ವಾರ್ಷಿಕ ಮಹಾಸಭೆಯಲ್ಲಿ ಶೇ.15 ಡಿವಿಡೆಂಡ್ ಘೋಷಣೆ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 303.31 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು.
ಪಡೀಲಿನ ಬೈರಾಡಿಕೆರೆ ಹತ್ತಿರದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ಭಾನುವಾರ ನಡೆದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಈ ಮಾಹಿತಿ ನೀಡಿದರು.
ಸಂಘದ 2023-24ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘವು ಪ್ರಸ್ತುತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಶಾಖೆಗಳನ್ನು ಹೊಂದಿದ್ದು, 2023-24ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.275 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ. 210 ಕೋಟಿಗೂ ಮಿಕ್ಕಿ ಸಾಲ ನೀಡುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಸಂಘದ ಪ್ರಗತಿಗೆ ಸದಸ್ಯರಾದ ಸದಸ್ಯರ ಸಂಪೂರ್ಣ ಸಹಕಾರಕ್ಕೆ ಸದಾ ಋಣಿಯಾಗಿರುತ್ತೇವೆ ಎಂದು ಹೇಳಿದ ಚಿತ್ತರಂಜನ್ ಬೋಳಾರ್, ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ ಸಿಬ್ಬಂದಿ ವರ್ಗದ ಕಾರ್ಯವೈಖರಿಯನ್ನೂ ಮುಕ್ತಕಂಠದಿಂದ ಶ್ಲಾಘಿಸಿ, ಮುಂದಕ್ಕೆ ಸಂಘವು ಹಾಕಿಕೊಂಡಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ಸದಸ್ಯರ ಸಹಕಾರ ಕೋರಿದರು. ಸಂಘವು ವರದಿ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ. 147.54 ಲಕ್ಷ ಷೇರು ಬಂಡವಾಳ, ರೂ. 22,494.98 ಲಕ್ಷ ಠೇವಣಿ ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ರೂ. 17,848.39 ಲಕ್ಷ ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ರೂ. 23,649.04 ಲಕ್ಷ ಹೊಂದಿದೆ. ವರದಿ ವರ್ಷಕ್ಕೆ ಸಂಘವು ರೂ. 303.31 ಲಕ್ಷ ನಿವ್ವಳ ಲಾಭ ಗಳಿಸಿರುವುದು ಸಂಘದ ಹೆಗ್ಗಳಿಕೆಯಾಗಿದೆ ಎಂದು ಚಿತ್ತರಂಜನ್ ಬೋಳಾರ್ ಹೇಳಿದರು.
ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಇವರಿಂದ ಅತೀ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸುವ ಪ್ರಶಸ್ತಿಯನ್ನು ಸಂಘ ಪಡೆದಿರುತ್ತದೆ. 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಉತ್ತಮ ಸಹಕಾರಿ ಸಂಘ” ಪ್ರಶಸ್ತಿ ಹಾಗೂ ಸದಸ್ಯರ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ಸಂಘದ ಕಾರ್ಯವೈಖರಿಯನ್ನು ಗುರುತಿಸಿ ಸತತ 9 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಕ್ಕೆ ಸಭೆಯಲ್ಲಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್., ಚಂದ್ರಾವತಿ, ಉಮಾವತಿ ಮತ್ತು ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಅಭಿನಂದನಾ ಪುರಸ್ಕಾರ ಕಾರ್ಯಕ್ರಮವನ್ನು ಸಹಾಯಕ ಪ್ರಬಂಧಕ ವಿಶ್ವನಾಥ ನಿರೂಪಿಸಿದರು.
ಪ್ರತಿಭಾ ಪುರಸ್ಕಾರ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಗೌರವಾನ್ವಿತ ಸ್ಥಾನ ಅಲಂಕರಿಸಿದ ಸಂಘದ ಸದಸ್ಯರಾದ ಡಾ.ಸೇಸಪ್ಪ ಕೆ., ಯೋಗೀಶ್ ಕೋಟ್ಯಾನ್, ಶೀನ ಪೂಜಾರಿ, ಸತೀಶ್ ಕುಂಪಲ, ಹರೀಶ ಪಿ.ಡಿ, ಜಯವಿಕ್ರಂ ಪಿ., ವಿಜಯ್ ಕುಮಾರ್, ಪುರುಷೋತ್ತಮ ಪ್ರಭು, ಹೇಮಂತ್ ಕುಮಾರ್ ಗರೋಡಿ, ಶೇಕ್ ಅಬ್ದುಲ್ ಲತೀಫ್ ಸಾಹೇಬ್, ಯು.ಐತಪ್ಪ ಶೆಟ್ಟಿಗಾರ್, ದಿನೇಶ್ ನಾಯಕ್, ಸದಾಶಿವ ಪೂಜಾರಿ, ಬಿ.ರಾಜಶೇಖರ ಶೆಟ್ಟಿ, ಪ್ರವೀಣ್ ಎಸ್, ನವಾಜ್ ಹಾಗೂ ಹರೀಶ್ ಅಡ್ಯಾರ್ ಅವರನ್ನು ಸಂಘದ ಪರವಾಗಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಬಹುಮುಖ ಪ್ರತಿಭೆಯಾಗಿರುವ ಸಂಘದ ಸದಸ್ಯರ ಮಕ್ಕಳಾದ ಐಶ್ವರ್ಯ ಆರ್.ಪೂಜಾರಿ, ಹವೀಶ್ ಆರ್.ಪೂಜಾರಿ, ಪ್ರದ್ಯುನ್ ಕುಮಾರ್, ಯುಕ್ತಿಕ, ತಸ್ವಿ, ಪ್ರಣಮ್ಯ ಪಿ.ಕೋಟ್ಯಾನ್, ಅರ್ಚನಾ ಯಶೋಧರ್, ರಮ್ಯಾ ರಾವ್, ಶ್ರಾವಣಿ, ಪ್ರತೀಕ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಾದ ದೀಕ್ಷಾ, ಸಲೋನಿ ಜಯರಾಮ್ ಕಾರಂದೂರ್, ಪಿ.ಅಜ್ಮತುಲ್ ಮುಹಿಝ್, ವೀಕ್ಷಾ ಸುಮನ್, ಲಿಶಲ್ ಡಿಸೋಜ, ಭವಿಷ್ಯ, ಸ್ವೀಝಲ್ ಜೋಷ್ನಾ ಗೊನ್ಸಾಲ್ವಿಸ್, ಶ್ರಾವ್ನ್ ಹೆರ್ವಿನ್ ಫೆರ್ನಾಂಡಿಸ್ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಆಕಾಂಕ್ಷಾ ಕೆ.ಪೂಜಾರಿ, ಪವನ್ ಎನ್, ನಿಶಿತಾ ಪಿ.ಆರ್, ಕಾರ್ತಿಕ್ ಎಚ್.ಎಸ್, ಲೊರೈನ್ ಜೇನ್ ಡಿ ಅಲ್ಮೇಡಾ, ಹಿತಶ್ರೀ, ಶಾರ್ವರಿ ಎಮ್, ಜತೀಶ್ ಕೃಷ್ಣ ಕೆ. ಎಸ್, ಅರ್ಜುನ್, ರೇಷ್ಮಾ ಎಸ್, ಹಾಗೂ ಸುಹಾಸ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com