Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರಿಯಿಂದ ಜನರ ಆರೋಗ್ಯದ ಬಗ್ಗೆ ಕಾಳಜಿ
    News

    ಆತ್ಮಶಕ್ತಿ ಸಹಕಾರಿಯಿಂದ ಜನರ ಆರೋಗ್ಯದ ಬಗ್ಗೆ ಕಾಳಜಿ

    adminBy adminAugust 27, 2024

    ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಎಚ್‌.ಗಣೇಶ್‌ ರಾವ್‌ ಅಭಿಪ್ರಾಯ

    ಮಂಗಳೂರು: ದ.ಕ ಜಿಲ್ಲಾ ನಿವೃತ್ತ ಸರಕಾರಿ  ನೌಕರರ ಸಂಘ ಮಂಗಳೂರು ಮತ್ತು  ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಜಂಟಿ ಸಹಯೋಗದೊಂದಿಗೆ ಕಣಚೂರು  ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇಲ್ಲಿನ ವೈದ್ಯರ  ತಂಡದಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಭಾನುವಾರ ಜರುಗಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಚ್.ಗಣೇಶ್ ರಾವ್ ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್  ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಕೆಲಸ ಎಂದರು.
    ದ ಕ ಜಿಲ್ಲಾ ನಿವೃತ್ತ ಸರಕಾರಿ  ನೌಕರರ ಸಂಘ ಮಂಗಳೂರು ಇದರ ಅಧ್ಯಕ್ಷ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಸೀತಾರಾಮ್ ಎನ್ ಮಾತನಾಡಿ  ನಿವೃತ್ತರಿಗೆ ಆರೋಗ್ಯ ತಪಾಸಣಾ ಶಿಬಿರಗಳು ಅಗತ್ಯವಾಗಿರುತ್ತದೆ. ಇಂತಹ ವ್ಯವಸ್ಥಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಸಹಕರಿಸಿದ ಆತ್ಮಶಕ್ತಿ ಸಹಕಾರಿ ಸಂಘದ ಸೇವೆ ಶ್ಲಾಘನೀಯವಾದುದು. ಎಲ್ಲರೂ ಈ ಶಿಬಿರದ ಪ್ರಯೋಜನ ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.


    ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.  ಈ ಬಾರಿ ವೈದ್ಯಕೀಯ ಶಿಬಿರಕ್ಕೆ ಸಹಕಾರ ನೀಡಿದ ದ.ಕ ಜಿಲ್ಲಾ ನಿವೃತ್ತ ಸರಕಾರಿ  ನೌಕರರ ಸಂಘ ಇವರಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಎಂದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ 11 ವರ್ಷಗಳಿಂದ 72ಕ್ಕೂ ಮಿಕ್ಕಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ, ಶಿಬಿರಾರ್ಥಿಗಳಿಗೆ ಉಚಿತ ಔಷಧಿ ವಿತರಣೆ, ಉಚಿತ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿದೆ ಎಂದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ರಮನಾಥ್ ಸನಿಲ್, ಗೋಪಾಲ್ ಎಂ., ದ.ಕ ಜಿಲ್ಲಾ ನಿವೃತ್ತ ಸರಕಾರಿ  ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ ರಾಜ್ ಗೋಪಾಲ್,  ಹಾಗೂ ಗೌರವಾಧ್ಯಕ್ಷ ಉಮೇಶ್ ಕುಮಾರ್,  ಕಣಚೂರು  ಮೆಡಿಕಲ್ ಕಾಲೇಜು, ಆಸ್ಪತ್ರೆಯ ಕಣ್ಣಿನ ತಜ್ಞರಾದ  ಆಶಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರಶೀದ್, ಮುಂತಾದವರು ಉಪಸ್ಧಿತರಿದ್ದರು.
    ಸುಮಾರು 200ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಸ್ವಾಗತಿಸಿ,  ಶಾಖಾಧಿಕಾರಿ ಚಿತ್ರಾವತಿ ವಂದಿಸಿದರು. ಸ್ವಾತಿ  ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ  ಅಕ್ಷತಾ ಕೆ. ನಡೆಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Athmashakthi Banking Chitharanjan Bolar Chittaranjan Bolar Co Operative ministry Cooperative Cooperative Department Cooperative Registrar Health Camp Sahakara Spandana Spandana NEws
    Previous Articleಎಸ್.ಕೆ. ಗೋಲ್ಡ್‌ ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೇ.20 ಡಿವಿಡೆಂಡ್
    Next Article ಮುಗಿದೇ ಹೋಯ್ತಾ ಒಟಿಪಿಗಳ ಆಟ…?

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.