Author: admin
ವಾರ್ಷಿಕ ₹285 ಕೋಟಿ ವ್ಯವಹಾರ ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. 2025–26ನೇ ಹಣಕಾಸು ವರ್ಷದಲ್ಲಿ ಸುಮಾರು ₹285 ಕೋಟಿ ಒಟ್ಟು ವ್ಯವಹಾರ ನಡೆಸಿದ್ದು, ₹1.25 ಕೋಟಿ ನಿವ್ವಳ ಲಾಭ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ. https://chat.whatsapp.com/FCEnlTkAKCC0MGPhXtX4i4 1997ರಲ್ಲಿ ಸ್ಥಾಪನೆಯಾದ ಈ ಸಹಕಾರ ಸಂಘವು ಸಹಕಾರ ಕ್ಷೇತ್ರದಲ್ಲಿ ಮೂರು ದಶಕಗಳ ಸೇವೆಯನ್ನು ಪೂರ್ಣಗೊಳಿಸುವ ಹೊಸ್ತಿಲಿನಲ್ಲಿದ್ದು, ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ ಜಿಲ್ಲೆಯಾದ್ಯಂತ ವಿಸ್ತರಿಸಿದೆ. ಪ್ರಸ್ತುತ ಉಡುಪಿ, ಮಲ್ಪೆ, ಉದ್ಯಾವರ, ಶಿರ್ವ ಹಾಗೂ ಹೂಡೆ–ಕೆಮ್ಮಣ್ಣುವಿನಲ್ಲಿ ಒಟ್ಟು ಐದು ಶಾಖೆಗಳ ಮೂಲಕ ಸದಸ್ಯರು ಹಾಗೂ ಗ್ರಾಹಕರಿಗೆ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಸಂಘವು 8,187 ಸದಸ್ಯರನ್ನು ಹೊಂದಿದ್ದು, ₹1.20 ಕೋಟಿ ಪಾಲು ಬಂಡವಾಳ, ₹58.24 ಕೋಟಿ ಠೇವಣಿ, ₹49 ಕೋಟಿ ಹೊರಬಾಕಿ ಸಾಲ, ₹13.75 ಕೋಟಿ ಹೂಡಿಕೆ, ₹3.69 ಕೋಟಿ ನಿಧಿಗಳು ಹಾಗೂ ₹63.13 ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ. ಸಾಲ ವಸೂಲಾತಿಯಲ್ಲಿ 97 ಶೇಕಡಾ ಸಾಧನೆ ಮಾಡಿರುವ ಈ ಸಂಸ್ಥೆ, ಲೆಕ್ಕಪರಿಶೋಧನೆಯಲ್ಲಿ…
ಆಗಸ್ಟ್ 9ರಂದು ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ
ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಆಗಸ್ಟ್ 9ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಮಂಗಳೂರಿನ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಸಮೀಪದ ಶ್ರೀ ರಾಧಾಕೃಷ್ಣ ಹಾಲ್‌ನಲ್ಲಿ (ಬಾಳಂಭಟ್ ಹಾಲ್) ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಪ್ರಜ್ವಲನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಕಳ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರೂ, ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರೂ ಆಗಿರುವ ಡಾ.ಸುಧಾಕರ ಶೆಟ್ಟಿಯವರು ಶುಭಾಶಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ, ಕರ್ನಾಟಕ ಸರ್ಕಾರದ ಮಾಜಿ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್, ಐಎಎಸ್ (ನಿವೃತ್ತ) ಭಾಗವಹಿಸಲಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಅವರು ಭಾಗವಹಿಸಲಿದ್ದಾರೆ.…
ಗೃಹ ಸಾಲ ಮಿತಿಯಲ್ಲಿ ಹೆಚ್ಚಳ; ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳಿಗೆ ಏನು ಬದಲಾವಣೆ? ನವದೆಹಲಿ: ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳ (RCBs) ಸಾಲ ವಿತರಣೆಯಲ್ಲಿ ಏಕಾಗ್ರತಾ ಅಪಾಯವನ್ನು (Concentration Risk) ಕಡಿಮೆ ಮಾಡುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಹೊಸ ಕರಡು ನಿಯಮಗಳಲ್ಲಿ ಸಾಲದ ಅಪಾಯ ನಿಯಂತ್ರಣವನ್ನು