ರಾಜ್ಯಸಭೆಯಲ್ಲಿ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಮಾಹಿತಿ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2014ರಿಂದ ವಿವಿಧ ಕಾರಣಗಳಿಗಾಗಿ 78 ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು ಮಾಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, ಅಸಮರ್ಪಕ ಬಂಡವಾಳ, ಕಳಪೆ ಲಾಭ ಗಳಿಕೆ, ಹದಗೆಡುತ್ತಿರುವ ಹಣಕಾಸಿನ ಸ್ಥಿತಿಗತಿಗಳು, ಸಾರ್ವಜನಿಕ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಹೂಡಿಕೆದಾರರಿಂದ ಠೇವಣಾತಿ ಈ ಎಲ್ಲ ಕಾರಣಗಳಿಂದ ಬ್ಯಾಂಕ್‌ಗಳ ಪರವಾನಗಿ ಹಿಂಪಡೆಯಲಾಗಿದೆ. 2024ರ ಜನವರಿಯಿಂದ ಜುಲೈ ತನಕ 10, 2023ರಲ್ಲಿ 18 ಪಟ್ಟಣ ಸಹಕಾರ ಬ್ಯಾಂಕ್‌ಗಳ ಲೈಸೆನ್ಸ್ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಹಕಾರಿ ಬ್ಯಾಂಕ್‌ಗಳ ಪರಿಣಾಮಕಾರಿ ಕಾರ್ಯನಿರ್ವಹಣೆ ಮತ್ತು ಹಣಕಾಸಿನ ಸ್ಥಿತಿಗತಿ ಮೇಲೆ ನಿಗಾ ಇಡಲು ಆರ್‌ಬಿಐ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
https://chat.whatsapp.com/Ge11n7QCiMj5QyPvCc0H19
ನಬಾರ್ಡ್ ಮಾಹಿತಿಯ ಪ್ರಕಾರ 2014ರಿಂದ ಯಾವುದೇ ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳು, ರಾಜ್ಯಮಟ್ಟದ ಸಹಕಾರಿ ಬ್ಯಾಂಕ್‌ಗಳು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು ಮಾಡಿಲ್ಲ ಎಂದು ಪಂಕಜ್ ಚೌಧರಿ ಹೇಳಿದರು.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ:
Email: sahakaraspandana@gmail.com
ಮಾಹಿತಿಗೆ: 9901319694.