ವಿಜಯಪುರ: ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಹಾಗೂ ಮರಗಳ ಸಂರಕ್ಷಣೆಗೆ ಸಿದ್ಧಸಿರಿ ಸೌಹಾರ್ದ ಸಹಕಾರಿಯ ವತಿಯಿಂದ 10 ಲಕ್ಷ ರೂ. ದೇಣಿಗೆಯನ್ನು ಜಿಲ್ಲಾಧಿಕಾರಿ ಡಿ.ಭೂಬಾಲನ್ ಅವರಿಗೆ ಹಸ್ತಾಂತರಿಸಲಾಯಿತು.
ಗಿಡ ಮರಗಳ ರಕ್ಷಣೆಗೆ ಸಂಬಂಧಿಸಿ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಶಾಸಕ ಹಾಗೂ ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಆಡಳಿತ ಮಂಡಳಿ ತೆಗೆದುಕೊಂಡ ನಿರ್ಣಯದಂತೆ ದೇಣಿಗೆ ಹಸ್ತಾಂತರ ಮಾಡಲಾಯಿತು. ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮಾತನಾಡಿ, ಸಿದ್ಧಸಿರಿ ಸೌಹಾರ್ದ ಸಹಕಾರಿಯು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ನಿರಂತರವಾಗಿ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಲಸಿಕಾ ಕಾರ್ಯದಲ್ಲಿ ತೊಡಗಿಸಿಕೊಂಡು ಮನೆಮನೆಗೆ ಭೇಟಿ ನೀಡಿ ಕೋವಿಡ್ ಲಸಿಕೆ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸಿತ್ತು ಎಂದು ಹೇಳಿದರು. ಈ ಹಿಂದೆ ವೃಕ್ಷೋತ್ಥಾನ ಅಭಿಯಾನಕ್ಕೆ 10 ಲಕ್ಷ ರೂ. ನೀಡಲಾಗಿತ್ತು. ಈ ಬಾರಿ ನಗರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು 10 ಲಕ್ಷ ರೂ. ನೀಡಲಾಗುತ್ತಿದೆ ಎಂದು ಹೇಳಿದರು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಸಂಸ್ಥೆಯ ಪ್ರಮುಖರಾದ ಅಜೂರ, ದೇವಿ ಹಿರೇಮಠ್, ಉಮೇಶ ಹರಿವಾಳ, ರಾಜಶೇಖರ ಪಾಟೀಲ, ಎಜಿಎಂ ಶಿವಕುಮಾರ ಕಬ್ಬಿನ, ಸಂದೀಪ ಗುಡೂರ, ಪವನ ಕುಲಕರ್ಣಿ, ಬಾಬು ಗೌಡ ರೋಡಗಿ ಮುಂತಾದವರು ಉಪಸ್ಥಿತರಿದ್ದರು.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694