ಬಿಗಿಗೊಳಿಸುವುದರ ಜೊತೆಗೆ, ಅರ್ಹ ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳಿಗೆ ವೈಯಕ್ತಿಕ ಗೃಹ ಸಾಲದ ಮಿತಿಯನ್ನು ಹೆಚ್ಚಿಸುವ ಪ್ರಸ್ತಾವನೆಯೂ ಇದೆ. https://chat.whatsapp.com/FCEnlTkAKCC0MGPhXtX4i4 ಆರ್‌ಬಿಐನ ಪ್ರಸ್ತಾವನೆ ರಾಜ್ಯ ಸಹಕಾರಿ ಬ್ಯಾಂಕ್‌ಗಳು (StCBs) ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ (DCCBs) ಸಾಲ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬ್ಯಾಂಕಿನ ಗಾತ್ರ, ಬಂಡವಾಳ ಸಾಮರ್ಥ್ಯ ಮತ್ತು ಅಪಾಯ ನಿರ್ವಹಣಾ ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಲದ ಮಿತಿಗಳನ್ನು ನಿಗದಿಪಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಹೊಸ ಕರಡು ನಿಯಮಗಳ ಪ್ರಮುಖ ಅಂಶವೆಂದರೆ ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳಿಗೆ ವೈಯಕ್ತಿಕ ಗೃಹ ಸಾಲದ ಮಿತಿಯನ್ನು ಪರಿಷ್ಕರಿಸುವುದು. ಇದರಿಂದ ಬಲಿಷ್ಠ ಹಣಕಾಸು ಸ್ಥಿತಿ…
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಎಂಟನೇ ಶಾಖೆಯಾದ ದೇರಳಕಟ್ಟೆ ಶಾಖೆಯು 15ನೇ ವರ್ಷಕ್ಕೆ ಪದಾರ್ಪಣೆಗೈಯುತ್ತಿರುವ ಶುಭ ಸಂದರ್ಭದಲ್ಲಿ ನಾಳೆ (ಆಗಸ್ಟ್ 8) ಬೆಳಗ್ಗೆ 10.30ರಿಂದ ಅಸೈಗೋಳಿ ಬಂಟರ ಭವನದಲ್ಲಿ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. https://chat.whatsapp.com/FCEnlTkAKCC0MGPhXtX4i4 ಸಂಘದ ಬೆಳವಣಿಗೆಯಲ್ಲಿ ಪಾತ್ರ ವಹಿಸಿ ಸಂಘದ ಅದ್ಭುತವಾದ ಪ್ರಗತಿಗೆ ಕಾರಣರಾದ ಎಲ್ಲ ಸದಸ್ಯರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಸದಸ್ಯರೂ ಭಾಗವಹಿಸುವಂತೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಯವರು, ಶಾಖಾ ಪ್ರಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ಆಗಸ್ಟ್ ೮ರಂದು ಶನಿವಾರ ಬೆಳಗ್ಗೆ ೯.೩೦ರಿಂದ ಮಧ್ಯಾಹ್ನ ೧೨.೩೦ರವರೆಗೆ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಛಗೊಳಿಸುವುದು, ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡಲಾಗುವುದು. ಇತರೆ ವೈದ್ಯಕೀಯ ಸೇವೆಗಳು ಕೂಡ ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಇದು ಸಂಘದ ವತಿಯಿಂದ ಜರುಗುವ ೧೧೩ನೇ…
ಬೆಂಗಳೂರು: ಪಟ್ಟಣ ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿ ಹಾಗೂ ಆಡಳಿತ ವ್ಯವಸ್ಥೆಗೆ ಸಂಬಂಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ನಿರ್ದೇಶನಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆಗಸ್ಟ್ 14ಕ್ಕೆ ಮುಂದೂಡಿದೆ. ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಪ್ರಕರಣವನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಮಹಾಸಂಘ, ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತ, ತುಮಕೂರು ಗ್ರೇನ್ ಮರ್ಚಂಟ್ಸ್ ಸಹಕಾರಿ ಬ್ಯಾಂಕ್, ತುಮಕೂರು ವೀರಶೈವ ಸಹಕಾರಿ ಬ್ಯಾಂಕ್, ಮಲ್ಲೇಶ್ವರಂ ಸಹಕಾರಿ ಬ್ಯಾಂಕ್ ಸೇರಿದಂತೆ ಹಲವು ಸಹಕಾರಿ ಬ್ಯಾಂಕ್‌ಗಳು ಈ ಅರ್ಜಿಗಳನ್ನು ಸಲ್ಲಿಸಿವೆ. ಅರ್ಜಿದಾರರು 2025ರ ನವೆಂಬರ್ 28 ಹಾಗೂ 2026ರ ಮೇ 25ರಂದು ಆರ್‌ಬಿಐ ಹೊರಡಿಸಿದ ಸುತ್ತೋಲೆಗಳನ್ನು ಪ್ರಶ್ನಿಸಿದ್ದಾರೆ. ಅರ್ಜಿದಾರರ ವಾದದ ಪ್ರಕಾರ, ಸಹಕಾರಿ ಸಂಘಗಳ ಆಡಳಿತ, ನಿರ್ದೇಶಕರ ಅಧಿಕಾರಾವಧಿ ಹಾಗೂ ನಿರ್ವಹಣೆಗೆ ಸಂಬಂಧಿಸಿದ ವಿಷಯಗಳು ರಾಜ್ಯ ಪಟ್ಟಿಯ ವ್ಯಾಪ್ತಿಗೆ ಸೇರಿದ್ದು, ಅವುಗಳನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ, 1959ರ ಪ್ರಕಾರವೇ…
ಬೆಂಗಳೂರು: ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20 ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಬೇಕು ಮತ್ತು ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿವರ್ಷ ತಮ್ಮ ಆಸ್ತಿ ವಿವರ ಘೋಷಿಸಬೇಕು ಎಂಬುದು ಸೇರಿದಂತೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ 2025ರಲ್ಲಿ ತರಲಾಗಿರುವ ಹಲವು ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. https://chat.whatsapp.com/FCEnlTkAKCC0MGPhXtX4i4 ಈ ವಿಚಾರವಾಗಿ ಶಿವಮೊಗ್ಗದ ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಮಹಾಮಂಡಳ ನಿಯಮಿತ, ದಿ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತವು ಸಲ್ಲಿಸಿರುವ ಅರ್ಜಿಯು ನ್ಯಾ| ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿbಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ, ಸಹಕಾರ ಇಲಾಖೆ, ಸಂಸದೀಯ ಮತ್ತು ಶಾಸನ ರಚನಾ ಇಲಾಖೆ, ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆ.18ಕ್ಕೆ…
ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಲ್ಯಪದವು ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ
ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಶಕ್ತಿನಗರದ ನಾಲ್ಯಪದವು ಪಿಎಂಶ್ರೀ ಕೆಪಿಎಸ್ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ನೀಡಲಾಯಿತು. https://chat.whatsapp.com/FCEnlTkAKCC0MGPhXtX4i4 ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ ಶೆಣೈಯವರು ಶಾಲೆಗೆ ಅಕ್ವಾಗಾರ್ಡ್ ಅನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಡಾ.ಪ್ರಶಾಂತ್ ಕೆ.ಎಸ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪದವು ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷರಾದ ಕುಶಲ್ ಕುಮಾರ್, ಸಂಚಾಲಕರಾದ ಅಶೋಕ್ ನಾಯಕ್ ಮತ್ತು ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
₹10,000 ಕೋಟಿ ಠೇವಣಿ ಅರ್ಹತೆ: ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಪರವಾನಗಿಗೆ ದೇಶದಲ್ಲಿ ಕೇವಲ 3 ಸಹಕಾರಿ ಸಂಸ್ಥೆಗಳು!
