ಮಂಗಳೂರು: ಆಟಿ ತಿಂಗಳಲ್ಲಿ ತುಳುನಾಡಿನ ಜನ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿ ಪಡೀಲ್‌ನ “ಆತ್ಮಶಕ್ತಿ ಸೌಧ”ದಲ್ಲಿ ಭಾನುವಾರ ಆಚರಿಸಲಾಯಿತು.
ಹಿರಿಯ ನಾಟಿ ವೈದ್ಯ ಕಲಾಯಿ ಈಶ್ವರ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಟಿ ತಿಂಗಳ ಮಹತ್ವವನ್ನು ತಿಳಿಸಿ, ನಾಟಿ ಔಷಧಿ ಪದ್ದತಿಗಳ ಬಗ್ಗೆ ಮಾಹಿತಿ ನೀಡಿದರು.
ಕಂಕನಾಡಿ ನಗರ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್‌ನ ಪರಶುರಾಮ್ ಮಾತನಾಡಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಧಿಕವಾಗುತ್ತಿರುವ ಸೈಬರ್ ಅಪರಾಧದ ಬಗ್ಗೆ ಜಾಗೃತಿ ವಹಿಸುವಂತೆ ಹಾಗೂ ಮುನ್ನೆಚರಿಕೆ ವಹಿಸಬೇಕಾದ ಜಾಗೃತಿಯ ವಿಷಯದಲ್ಲಿ ಮಾಹಿತಿ ನೀಡಿದರು. ಮೂಲ್ಕಿ ಪೋಲಿಸ್ ಠಾಣೆಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಅನಿತಾ ಕೆ. ಮಾತನಾಡಿ, ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಹಲವಾರು ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವುದು ಶ್ಲಾಘನೀಯ. ಮಹಿಳೆಯರು ಅಪರಾಧಗಳ ಬಗ್ಗೆಯೂ ಜಾಗೃತಿ ವಹಿಸಬೇಕು. ಯಾವುದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸೇವೆಗಳು ಅಗತ್ಯವಿದ್ದಲ್ಲಿ, ಬೀಟ್ ಪೊಲೀಸ್‌ಗೆ ಮಾಹಿತಿ ನೀಡುವಂತೆ ತಿಳಿಸಿದರು.
https://chat.whatsapp.com/Ge11n7QCiMj5QyPvCc0H19
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ ಪೊಲಬು” ಎಂಬ ಹೆಸರಿನಿಂದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಇದ್ದೇವೆ. ಈ ಬಾರಿಯ ವೇದಿಕೆಯನ್ನು ಆಟಿ ತಿಂಗಳ ಮಹತ್ವ ಸಾರುವ ವಿಷಯ ಅಳವಡಿಸಿ ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿದೆ. ಆತ್ಮಶಕ್ತಿ ಎಂಬುದು ಒಂದು ಕುಟುಂಬ ಇದ್ದ ಹಾಗೆ, ಇಲ್ಲಿಯ ಸಿಬ್ಬಂದಿಗಳು ಇಲ್ಲಿಯ ಕೆಲಸವನ್ನು ತಮ್ಮ ಸ್ವಂತ ಕುಟುಂಬದ ಕೆಲಸ ಎನ್ನುವ ಹಾಗೆ ಮಾಡುತ್ತಿದ್ದು, ಈ ಆಟಿದ ಕೂಟದಲ್ಲಿ ಭಾಗವಹಿಸಿದ ಎಲ್ಲಾ ಸಿಬ್ಬಂದಿಗೆ ಹಾಗೂ ಅವರ ಮನೆಯವರಿಗೆ ಧನ್ಯವಾದ ತಿಳಿಸಿದರು.
ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸತೀಶ್ ಕೆ., ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಾಮನ್ ಕೆ, ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು. ಕಂಕನಾಡಿ ನಗರ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್‌ನ ನಟರಾಜ್, ಯುವರಾಜ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಪರಮೇಶ್ವರ ಜಿ.ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ್ ಮರೋಳಿ, ದಿವಾಕರ್ ಬಿ.ಪಿ, ಗೋಪಾಲ್ ಎಮ್, ಸಲಹೆಗಾರ ಅಶೋಕ್ ಕುಮಾರ್, ಹಿರಿಯ ಗ್ರಾಹಕರಾದ ಸುಲತಾ ತಲ್ವಾರ್ ಮತ್ತಿತರರು ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694