Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಸಮರ್ಥ ನಾಯಕ
    News

    ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಸಮರ್ಥ ನಾಯಕ

    adminBy adminAugust 6, 2024

    ಎಸ್‌ಸಿಡಿಸಿಸಿ ಬ್ಯಾಂಕ್‌ ಕೋಡಿಕಲ್‌ ಶಾಖೆ ಸ್ಥಳಾಂತರಿತ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಅಭಿಪ್ರಾಯ

    ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಬಹಳ ದೊಡ್ಡ ಸಾಧನೆ ಮಾಡಿದೆ. ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ದಕ್ಷ ನಾಯಕತ್ವದಲ್ಲಿ ಬ್ಯಾಂಕಿಂಗ್‌ ಸೇವೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಮುಂಚೂಣಿಯಲ್ಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದರು.
    ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್‌ ಶಾಖೆಯನ್ನು ಉರ್ವ ಮಾರಿಗುಡಿ ಕಟ್ಟಡದ ನೆಲ ಅಂತಸ್ತಿನಲ್ಲಿ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.
    ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂಎನ್‌.ರಾಜೇಂದ್ರ ಕುಮಾರ್‌ ಉದ್ಘಾಟಿಸಿ ಮಾತನಾಡಿ, ಗ್ರಾಹಕರಿಗೆ ಸಮರ್ಪಕ ಸೇವೆ ಒದಗಿಸುವಾಗ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುತ್ತಿದೆ. 110 ವರ್ಷಗಳ ಇತಿಹಾಸದಲ್ಲಿ 113 ಶಾಖೆಗಳ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್‌ ಜನರಿಗೆ ಸಮರ್ಥ ಸೇವೆ ನೀಡುತ್ತಿದೆ. 28 ವರ್ಷಗಳಿಂದ ಶೇ.100ರಷ್ಟು ಸಾಲ ಮರುಪಾವತಿ ಆಗುತ್ತಿದೆ. ಗ್ರಾಮಾಂತರ ಪ್ರದೇಶದ ಮಹಿಳೆಯರ ಸ್ಥಾವಲಂಬಿ ಜೀವನಕ್ಕಾಗಿ ನವೋದಯ ಸ್ವಸಹಾಯ ಸಂಘಗಳ ಮೂಲಕ ಸಾಲದ ವ್ಯವಸ್ಥೆ ಮಾಡಿದ್ದು, ಶೇ.99. 2೦ರಷ್ಟು ಮರುಪಾವತಿ ಆಗುತ್ತಿದೆ. ಜಿಲ್ಲೆಯಲ್ಲಿ ಸಾಲ ದೊರೆಯದ ಕಾರಣಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಇಲ್ಲ ಎಂದರು.

    https://chat.whatsapp.com/Ge11n7QCiMj5QyPvCc0H19
    ಮುಖ್ಯ ಅತಿಥಿ, ಕಾರ್ಪೋರೇಟರ್ ಗಣೇಶ್ ಕುಲಾಲ್ ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್ ಶಾಖೆ ಗ್ರಾಹಕರ ಅನುಕೂಲಕ್ಕಾಗಿ ಸ್ಥಳಾಂತರಗೊಂಡಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
    ಶಾಖಾ ಕಟ್ಟಡದ ಮಾಲಕ ಶಿವಪ್ರಸಾದ್ ಕಟ್ಟ, ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್‌ ಸೊರಿಂಜೆ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಬ್ಯಾಂಕಿನ ನಿರ್ದೇಶಕರಾದ ಭಾಸ್ಕರ ಎಸ್‌.ಕೋಟ್ಯಾನ್, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ, ಕೆ.ಜೈರಾಜ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಶಶಿರಾಜ್ ಕಾವೂರು ಕಾರ್ಯಕ್ರಮ ನಿರ್ವಹಿಸಿದರು.

    2011ರಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್‌ ಶಾಖೆ 55ನೇ ಬ್ರಾಂಚ್‌ ಆಗಿ ಉದ್ಘಾಟನೆಗೊಂಡಿತು. ಜನರ ಅನುಕೂಲಕ್ಕಾಗಿ ಇದೀಗ ಬ್ಯಾಂಕ್ ಶಾಖೆಯನ್ನು ಸ್ಥಳಾಂತರಗೊಳಿಸಲಾಗಿದೆ. ಕೋಡಿಕಲ್ ಶಾಖೆಯಲ್ಲಿ 49 ಕೋಟಿ ರೂ. ಠೇವಣಾತಿ ಇದ್ದು, 92 ಕೋಟಿ ರೂ. ಸಾಲ ನೀಡಲಾಗಿದೆ. ಸ್ಥಳಾಂತರಿತ ಶಾಖೆಯಲ್ಲಿ ಹೊಸ 16 ನವೋದಯ ಸ್ವಸಹಾಯ ಸಂಘಗಳ ರಚನೆಯಾಗಿದೆ.

    / ಡಾ.ಎಂ.ಎನ್.ರಾಜೇಂದ್ರಕುಮಾರ್‌, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

     

    Cooperative Cooperative Department Dr.M.N.Rajendra Kumar Sahakara Spandana SCDCC Bank Souharda Sahakari Spandana Cooperative Spandana Trust
    Previous Articleಕೌಶಲ್ಯಭರಿತ, ಸ್ವಚ್ಛ ಭಾರತ ನಿರ್ಮಾಣದ ಆಶಯ
    Next Article ಸಹಕಾರ ಸಂಘಗಳಿಗೆ ತೆರಿಗೆ ವಿನಾಯಿತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.