336 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
ಮಂಗಳೂರು: ಸಂತೋಷದ ಬದುಕು ಶಿಕ್ಷಣದ ಮೂಲ ಉದ್ದೇಶವೇ ಹೊರತು ಉತ್ತಮ ಅಂಕಗಳಿಕೆಯೇ ಶಿಕ್ಷಣದ ಮೂಲ ಉದ್ದೇಶ ಅಲ್ಲ ಎಂದು ಎಂದು ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ಅಧ್ಯಕ್ಷ ಎಸ್.ಪಿ.ಗುರುದಾಸ್ ಹೇಳಿದರು.
ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಮಂಗಳೂರು ಇದರ ವಜ್ರಮಹೋತ್ಸವದ ಪ್ರಯುಕ್ತ ಶರವು ಸಮೀಪದ ಬಾಳಂಭಟ್ ಹಾಲ್‌ನಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
1964ರಲ್ಲಿ ಪಾಲ್ಕೆ ಬಾಬುರಾಯ್ ಆಚಾರ್ಯರವರ ಕನಸಿನ ಸಂಸ್ಥೆ ಎಸ್.ಕೆ. ಗೋಲ್ಡ್‌ಸ್ಮಿತ್ ಸಹಕಾರಿ ವಜ್ರಮಹೋತ್ಸವ ಆಚರಿಸುತ್ತಿರುವುದರ ಹಿಂದೆ ಈ ಸಮಾಜ ಶಿಕ್ಷಣ ಹೊಂದಬೇಕು, ಶಿಕ್ಷಣದ ಮೂಲಕ ಸಾಮಾಜಿಕ ಅಭಿವೃದ್ದಿಯಾಗಬೇಕು ಎಂಬ ಕನಸು ಕಂಡಿದ್ದರು. 60ರ ಸಂಭ್ರಮದಲ್ಲಿರುವ ಈ ಸಂಸ್ಥೆ ಯಾವುದೇ ಫಲಾಪೇಕ್ಷೆ ಇಲ್ಲದೆ 40 ಸಮಾಜಮುಖಿ ಕಾರ್ಯಕ್ರಮಗಳನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಹಮ್ಮಿಕೊಂಡಿರುವುದು ವಿಶೇಷ. ನಾವು ಸಮಾಜದ ಒಂದು ಭಾಗ, ಸಮಾಜವಿಲ್ಲದಿದ್ದರೆ ನಮ್ಮ ಅಸ್ತಿತ್ವವೇ ಇಲ್ಲ. ಈ ನಿಟ್ಟಿನಲ್ಲಿ ವಜ್ರಮಹೋತ್ಸವದ ಪ್ರಯುಕ್ತ ಸಮಾಜದ 350ಕ್ಕೂ ಅಧಿಕ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಸಹಕಾರಿ ಸಂಸ್ಥೆಯು ಈ ಸಮಾಜಕ್ಕೆ ತನ್ನ ಜವಾಬ್ದಾರಿ ಪೂರೈಸುತ್ತಿದೆ ಎಂದರು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಶಾಶಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ಎಸ್.ಕೆ. ಗೋಲ್ಡ್‌ಸ್ಮಿತ್ ಸಹಕಾರಿಯು ಒಂದು ಬ್ಯಾಂಕ್ ಆಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕಿಂಚಿತ್ತು ಸಹಕಾರ ನೀಡುವುದು ದೇವತಾ ಕಾರ್ಯ. ದ.ಕ, ಉಡುಪಿ ಜಿಲ್ಲೆಗಳ ಬ್ಯಾಂಕ್‌ಗಳು ಕೇವಲ ವ್ಯಾವಹಾರಿಕ ದೃಷ್ಠಿಯಿಂದ ಮಾತ್ರ ಕಾರ್ಯನಿರ್ವಹಿಸುತ್ತಿಲ್ಲ, ಶಿಕ್ಷಣ, ಸಮಾಜದ ಆರ್ಥಿಕ ಬೆಳವಣಿಗೆಗೆ ಒತ್ತು ನೀಡುವುದರಿಂದ ಕರಾವಳಿಯು ದೇಶದ ಬ್ಯಾಂಕ್‌ಗಳ ತವರೂರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂಕ ಗಳಿಕೆಯೇ ಪ್ರದಾನವಾಗಿರುವ ಈ ಕಾಲಘಟ್ಟದಲ್ಲಿ ಯಶಸ್ವಿಗೆ ಅಂಕ ಮಾನದಂಡವಾಗಿರುವುದಿಲ್ಲ, ಗುರುಹಿರಿಯರ ಆಶೀರ್ವಾದವಿದ್ದರೆ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.
ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಎಐಸಿ ನಿಟ್ಟೆ ಇನ್ ಕ್ಯುಬೇಶನ್ ಸೆಂಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನಂತ ಪದ್ಮನಾಭ ಆಚಾರ್ ದಿಕ್ಕೂಚಿ ಭಾಷಣ ಮಾಡಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ದ.ಕ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಆಡಳಿತ ಮಂಡಳಿ ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್ ಮೊದಲಾದವರು ಹಾಜರಿದ್ದರು.
ಸಾಧಕ ವಿದ್ಯಾರ್ಥಿಗಳಾದ ಮನ್ವಿತಾ ಆಚಾರ್ಯ, ಶುಭ, ಸಿಂಚನಾ, ಸುಜಯ ಎಚ್, ಅನುಶ್ರೀ ಆಚಾರ್ಯ, ಪ್ರಶಾಂತ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶೈಕ್ಷಣಿಕ ಸಾಧನೆಗೈದ 336 ವಿದ್ಯಾರ್ಥಿಗಳಿಗೆ 10.96 ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ಉದಯಶಂಕರ್ ಕಾರ್ಯಕ್ರಮ ನಿರೂಪಿಸಿದರು.
ಎಸ್.ಕೆ. ಗೋಲ್ಡ್‌ಸ್ಮಿತ್ ಸಹಕಾರಿ ಇಂದು ವಜ್ರಮಹೋತ್ಸ ಆಚರಿಸುತ್ತಿದೆ. ದೇಶದ ಅಂದಿನ ಆರ್ಥಿಕ ಏರಿಳಿತದ ಮಧ್ಯೆಯೂ ಈ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ಸಮಾಜಮುಖಿ ಕಾರ್ಯನಿರ್ವಹಿಸುತ್ತಿರುವುದು ವಿಶೇಷ. ಈ ಸಂಸ್ಥೆಯಿಂದ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದೆ ಈ ಸಮಾಜಕ್ಕೆ ತಾವೂ ಕೊಡುಗೆ ನೀಡುವಂತಾಗಬೇಕು.
ಕ್ಯಾ.ಬ್ರಿಜೇಶ್ ಚೌಟ, ಸಂಸದರು ದಕ್ಷಿಣ ಕನ್ನಡ
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694