Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೆ.ಬಿ.ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಪ್ರದಾನ
    News

    ಕೆ.ಬಿ.ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಪ್ರದಾನ

    adminBy adminSeptember 4, 2024

    ಪ್ರತಿಷ್ಠಿತ ಶ್ರೀ ರಾಮಕೃಷ್ಣ ಕ್ರೆಡಿಟ್‌ ಕೋ ಆಪರೇಟವ್‌ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಗೌರವ

    ಮಂಗಳೂರು: ಪ್ರತಿಷ್ಠಿತ ಸಹಕಾರಿ ಸಂಸ್ಥೆ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಗಳಿಸಿ ಅತ್ಯುನ್ನತ ಸಾಧನೆ ಮಾಡಿದ ಸಂಘದ ಸದಸ್ಯರ ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಸ್ಥಾಪಕಾಧ್ಯಕ್ಷ ಕೆ.ಬಿ.ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಇತ್ತೀಚೆಗೆ ಮ೦ಗಳೂರಿನ ಉರ್ವ ಸೆಂಟನರಿ ಸಭಾಭವನದಲ್ಲಿ ಜರಗಿತು.

    ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಐ.ಎಸ್.ಆರ್ ಅಂಡ್ ಸಿ.ಆರ್.ಎಲ್‌ನ ಉಪಾಧ್ಯಕ್ಷ ಹಾಗೂ ಮಾಜಿ ಉಪಕುಲಪತಿ ಪ್ರೊ. ಡಾ|ಸತೀಶ್ ಕುಮಾರ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಸಂಘದ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ಪ್ರಾಸ್ತಾವಿಕ ಮಾತನಾಡಿ,  ತಮ್ಮ 78ನೇ ವಯಸ್ಸಿನಲ್ಲಿ ಸಂಘವನ್ನು ಸ್ಥಾಪಿಸಲು ಮುಂದಾಳತ್ವ ವಹಿಸಿ ಆರಂಭಿಕ ೨೦ ವರ್ಷಗಳ ಕಾಲ ಸಂಘದಲ್ಲಿ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಗೆ ಉತ್ತಮ ಅಡಿಪಾಯ ಹಾಕಿಕೊಟ್ಟ ಸಂಘದ ಸ್ಥಾಪಕಾಧ್ಯಕ್ಷ ದಿ.ಕೆ.ಬಿ.ಜಯಪಾಲ ಶೆಟ್ಟಿಯವರ ಸಾಧನೆಗಳನ್ನು ಯುವಪೀಳಿಗೆಗೆ ಪರಿಚಯಿಸಿಕೊಟ್ಟು ಆ ಮೂಲಕ ಅವರ ಹೆಸರು ಚಿರಸ್ಥಾಯಿಯಾಗಿ ಉಳಿವಂತಾಗುವ ನಿಟ್ಟಿನಲ್ಲಿ ಸಂಘವು ಕಳೆದ 7 ವರ್ಷಗಳಿಂದ ಸಿಬ್ಬಂದಿಗಳ ಮಕ್ಕಳಿಗೆ ಹಾಗೂ ಕಳೆದ 2 ವರ್ಷಗಳಿಂದ ಸಂಘದ ಸರ್ವ ಸದಸ್ಯರ ಮಕ್ಕಳಿಗೆ ಕೂಡ ಈ ಪ್ರತಿಭಾ ಪುರಸ್ಕಾರವನ್ನು  ಸ್ಥಾಪಕಾಧ್ಯಕ್ಷರ ಸ್ಮರಣಾರ್ಥ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರತಿಭಾ ಪುರಸ್ಕಾರವನ್ನು ಪದವಿ ಹಾಗೂ ವೃತ್ತಿಪರ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೂಡ ವಿಸ್ತರಿಸುವುದಲ್ಲದೇ, ದಿ. ಕೆ.ಬಿ.ಜಯಪಾಲ ಶೆಟ್ಟಿಯವರ ಪತ್ನಿ ಲಕ್ಷ್ಮೀ ಜಯಪಾಲ ಶೆಟ್ಟಿ ಮತ್ತು ಅವರ ಮಕ್ಕಳು ನಮ್ಮ ಸಂಘದಲ್ಲಿ ಸ್ಥಾಪಕಾಧ್ಯಕ್ಷರ ಹೆಸರಲ್ಲಿ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಗಣಿತ ವಿಷಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಧ್ಯಾರ್ಥಿಗಳಿಗೆ ವಿಶೇಷ ಪ್ರತಿಭಾ ಪುರಸ್ಕಾರವನ್ನು ನೀಡಲು ಪ್ರಸ್ತಾವಿಸಿದ್ದು ಅದನ್ನು ಕೂಡ ಮುಂದಿನ ವರ್ಷದಿಂದ ಅನುಷ್ಠಾನಿಸಲಾಗುವುದು ಎಂದು ತಿಳಿಸಿದರು.

