ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶ್ಲಾಘನೆ
ಕೋಟೆಕಾರು ಬೀರಿಯಲ್ಲಿ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧ ಲೋಕಾರ್ಪಣೆ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸಕ್ತ ಏಳು ಶಾಖೆಗಳನ್ನು ಹೊಂದಿದ್ದು 173 ಕೋಟಿ ರೂ. ಸಾಲ ನೀಡಿ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿ ಷೇರುದಾರರಿಗೆ ಶೇ.25 ಡಿವಿಡೆಂಡ್ ನೀಡುತ್ತಿದೆ. ಈ ಮೂಲಕ ಸಂಘವು ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಕೋಟೆಕಾರು ಗ್ರಾಮದ ಬೀರಿಯಲ್ಲಿ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ವಿದ್ಯಾರ್ಥಿಗಳು, ಕೃಷಿಕರಿಗೆ ಪ್ರೋತ್ಸಾಹ ನೀಡಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹಳಷ್ಟು ದೊಡ್ಡ ಹೆಸರು ಮಾಡಿರುವ ಜಿಲ್ಲೆ. ದೇಶದಲ್ಲೇ ಅತಿ ಹೆಚ್ಚು ವಾಣಿಜ್ಯ ಬ್ಯಾಂಕುಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದ್ದು ಉತ್ತಮ ಸೇವೆ ನೀಡುತ್ತಿವೆ. ಆದರೆ ವಾಣಿಜ್ಯ ಬ್ಯಾಂಕ್‌ಗಳು ಒಂದರ ಜೊತೆ ಇನ್ನೊಂದು ವಿಲೀನ ಆಗುತ್ತಿರುವುದರಿಂದ ಹಿಂದಿನ ಹಲವಾರು ಬ್ಯಾಂಕ್‌ಗಳು ಈಗ ಇಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಸಿಬ್ಬಂದಿಗೆ ಕನ್ನಡ ಭಾಷೆಯೂ ಗೊತ್ತಿಲ್ಲ. ಅವರು ಗ್ರಾಹಕರೊಂದಿಗೆ ಸರಿಯಾಗಿ ಸ್ಪಂದಿಸದ ಕಾರಣ ಬಹಳಷ್ಟು ಮಂದಿ ಸಹಕಾರಿ ಸಂಘಗಳ ಕಡೆ ಮುಖ ಮಾಡಿದ್ದಾರೆ. ಬಡವರಿಗೆ, ರೈತರಿಗೆ ಸಹಾಯ ಬೇಕಾದರೆ ಒಂದೇ ದಿನದಲ್ಲಿ ಒದಗಿಸಿಕೊಡುವುದು ಸಹಕಾರಿ ಸಂಘಗಳು ಆಗಿದೆ ಎಂದು ರಾಜೇಂದ್ರ ಕುಮಾರ್ ಹೇಳಿದರು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ, ಉತ್ತಮ ಕೆಲಸ ಮಾಡುವ ಮೂಲಕ ದೇಶಕ್ಕೆ ಮಾದರಿ ಎಂದು ತೋರಿಸಿಕೊಟ್ಟಿರುವ ಸಂಘಗಳಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವೂ ಸೇರಿದೆ. ಗ್ರಾಹಕರಿಗೆ ವಿಶ್ವಾಸಭರಿತ ಸೇವೆಯನ್ನು ಯಾವುದೇ ಕುಂದು ಬಾರದ ರೀತಿಯಲ್ಲಿ ಈ ಸಂಘ ನೀಡುತ್ತಿದೆ. ಎಲ್ಲರಿಗೂ ಪ್ರೇರಣೆ ಆಗುವ ರೀತಿಯಲ್ಲಿ ಸಹಕಾರಿ ಸಂಘ ಸೇವೆಗೈದು ಅದ್ವಿತೀಯ ಸಾಧನೆ ಮಾಡಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಸ್ವಾಗತಿಸಿ ಮಾತನಾಡಿ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು 14 ಗ್ರಾಮಗಳಲ್ಲಿ ಏಳು ಶಾಖೆಗಳನ್ನು ಹೊಂದಿ ಕಾರ್ಯನಿರ್ವಹಣೆ ಮಾಡುತ್ತಿದೆ. ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಅಡಕೆ ಬೆಳೆಗಾರರಿಗೆ, ಭತ್ತದ ಕೃಷಿಗೆ ನೆರವು ನೀಡಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಸಿಕ್ಕಿದೆ ಎಂದು ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ್, ಬ್ಯಾಂಕ್ ನಡೆದು ಬಂದ ದಾರಿ ಹಾಗೂ ಸಾಧನೆಗಳನ್ನು ವಿವರಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ನಾಮಫಲಕ ಅನಾವರಣ ಮಾಡಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ. ಎಸ್. ಗಟ್ಟಿ ದೀಪ ಪ್ರಜ್ವಲನೆ ಮಾಡಿದರು. ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಇಂಜಿನಿಯರ್ ಸಂತೋಷ್ ಕುಮಾರ್ ಶೆಟ್ಟಿ, ಗುತ್ತಿಗೆದಾರ ಪುರುಷೋತ್ತಮ ಶೆಟ್ಟಿ, ಸಂಸದ ಕ್ಯಾ.ಬೃಜೇಶ್ ಚೌಟ, ಕೆ.ಸುಬ್ಬಣ್ಣಯ್ಯ ಅವರ ಕುಟುಂಬದ ಸದಸ್ಯ ಗಣೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ್, ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹಾಗೂ ಉಪಾಧ್ಯಕ್ಷ ಅಬೂಸಾಲಿ ಕಿನ್ಯಾ ಅವರನ್ನು ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಸಹಕಾರ ಸಂಘಗಳ ಜಿಲ್ಲಾ ಉಪನಿಬಂಧಕ ಎಚ್.ಎನ್. ರಮೇಶ್, ಮಂಗಳೂರು ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ಪ್ರಮುಖರಾದ ಜೆ.ಬಾಲಕೃಷ್ಣ ಶೆಟ್ಟಿ, ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ಸುರೇಶ್ ಭಟ್ನಗರ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜಿ., ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ಸತೀಶ್ ಶೆಟ್ಟಿ ನಡಾರ್ಗುತ್ತು, ಸದಸ್ಯ ಉದಯ ಕುಮಾರ್ ಶೆಟ್ಟಿ, ಸಂಘದ ನಿರ್ದೇಶಕರಾದ ಗಂಗಾಧರ. ಯು, ಕೆ.ಕೃಷ್ಣಪ್ಪ ಸಾಲಿಯಾನ್, ಉದಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು, ರಾಘವ ಆರ್.ಉಚ್ಚಿಲ್, ರಾಘವ ಸಿ.ಉಚ್ಚಿಲ್, ಪದ್ಮಾವತಿ ಎಸ್.ಶೆಟ್ಟಿ, ಸುರೇಖಾ ಚಂದ್ರಹಾಸ, ಬಾಬು ನಾಯ್ಕ, ಕಿರಣ್ ಕುಮಾರ್ ಶೆಟ್ಟಿ, ಪೆರ್ಮನ್ನೂರು ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ, ಸಂಘದ ಮಾಜಿ ಅಧ್ಯಕ್ಷ ಹರ್ಷರಾಜ್ ಮುದ್ಯ ಮೊದಲಾದವರು ಉಪಸ್ಥಿತರಿದ್ದರು.
ಮೋಕ್ಷಿತ್ ಉಚ್ಚಿಲ್ ನಿರ್ವಹಣೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನಡೆಯಿತು. ಪತ್ರಕರ್ತ ಸತೀಶ್ ಪುಂಡಿಕಾಯಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ನಿರ್ದೇಶಕ ಕೃಷ್ಣಪ್ಪ ಕೆ. ಸಾಲಿಯಾನ್ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com