ಆರ್‌ಬಿಐನ ‘ಆನ್-ಟ್ಯಾಪ್’ ಯುಸಿಬಿ ಪರವಾನಗಿ ಕರಡು ಮಾರ್ಗಸೂಚಿ; ₹300 ಕೋಟಿ ನಿವ್ವಳ ಮೌಲ್ಯ, 12% ಸಿಆರ್‌ಎಆರ್ ಸೇರಿ ಕಠಿಣ ಮಾನದಂಡ ನವದೆಹಲಿ: ಪಟ್ಟಣ ಸಹಕಾರಿ ಬ್ಯಾಂಕ್‌ಗಳ (ಯುಸಿಬಿ) ಹೊಸ ಪರವಾನಗಿ ವ್ಯವಸ್ಥೆಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ‘ಆನ್-ಟ್ಯಾಪ್’ ಪರವಾನಗಿ ಕರಡು ಮಾರ್ಗಸೂಚಿಗಳು ಸಹಕಾರಿ ಸಂಸ್ಥೆಗಳಿಗೆ ಕಠಿಣ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿವೆ. ಈ ಪೈಕಿ ₹10,000 ಕೋಟಿಗಿಂತ ಹೆಚ್ಚಿನ ಠೇವಣಿ ಹೊಂದಿರುವುದು ಪ್ರಮುಖ ಮಾನದಂಡವಾಗಿದ್ದು, ಪ್ರಸ್ತುತ ದೇಶದಲ್ಲಿ ಕೇವಲ ಮೂರು ಸಹಕಾರಿ ಸಂಸ್ಥೆಗಳು ಈ ಮಾನದಂಡವನ್ನು ಪೂರೈಸುತ್ತಿವೆ. https://chat.whatsapp.com/FCEnlTkAKCC0MGPhXtX4i4 ಲಭ್ಯವಿರುವ ವಿಶ್ಲೇಷಣೆಯ ಪ್ರಕಾರ, ಬುಲ್ದಾಣಾ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ, ಲೋಕಮಾನ್ಯ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಹಾಗೂ ರೆಪ್ಕೋ ಬ್ಯಾಂಕ್ (Repatriates Cooperative Finance and Development Bank Ltd.) ₹10,000 ಕೋಟಿಗೂ ಅಧಿಕ ಠೇವಣಿ ಹೊಂದಿರುವ ಸಹಕಾರಿ ಸಂಸ್ಥೆಗಳಾಗಿವೆ. ಬುಲ್ದಾಣಾ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಮತ್ತು ಲೋಕಮಾನ್ಯ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಎರಡೂ 2002ರ ಬಹುರಾಜ್ಯ…
ಮಂಗಳೂರು: 1977ರಲ್ಲಿ ಕಾರ್ಯಾರಂಭ ಮಾಡಿರುವ ಭಗವತೀ ಸಹಕಾರ ಬ್ಯಾಂಕಿನ 50ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 9ರಂದು ಭಾನುವಾರ ಬೆಳಗ್ಗೆ 10.30ರಿಂದ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕೂಟಕ್ಕಳ ಆಡಿಟೋರಿಯಂನಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನ ಜಪ್ಪು ಮೋರ್ಗನ್ಸ್‌ಗೇಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಗವತೀ ಸಹಕಾರ ಬ್ಯಾಂಕ್‌ಗೆ ಈ ಬಾರಿ ಸುವರ್ಣ ಮಹೋತ್ಸವ ವರ್ಷವಾಗಿದೆ. ವಾರ್ಷಿಕ ಮಹಾಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಮಾಧವ ಬಿ.ಎಂ, ಉಪಾಧ್ಯಕ್ಷರಾದ ದೇವದಾಸ್ ಕೊಲ್ಯ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಸುಷ್ಮಾ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