    ಡಾ. ಸತೀಶ್ ಕುಮಾರ್ ಭಂಡಾರಿ ಮಾತನಾಡಿ, ಸಂಘದ ಸ್ಥಾಪಕಾಧ್ಯಕ್ಷರಾದ ಕೆ.ಬಿ.ಜಯಪಾಲ ಶೆಟ್ಟಿಯವರು ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ಊರಿನ ಅಂದಿನ ಪರಿಸ್ಥಿತಿಯಲ್ಲಿ ಕಾಲೇಜು ವ್ಯಾಸಂಗ ಮಾಡಿ ಇಂಜಿನಿಯರಿಂಗ್ ಪದವಿ ಪಡೆದು ನಾಗರಿಕ ವಿಮಾನ ಸೇವೆಯ ಕ್ಷೇತ್ರವನ್ನು ತನ್ನ ಉದ್ಯೋಗವಾಗಿ ಆಯ್ಕೆ ಮಾಡಿಕೊಂಡು ದೇಶದ ರಾಜಧಾನಿ ಅಲ್ಲದೆ, ವಿದೇಶಗಳಲ್ಲೂ ತನ್ನ ಪರಿಣತಿಯ ಛಾಪನ್ನು ಮೂಡಿಸಿ  ವಿಶ್ವಸಂಸ್ಥೆಯಿಂದ ವಿಶೇಷ ಸೇವಾ ಗೌರವಕ್ಕೆ ಪಾತ್ರರಾಗಿದ್ದರು. ನಿವೃತ್ತಿಯ ನಂತರ ಹುಟ್ಟೂರಲ್ಲಿ ನೆಲೆಸಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸೇರಿದಂತೆ ಸಮಾಜ ಸೇವಾ ಸಂಸ್ಥೆಗಳನ್ನು ಹುಟ್ಟುಹಾಕಿ ಬೆಳೆಸಿದವರು. ಅದೇ ರೀತಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ತನ್ನ ಅನುಭವದ ಧಾರೆಯನ್ನು ಎರೆದು ಕಟ್ಟಿ ಬೆಳೆಸಿ, ಇಂದು ದಾಖಲೆಯ ವ್ಯವಹಾರವನ್ನು ಹೊಂದಿ ರಾಜ್ಯದಲ್ಲಿ ಅಗ್ರಗಣ್ಯ ಸಂಸ್ಥೆಯಾಗಿ ಮೂಡಿಬರಲು ಮೇಧಾವಿತ್ವದ ನಾಯಕತ್ವ ಗುಣವುಳ್ಳ ಸಂಘದ ಅಧ್ಯಕ್ಷರಾದ ಶ್ರೀ ಜೈರಾಜ್ ರೈಯವರಂಥಹ ವ್ಯಕ್ತಿತ್ವ ಇಂದಿನ ಯುವ ಪೀಳಿಗೆಗೆ ನಿಜಕ್ಕೂ ಅನುಕರಣೀಯ. ಇಂತಹ ಮಹಾನ್ ವ್ಯಕ್ತಿತ್ವಗಳಿಂದ ಪ್ರಭಾವಿತರಾಗಿಕೊಂಡು ವಿದ್ಯಾರ್ಥಿಗಳು ಪಠ್ಯೇತರ ವಿಷಯಗಳಲ್ಲಿ ಕುಶಲತೆಗಳನ್ನು ಪಡೆದುಕೊಂಡು ಈ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ವ್ಯಕ್ತಿತ್ವದ ಮತ್ತು ಔದ್ಯೋಗಿಕ ಬೆಳವಣಿಗೆಯನ್ನು ಹೊಂದುವುದು ಅತ್ಯಗತ್ಯ ಎಂದು ಕಿವಿಮಾತು ಹೇಳಿದರು.

    ಸಂಘದ ಉಪಾಧ್ಯಕ್ಷೆ ಲಕ್ಷ್ಮೀ ಜಯಪಾಲ ಶೆಟ್ಟಿಯವರ ಉಪಸ್ಥಿತಿಯಲ್ಲಿ ಶುಭ ಸಂದೇಶವನ್ನು ವಾಚಿಸಲಾಯಿತು. ಸಂಘದಲ್ಲಿ 25 ವರ್ಷ ಸೇವೆ ಪೂರೈಸಿದ ಹಿರಿಯ ವ್ಯವಸ್ಥಾಪಕರಾದ ದಿನೇಶ್ ರೈ ಜೆ. ಎನ್. ಅವರನ್ನು ಅಭಿನಂದಿಸಲಾಯಿತು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಸಂಘದ ಸಿಬ್ಬಂದಿಗಳ ಮತ್ತು ಸದಸ್ಯರ ಒಟ್ಟು ೬೪ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಾಯಿತು.

    ಸಂಘದ ನಿರ್ದೇಶಕರಾದ ವಿಠಲ ಪಿ.ಶೆಟ್ಟಿ, ಎಂ.ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪಿ. ಬಿ.ದಿವಾಕರ ರೈ, ಕುಂಬ್ರ ದಯಾಕರ ಆಳ್ವ ಮತ್ತು ಅರಿಯಡ್ಕ ಚಿಕ್ಕಪ್ಪ ನಾಯಕ್, ಮಹಾಪ್ರಬಂಧಕ ಗಣೇಶ್ ಜಿ.ಕೆ. ಮತ್ತು ಮಕ್ಕಳ ಹೆತ್ತವರಾದ ಸಂಘದ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿರ್ದೇಶಕ ಪ್ರಸಾದ್ ಕೌಶಲ್ ಶೆಟ್ಟಿ ಉದ್ಘಾಟಕರ ವ್ಯಕ್ತಿ ಪರಿಚಯ ಮಾಡಿದರು. ಪಿ. ಬಿ. ದಿವಾಕರ ರೈ ಧನ್ಯವಾದ ಸಮರ್ಪಿಸಿದರು. ಶ್ರೀ ಧನಂಜಯ್ ಕುಮಾರ್ ಮತ್ತು ಶ್ರೀಮತಿ ಅಕ್ಷತಾ ಕುಮಾರಿಯವರು ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Bunts Sangha Co Operative ministry Cooperative Cooperative Department Cooperative Registrar K.B Jayapala Shetty K.Jairaj B Rai Sahakara Spandana Shree Ramakrishna Credit Co Operative Soceity Souharda Sahakari Spandana NEws
    Previous Articleದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಆಯ್ಕೆ
    Next Article ಸಾಲ ನೀಡುವಾಗ ಕ್ರಮಬದ್ಧ ದಾಖಲೆ ಪತ್ರಗಳ ಪರಿಶೀಲನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.