ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಮಹಾಸಭೆ ಹಳೆಯಂಗಡಿಯ ಹರಿ ಓಂ ಸಭಾಭವನದಲ್ಲಿ ಇತ್ತೀಚೆಗೆ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ವರದಿ ವರ್ಷದಲ್ಲಿ ಸೊಸೈಟಿಯು ರೂ. 19.14 ಲಕ್ಷ ಲಾಭಾಂಶ ಗಳಿಸಿ, ಸದಸ್ಯರಿಗೆ 6% ಪಾಲು ಮುನಾಫೆಯನ್ನು ಘೋಷಿಸಲಾಯಿತು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಶಾಖೆಯನ್ನು ಹೊಂದಿರುವ ಹಳೆಯಂಗಡಿ ಕೋ ಆಪರೇಟಿವ್ ಸೊಸೈಟಿಯು ತನ್ನ ಮೂರು ವರ್ಷದ ಅವಧಿಯಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ. ಮಾರ್ಚ್ ಅಂತ್ಯಕ್ಕೆ ರೂ. 21.22 ಕೋಟಿ ಠೇವಣಿ, ರೂ. 85.76 ಲಕ್ಷ ಪಾಲು ಬಂಡವಾಳ, ರೂ. 18.21 ಕೋಟಿ ಸಾಲ ನೀಡಿದ್ದು, ಆಡಿಟ್ ವರ್ಗಿಕರಣದಲ್ಲಿ ‘ಎ’ ಎಂದು ಘೋಷಿಸಲಾಗಿದೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡಿದ “ವಿಶಿಷ್ಟ ಸಾಧನಾ ಪ್ರಶಸ್ತಿ”ಯನ್ನು ಪಡೆದುಕೊಂಡಿದೆ. ಸೊಸೈಟಿಯು 15 ಸಿಬ್ಬಂದಿಗಳನ್ನು ಹೊಂದಿದ್ದು, 1903 ಸದಸ್ಯರನ್ನು ಹೊಂದಿದೆ ಎಂದು ಅಧ್ಯಕ್ಷ ವಸಂತ್ ಬೆರ್ನಾರ್ಡ್ ತಿಳಿಸಿದರು.
ಇದೇ ಸಂದರ್ಭ ಸದಸ್ಯರ /ಅವಲಂಬಿತರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಉತ್ತಮ ರೀತಿಯ ವ್ಯವಹಾರ ನಡೆಸಿದ ಸ್ವ-ಸಹಾಯ ಗುಂಪುಗಳನ್ನು ಅಭಿನಂದಿಸಲಾಯಿತು. ಸೊಸೈಟಿಯ ಸದಸ್ಯರಾದ ಪ್ರಸ್ತುತ ಮೂಲ್ಕಿ ತಾಲೂಕಿನ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಆಲ್ವಿನ್ ಕ್ಲೆಮೆಂಟ್ ಕುಟಿನ್ಹೊ ಮತ್ತು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಸಾಧನೆಗೈದ ಸೊಸೈಟಿಯ ಸದಸ್ಯರಾದ ಸುಷ್ಮಾ ತಾರಾನಾಥ್ ಅವರನ್ನು ಅಭಿನಂದಿಸಲಾಯಿತು.
ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಪ್ರಧಾನ ಕಚೇರಿಯ ಪ್ರಥಮದರ್ಜೆ ಗುಮಾಸ್ತೆ ಲೋಲಾಕ್ಷಿ ವಂದಿಸಿದರು. ಹಳೆಯಂಗಡಿ ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ ಎಂ ಕಾರ್ಯಕ್ರಮ ನಿರೂಪಿಸಿದರು. ಸಾಧಕರ ಅಭಿನಂದನಾ ಕಾರ್ಯಕ್ರಮವನ್ನು ಪಡುಬಿದ್ರಿ ಶಾಖಾ ಪ್ರಬಂಧಕಿ ಪ್ರಜ್ಞಾ ಚಿರಾಗ್ ಮತ್ತು ಕಿನ್ನಿಗೋಳಿ ಶಾಖಾ ಪ್ರಬಂಧಕ ಮೋಹನ್‌ದಾಸ್ ನಿರ್ವಹಿಸಿದರು.
ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಡಾ.ಗಣೇಶ್ ಅಮೀನ್ ಸಂಕಮಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉಮಾನಾಥ್ ಜೆ.ಶೆಟ್ಟಿಗಾರ್, ಜೈಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನ್‌ರಾಜ್ ಕೋಟ್ಯಾನ್, ಮಿರ್ಜಾ ಅಹಮದ್, ಶೆರಿಲ್ ಅಯೋನ ಐಮನ್, ಹರೀಶ್ ಎನ್.ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್, ವಿಜಯ್ ಕುಮಾರ್ ಸನಿಲ್, ತನುಜಾ ಶೆಟ್ಟಿ ಹಾಜರಿದ್ದರು.