ಉಡುಪಿ: ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ ತೆಕ್ಕಟ್ಟೆ ಇದರ ಆರನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ತೆಕ್ಕಟ್ಟೆಯ ಹಯಗ್ರೀವ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಅಶೋಕ ಕುಮಾರ್ ಪಿ ಅಧ್ಯಕ್ಷತೆಯಲ್ಲಿ ನಡೆಯಿತು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಸಂಸ್ಥೆಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ನಿರ್ದೇಶಕರಾದ ಸುಬ್ಬಣ್ಣ ಉಪಾಧ್ಯಾಯ , ಎನ್.ಕರುಣಾಕರ ಶೆಟ್ಟಿ, ಎಂ.ಬಾಬು ಪೂಜಾರಿ, ಕೆ.ಪುಷ್ಪಲತಾ ಶೆಟ್ಟಿ, ವಿಜಯಲಕ್ಷ್ಮಿ ಅಡಿಗ, ಹಾಗೂ ಶಾಲಿನಿ ವಿ.ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಚಂದ್ರಕಾಂತ ಶೆಟ್ಟಿ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಹಾಯಕ ಆಯುಕ್ತ ಪ್ರಶಾಂತ ಶೆಟ್ಟಿ ಹಾಗೂ ವೈದಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಕುಸುಮಾಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಗಣ್ಯರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಲೆಕ್ಕಪರಿಶೋಧಕ ರಾಜೀವ್ ಶೆಟ್ಟಿ ಮಲ್ಯಾಡಿ , ವಿಜಯ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೇಜರ್ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಉತ್ತಮ ಗ್ರಾಹಕರನ್ನು ಹಾಗೂ ಸಂಸ್ಥೆಯ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಪಿಗ್ಮಿ ಏಜೆಂಟ್ ಅವರನ್ನು ಗುರುತಿಸಿ ಗೌರವಿಸಲಾಯಿತು. ಅಶಕ್ತ ಸದಸ್ಯರಾದ ಶ್ರೀಮತಿ ಶೆಡ್ತಿ ಹಲ್ತೂರು, ಗಿರಿಜಮ್ಮ ಶೆಡ್ತಿ ಕೆದೂರು, ಚಂದ್ರಮತಿ ಆಚಾರ್ತಿ ಉಳ್ತೂರು, ರಾಮ ಮೊಗವೀರ ಮಲ್ಯಾಡಿ , ರಾಧಾ ತೆಕ್ಕಟ್ಟೆ ಅವರಿಗೆ ಸಹಾಯಧನ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಅಶೋಕ ಕುಮಾರ್ ಪಿ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಂಸ್ಥೆಯು ವರದಿ ವರ್ಷದಲ್ಲಿ ರೂ. 31,19,700.15 ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ಘೋಷಿಸಿದರು.
ಮೂಕಾಂಬಿಕಾ ಅಡಿಗ ಪ್ರಾರ್ಥಿಸಿದರು. ಸಿಬ್ಬಂದಿ ಅಮೃತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು. ರೇಷ್ಮಾ ಶೆಟ್ಟಿ ಸಹಕರಿಸಿದರು. ಶಾಖಾ ಪ್ರಬಂಧಕ ಕೆ.ವಿಶ್ವನಾಥ ಶೆಟ್ಟಿ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com