ಹಿರೇಕೆರೂರು ತಾಲೂಕು ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದಿಂದ ಶಿಕ್ಷಕರ ದಿನಾಚರಣೆ
ಹಿರೇಕೆರೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ದೇಶದ ಭವಿಷ್ಯಕ್ಕೆ ಬೇಕಾಗಿರುವ ಸ್ವಸ್ಥ, ಸದೃಢ ಯುವಜನತೆಯನ್ನು ನಿರ್ಮಿಸುವಲ್ಲಿ ಹಾಗೂ ದೇಶದ ಪ್ರತಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದಾದುದು ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.
ಹಿರೇಕೆರೂರು ತಾಲೂಕು ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಆಶ್ರಯದಲ್ಲಿ ಸಹಕಾರಿ ವಿದ್ಯಾಸಂಸ್ಥೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ರವರ ೧೩೬ನೇ ಜನ್ಮದಿನದ ಅಂಗವಾಗಿ ಹಿರೇಕೆರೂರು ಪಟ್ಟಣದ ಸಹಕಾರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಮಕ್ಕಳಿಗೆ ಜ್ಞಾನ ತುಂಬುವುದರ ಜೊತೆಗೆ ಜೀವನ ಮೌಲ್ಯಗಳನ್ನು, ಆದರ್ಶಗಳನ್ನು ತುಂಬಿ ಭವ್ಯ ಭಾರತ ನಿರ್ಮಾಣದಲ್ಲಿ ಶಿಕ್ಷಕರು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಅವರ ಪಾತ್ರ ಸಮಾಜದಲ್ಲಿ ಅತ್ಯಂತ ಹಿರಿದಾದುದು ಎಂದು ಶ್ಲಾಘಿಸಿದರು.
ಸಹಕಾರಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಎಸ್.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಕರ ಕಾರ್ಯ ಜನ ಮೆಚ್ಚುವಂತಹದ್ದು. ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹಾಗೂ ಸುಶಿಕ್ಷಿತ ಸಮಾಜ ನಿರ್ಮಾಣದ ಜವಾಬ್ದಾರಿ ಹಾಗೂ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕರು ಕಠಿಣ ಪರಿಶ್ರಮದಿಂದ, ಪ್ರಾಮಾಣಿಕತೆಯಿಂದ ವಿದ್ಯಾದಾನ ಮಾಡಬೇಕೆಂಬ ಕಾರ್ಯದಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ತಾಲೂಕಿನ ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಶಿಕ್ಷಕರು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದೇಶಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡುವುದು ತಮ್ಮ ಜವಾಬ್ದಾರಿಯಾಗಿದೆ. ಇಡೀ ಸಮಗ್ರ ಸಮಾಜದ ಜವಾಬ್ದಾರಿ ನಿಮ್ಮನ್ನು ಅವಲಂಭಿಸಿದೆ ಹಾಗೂ ನಿಮ್ಮ ಕಾರ್ಯ ಅಷ್ಟೇ ಪವಿತ್ರ ಕಾರ್ಯವಾಗಿದೆ ಎಂದು ಹೇಳಿದರು.
ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಸುಧಾ ಚಿಂದಿ, ಉಪಾಧ್ಯಕ್ಷರಾದ ರಾಜು ಕರಡಿ, ಸದಸ್ಯರಾದ ಮಹೇಂದ್ರ ಬಡಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಶ್ರೀಧರ, ಸಮನ್ವಯಾಧಿಕಾರಿಗಳಾದ ಎನ್.ಸುರೇಶಕುಮಾರ, ಕೆ.ಎಂ.ಎಫ್ ನಿರ್ದೇಶಕರಾದ ಹನುಮಂತಗೌಡ ಭರಮಣ್ಣನವರ, ಪ್ರಮುಖರಾದ ಮಲ್ಲನಗೌಡ ಪುಟ್ಟಪ್ಪಗೌಡ್ರ, ನಿಂಗಪ್ಪ ಚಳಗೇರಿ, ಮಲ್ಲಿಕಾರ್ಜುನ ಬುರಡಿಕಟ್ಟಿ, ಎಸ್.ವೀರಭದ್ರಯ್ಯ, ಕೆ.ಎಸ್.ಪುಟ್ಟಪ್ಪಗೌಡ್ರ ಹಾಗೂ ಸಹಸ್ರಾರು ಶಿಕ್ಷಕ ಬಂಧುಗಳು ಪಾಲ್ಗೊಂಡಿದ್ದರು. ಪ್ರಾಚಾರ್ಯ ಡಾ. ಎಸ್.ಬಿ.ಚನ್ನಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಆರ್.ಎಂ.ಕರೇಗೌಡ್ರ ವಂದಿಸಿದರು. ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಹಸ್ರಾರು ಜನ ಶಿಕ್ಷಕರಿಗೆ ಸಹಕಾರಿ ವಿದ್ಯಾಸಂಸ್ಥೆಯಿಂದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com