ ವಿಸ್ತರಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಬಲಿಷ್ಠವಾಗಿದ್ದು, 28 ವರ್ಷಗಳಿಂದ ಕೃಷಿ ಸಾಲಗಳು ಶೇ.100ರಷ್ಟು ಮರುಪಾವತಿಯಾಗುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಬಿಳಿಯೂರು ಕಟ್ಟೆಯಲ್ಲಿರುವ ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಚೇರಿಯ ನೂತನ ಸುಸಜ್ಜಿತ ಕಟ್ಟಡ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.
ಆಡಳಿತ ಕಚೇರಿ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ನೇತೃತ್ವದಲ್ಲಿ ಉತ್ತಮ ಕಟ್ಟಡ ನಿರ್ಮಿಸಿ ಸಮಾಜಕ್ಕೆ ಅರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿ ಮಾಡಿದೆ ಎಂದರು.
ನೂತನ ಗೋದಾಮು ಕಟ್ಟಡ ಉದ್ಘಾಟಿಸಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 168 ಸಹಕಾರಿ ಸಂಘಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. 169ನೇ ಸ್ವಂತ ಕಟ್ಟಡ ಬಲ್ನಾಡಿನಲ್ಲಿ ನಿರ್ಮಾಣವಾಗಿದೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಕೇವಲ ಐದು ತಿಂಗಳಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ. ಇದಕ್ಕಾಗಿ ಸಂಘದ ಸದಸ್ಯರು ತಮ್ಮ ಡಿವಿಡೆಂಡ್‌ನ ಶೇ.50ರಷ್ಟನ್ನು ಕೊಡುಗೆ ನೀಡಿದ್ದಾರೆ ಎಂದರು.
ಭದ್ರತಾ ಕೊಠಡಿ ಉದ್ಘಾಟಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದ.ಕ. ಜಿಲ್ಲೆ ಸಹಕಾರಿ ಕ್ಷೇತ್ರದ ಕಾಶಿ. ರೈತರ ಬೇಡಿಕೆಗಳು ಇಂದು ಸಹಕಾರಿ ಕ್ಷೇತ್ರದ ಮೂಲಕ ಮನೆ ಬಾಗಿಲಿಗೆ ತಲುಪುತ್ತಿದೆ ಎಂದು ಹೇಳಿದರು.
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಸಭಾಭವನ ಉದ್ಘಾಟಿಸಿದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ. ಜಯರಾಮ ರೈ ದಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ ಪ್ರಾಸ್ತಾವಿಕ ಮಾತನಾಡಿ, 1960ರಲ್ಲಿ ಶೀನ ಶೆಟ್ಟಿಯವರು ಸಂಘವನ್ನು ಸ್ಥಾಪಿಸಿದ್ದರು. ಸಂಘದ ಮಹಾಸಭೆಯಲ್ಲಾದ ನಿರ್ಣಯದಂತೆ ಸಂಘಕೆ 40 ಸೆಂಟ್ಸ್ ಜಾಗ ಖರೀದಿಸಿ ಅದರಲ್ಲಿ ಸುಸಜ್ಜಿತ ಕೇಂದ್ರ ಕಚೇರಿ ಕಟ್ಟಡ ನಿರ್ಮಾಣವಾಗಿದೆ. ತನ್ನ ಅಧ್ಯಕ್ಷ ಅವಧಿಯಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
https://chat.whatsapp.com/Ge11n7QCiMj5QyPvCc0H19
ಸಂಘದ ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಎ.ಎಂ.ಪ್ರಕಾಶ್ಚಂದ್ರ ಆಳ್ವ, ಕೆ.ಚಂದಪ್ಪ ಪೂಜಾರಿ, ಆಂಬ್ರೋಸ್ ಡಿಸೋಜ, ಸೀತಾರಾಮ ಗೌಡ, ನವೀನ್ ಕರೇಕರ, ಸುರೇಶ್ ಎನ್, ಪ್ರಮೋದ್ ಬಿ, ಸೀತಾರಾಮ ಗೌಡ, ಎಸ್‌ಸಿಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕ ವಸಂತ ಉಪಸ್ಥಿತರಿದ್ದರು. ಸೀತಾರಾಮ ಗೌಡ ವಂದಿಸಿದರು, ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.
10 ಲಕ್ಷ ರೂ. ಕೊಡುಗೆ
ಬಲ್ನಾಡಿನ ನೂತನ ಕೇಂದ್ರ ಕಚೇರಿಯ ಕಟ್ಟಡಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಘೋಷಿಸಿದರು.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694