ಹಂಪನಕಟ್ಟೆ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಆಯೋಜನೆ
ಮಂಗಳೂರು: ಒಡಿಯೂರು ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ, ಸೇವಾ ಸಂಭ್ರಮ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 4ರಂದು ಭಾನುವಾರ ಬೆಳಗ್ಗೆ 9.30ರಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ವಿವಿಧ ಘಟಕಗಳು, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ, ಬಂಟರ ಸಂಘ ಜಪ್ಪು, ಯುವ ರೆಡ್‌ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ಗುರುದೇವ ಸೇವಾ ಬಳಗ ಮಂಗಳೂರು, ಜಪ್ಪಿನಮೊಗರು ಬಂಟರ ಸಂಘ, ಕ್ರೀಡಾ ಭಾರತಿ ಮಂಗಳೂರು, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ ಇವುಗಳು ಸಹಯೋಗ ವಹಿಸಲಿವೆ. ಹೆಚ್ಚಿನ ಮಾಹಿತಿಗೆ 9008444644 ಸಂಪರ್ಕಿಸಬಹುದು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡುವರು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶಾಂತಾರಾಮ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ್ ಲ.ವಸಂತ ಶೆಟ್ಟಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕ ತಾರಾನಾಥ, ಗುರುದೇವ ಸೇವಾ ಬಳಗ ಮಂಗಳೂರಿನ ಅಧ್ಯಕ್ಷ ಜಿತೇಂದ್ರ ಕೊಟ್ಟಾರಿ, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಗಣಪತಿ ಗೌಡ, ಮಂಗಳೂರು ವಿಶ್ವವಿದ್ಯಾಲಯ ತುಳು ಅಧ್ಯಯನ ಕೇಂದ್ರ ಸಂಯೋಜಕ ಡಾ.ಮಾಧವ ಎಂ.ಕೆ, ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ, ಕ್ರೀಡಾಭಾರತಿಯ ಮಂಗಳೂರು ಕಾರ್ಯದರ್ಶಿ ಕೃಷ್ಣ ಶೆಟ್ಟಿ ತಾರೆಮಾರ್, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಅಸಿಸ್ಟೆಂಟ್ ಮಾರ್ಕೆಟಿಂಗ್ ಇನ್‌ಚಾರ್ಜ್ ಕೃಷ್ಣಮೂರ್ತಿ ರಾವ್ ಅತಿಥಿಗಳಾಗಿ ಭಾಗವಹಿಸುವರು ಎಂದು ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್ ರೈ, ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.