ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 1.59 ಕೋಟಿ ರೂ. ಲಾಭ
ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿಕೆ
ಉಳ್ಳಾಲ: ಕೋಟೆಕಾರು ಗ್ರಾಮದ ಬೀರಿಯಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ ಕೆ.ಸುಬ್ಬಣ್ಣಯ್ಯ ಹೆಸರಲ್ಲಿ ನಿರ್ಮಿಸಲಾಗಿರುವ ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಸೆ.15ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೋಟೆಕಾರು ವ್ಯವಸಾಯ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಸಭಾಂಗಣ, ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ.ಫಾರೂಕ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಹಕಾರ ಉಪನಿಬಂಧಕ ಎಚ್.ಎನ್.ರಮೇಶ್, ಪ್ರಮುಖರಾದ ಮೋನಪ್ಪ ಶೆಟ್ಟಿ ಎಕ್ಕಾರು, ಜೆ.ಬಾಲಕೃಷ್ಣ ಶೆಟ್ಟಿ, ಸುರೇಶ್ ಭಟ್ನಗರ, ಸಂತೋಷ್ ಕುಮಾರ್ ರೈ ಬೋಳಿಯಾರ್, ಸುಧೀರ್ ಕುಮಾರ್, ದಿವ್ಯ ಶೆಟ್ಟಿ ನಡಾರ್‌ಗುತ್ತು, ಮಾಲಿನಿ ಹಾಗೂ ಉದಯ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 808 ಕೋಟಿ ರೂ. ವ್ಯವಹಾರ ನಡೆಸಿ 1.75 ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿ ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದು ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿದರು.
ಸಂಘವು ವರದಿ ಸಾಲಿನ ಅಂತ್ಯಕ್ಕೆ ಸಂಘವು ‘ಎ’ ತರಗತಿಯ 9600 ಸದಸ್ಯರನ್ನು ಹಾಗೂ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿದೆ. 267 ಕೋಟಿ ಠೇವಣಿ ಸಂಗ್ರಹಿಸಿ, 357 ಕೋಟಿ ಠೇವಣಿ ಪಾವತಿಸಿ, ವರ್ಷಾಂತ್ಯಕ್ಕೆ 163 ಕೋಟಿ ಠೇವಣಿ ಹೊಂದುವ ಮೂಲಕ ಕಳೆದ ವರ್ಷಾಂತ್ಯಕ್ಕಿಂತ 10 ಕೋಟಿ ರೂ. ಪ್ರಗತಿ ಸಾಧಿಸಿದೆ ಎಂದು ವಿವರಿಸಿದರು.
173 ಕೋಟಿ ರೂ. ಸಾಲ ವಿತರಿಸಿ, 193 ಕೋಟಿ ವಸೂಲಿ ಮಾಡುವ ಮೂಲಕ ಶೇ.98 ಪ್ರಗತಿ ಸಾಧಿಸಿದೆ. 124 ಕೋಟಿ ಹೊರ ಸಾಲವಿದ್ದು ಆಡಿಟ್ ವರ್ಗೀಕರಣದಲ್ಲಿ ಹಲವಾರು ವರ್ಷಗಳಿಂದ ನಿರಂತರವಾಗಿ ‘ಎ’ ತರಗತಿ ಹೊಂದಿದೆ. ಸಂಘವು ವಿವಿಧ ಹಣಕಾಸು ಸಂಸ್ಥೆಗಳಲ್ಲಿ 48 ಕೋಟಿ ಠೇವಣಿ ವಿನಿಯೋಗಿಸಿ, 10 ಕೋಟಿ ನಿಧಿ ಹೊಂದಿದೆ. ಸಂಘ ಷೇರುದಾರರಿಗೆ ಶೇ.25 ಡಿವಿಡೆಂಟ್ ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಬುಸಾಲಿ ಕೆ.ಬಿ., ನಿರ್ದೇಶಕರಾದ ಗಂಗಾಧರ ಉಳ್ಳಾಲ‌್, ಕೆ.ಕೃಷ್ಣಪ್ಪ ಸಾಲ್ಯಾನ್, ಉದಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ , ರಾಘವ ಆರ್.ಉಚ್ಚಿಲ್, ಪದ್ಮಾವತಿ ಎಸ್.ಶೆಟ್ಟಿ, ಸುರೇಖಾ ಚಂದ್ರಹಾಸ, ನಾರಾಯಣ ತಲಪಾಡಿ, ಬಾಬು ನಾಯ್ಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರಿಗೆ ಸಹಾಯಧನ
ಅಡಿಕೆ ಬೆಳೆಗಾರರಿಗೆ ಕೆ.ಜಿ.ಗೆ 100 ರೂಪಾಯಿ ಸಹಾಯ ಧನದೊಂದಿಗೆ ಮೈಲು ತುತ್ತು ವಿತರಿಸುತ್ತಿದ್ದು ಪ್ರಸ್ತುತ ಸಾಲಿನಲ್ಲಿ 438 ರೈತರಿಗೆ 2,92,500ರೂ ಸಬ್ಸಿಡಿ ನೀಡಲಾಗಿದೆ ಎಂದು ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ತಿಳಿಸಿದರು. ಶಾಲಾ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ, ಸಂಘದ ಕಾರ್ಯವ್ಯಾಪ್ತಿಗೊಳಪಟ್ಟ ಪ್ರೌಢಶಾಲೆಯ 10ನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿ ಶಾಲೆಯ ಓರ್ವನಂತೆ 40 ವಿದ್ಯಾರ್ಥಿಗಳನ್ನು ಗೌರವಿಸಲಾಗಿದೆ. ಎಸ್ಸೆಸ್ಸೆಎಲ್ಸಿಯಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ಭತ್ತ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಎಕರೆಗೆ ಐದು ಸಾವಿರದಂತೆ 91 ರೈತರಿಗೆ 452000 ಪ್ರೋತ್ಸಾಹ ಧನ ನೀಡಲಾಗಿದೆ ಎಂದು ತಿಳಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com