Author: admin
ಸಹಕಾರ ಸಪ್ತಾಹ ಸಮಾರೋಪದಲ್ಲಿ ಸಚಿವ ರಾಜಣ್ಣ ಪ್ರತಿಪಾದನೆ ಬೆಳಗಾವಿ: ‘ಈ ಹಿಂದೆ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸದ ಕಾರಣ, ರೈತರು ತಾವು ಬೆಳೆದ ಬೆಳೆಗೆ ಬೆಂಕಿ ಹಚ್ಚಬೇಕಾದ ಪರಿಸ್ಥಿತಿ ಇತ್ತು. ಆದರೆ ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳು ಸಕ್ಕರೆ ಕಾರ್ಖಾನೆಗಳ ಸ್ಥಾಪನೆಗೆ ಸಾಲ ಸೌಲಭ್ಯ ಒದಗಿಸಿದ ನಂತರ, ಅನೇಕ ಸಹಕಾರ ಮತ್ತು ಖಾಸಗಿ ಕಾರ್ಖಾನೆ ಆರಂಭವಾದವು. ಹಾಗಾಗಿ ಇಂದು ಕಬ್ಬು ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಬೆಳಗಾವಿಯಲ್ಲಿ ಬುಧವಾರ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರ ಸಂಘಗಳಲ್ಲಿ ಕೆಲವರು ಮಾಡಿದ ತಪ್ಪುಗಳು ಇಡೀ ಕ್ಷೇತ್ರಕ್ಕೆ ಕಳಂಕ ತರುತ್ತಿರುವುದು ಸರಿಯಲ್ಲ, ವಂಚಕರು ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರು ಬಳಸಿಕೊಂಡು ಜನರನ್ನು ವಂಚಿಸಿದ ಘಟನೆಗಳೂ ನಮ್ಮ ಗಮನಕ್ಕೆ ಬಂದಿವೆ’ ಎಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ‘ನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ, ಜನ ಸಹಕಾರ ಸಂಸ್ಥೆಗಳಲ್ಲಿ ಠೇವಣಿ ಇರಿಸುತ್ತಾರೆ. ಉತ್ತಮರಲ್ಲದವರು…
ಬೆಳಗಾವಿ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಠ, ವಿಶೇಷ ಸೇವಾ ಕಾರ್ಯಗಳು ಮತ್ತು ಶಿಸ್ತುಬದ್ಧ ಆಡಳಿತದಿಂದ ತನ್ನದೇ ಛಾಪು ಮೂಡಿಸಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಬೆಳಗಾವಿಯಲ್ಲಿ ಗುರುವಾರ ಸಮಾಪನಗೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಶ್ರೇಷ್ಠ ಸಹಕಾರಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮತ್ತು ಅನೇಕ ಸಂಸ್ಥೆಗಳು ಜಂಟಿಯಾಗಿ ಬೆಳಗಾವಿಯ ಕೆಎಲ್‌ಇ ವಿದ್ಯಾಸಂಸ್ಥೆಯ ಜೆ.ಎನ್.ಎಂ.ಸಿ. ಆವರಣದಲ್ಲಿ ಆಯೋಜಿಸಿದ್ದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಎಂಟು ಜಿಲ್ಲೆಗಳನ್ನೊಳಗೊಂಡ ಮೈಸೂರು ಪ್ರಾಂತದ ಒಬ್ಬರಿಗೆ ಮಾತ್ರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಸೊಸೈಟಿಯ ಸರ್ವತೋಮುಖ ಏಳಿಗೆ ಹಾಗೂ ಗಳಿಸಿದ ಲಾಭಾಂಶದಲ್ಲಿ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ಮುಖ್ಯವಾಗಿ ಆರೋಗ್ಯ, ಸಾಹಿತ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಿ…
ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಗೌರವ ತಂದುಕೊಟ್ಟ ಸಾಧಕ ಮಂಗಳೂರು: ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನೀಡಲಾಗುವ ಪ್ರತಿಷ್ಠಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ತಿಳಿಸಿದ್ದಾರೆ. ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆ ನೀಡುತ್ತಾ…
ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಾವೂರು ಇದರ ಕೋಡಿಕಲ್ ಶಾಖೆ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ ಕೋಡಿಕಲ್ ಹಾಗೂ ಗಿರಿಜಾ ಸರ್ಜಿಕಲ್ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕೋಡಿಕಲ್ ಶಾಖೆಯ ಆವರಣದಲ್ಲಿ ಇತ್ತೀಚೆಗೆ ನಡೆಸಲಾಯಿತು. https://chat.whatsapp.com/Ge11n7QCiMj5QyPvCc0H19 ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುರುಅಂಬಾ ದೇವಸ್ಥಾನದ ಮುಖ್ಯ ಅರ್ಚಕ ರವೀಶ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಎಸ್.ಎನ್.ಡಿ.ಪಿ ಸಂಘ ಕೋಡಿಕಲ್ ಇದರ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಗಿರಿಜಾ ಸರ್ಜಿಕಲ್ ಪಾಲುದಾರರಾದ ಹರೀಶ್ ಕುಮಾರ್ ಯು, ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಕೆಸಿ ಎಂಟರ್‌ಪ್ರೈಸರ್ಸ್ ಮಾಲೀಕ ಕೆ.ಚೆನ್ನಯ್ಯ , ಎಸ್.ಎನ್.ಡಿ.ಪಿ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ದಯಾಮಣಿ…
ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ
ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/Ge11n7QCiMj5QyPvCc0H19 ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ. ಎನ್.ರಾಜೇಂದ್ರ ಕುಮಾರ್ ಇವರು ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅವರಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಯಶ್‌ಪಾಲ್ ಎ.ಸುವರ್ಣ, ಮಂಗಳೂರು ಕಾರ್ಪೊರೇಟರ್ ಮನೋಜ್ ಕುಮಾರ್ ಕೋಡಿಕಲ್, ದಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.…
ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ಮಡಂತ್ಯಾರಿನಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ 22ನೇ ಶಾಖೆ ಕಾರ್ಯಾರಂಭ ಬೆಳ್ತಂಗಡಿ: ಯಾವುದೇ ಒಂದು ಸಂಸ್ಥೆ ಪಾರದರ್ಶಕವಾಗಿ ವ್ಯವಹಾರ ನಡೆಸಿದಾಗ ಯಶಸ್ಸು ಸಾಧ್ಯ. ಸಮಾಜದ ಉನ್ನತಿಗೆ ಸಹಕಾರ ತತ್ವದ ಪಾತ್ರ ಮಹತ್ವದ್ದು, ಮಾನವೀಯ ಮೌಲ್ಯವನ್ನು ಗಟ್ಟಿಗೊಳಿಸುವ ಕೆಲಸ ಆಗಬೇಕಿದೆ. ಬದುಕು ಗಟ್ಟಿಯಾಗಲು ಸಂಸ್ಕಾರ, ಸಹಕಾರ, ಸಂಘಟನೆ, ಸಮೃದ್ಧಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆಯನ್ನು ಸೋಮವಾರ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಡಂತ್ಯಾರು ‘ಆಲ್ಫಾ ಕಾಂಪ್ಲೆಕ್ಸ್’ ನ ಮೊದಲನೇ ಮಹಡಿಯಲ್ಲಿ ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದರು. https://chat.whatsapp.com/Ge11n7QCiMj5QyPvCc0H19 ಅರ್ಹತೆ ನೋಡಿ ಸಹಕಾರ ನೀಡುವ ಕೆಲಸವಾಗಬೇಕು. ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಅಗತ್ಯ. ಸಾಮಾನ್ಯ ಜನರಿಗೆ ಸೇವೆ ಸಿಗಬೇಕೆಂಬ ನಿಟ್ಟಿನಲ್ಲಿ ಸಂಸ್ಥೆಯ ಹುಟ್ಟಾಗಿದೆ. ಕೊಡು -ಕೊಳ್ಳುವಿಕೆಯ ಗುಣ ಇಲ್ಲಿ ಅಗತ್ಯ. ಒಗ್ಗಟ್ಟಿನಿಂದ…
ಸಹಕಾರ ಸಂಘ ಸ್ವಾಭಿಮಾನದ ಜೀವನಕ್ಕೆ ಸಹಕಾರಿ: ಉಳಿಯ ದೇವು ಮೂಲ್ಯಣ್ಣ ಅಭಿಪ್ರಾಯ ಬಂಟ್ವಾಳ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಯುವಜನರಿಗೆ ಉದ್ಯೋಗ ನೀಡುವುದರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಜನರಲ್ಲಿ ಉಳಿತಾಯ ಮನೋಭಾವದಿಂದ ಸ್ವಾಭಿಮಾನದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದರು. ಮೆಲ್ಕಾರ್‌ನಲ್ಲಿ ಸೋಮವಾರ ಸಫಲ ಸೌಹಾರ್ದ ಸಹಕಾರಿ ಸಂಘದ ಐದನೇ ಶಾಖೆ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 https://chat.whatsapp.com/Ge11n7QCiMj5QyPvCc0H19 ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಮಾತನಾಡಿ, ‘ಮುಂದಿನ ದಿನಗಳಲ್ಲಿ ಎರಡು ಶಾಖೆಗಳ ಜೊತೆಗೆ ಗಾಣದ ಎಣ್ಣೆ ಉದ್ಯಮ ಆರಂಭಿಸಲು ಚಿಂತನೆ ನಡೆಸಲಾಗಿದೆ’ ಎಂದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಶುಭ ಹಾರೈಸಿದರು. ಕಟ್ಟಡ ಮಾಲೀಕ ಎಂ.ರಾಮರಾಜ್ ರಾವ್ ಭದ್ರತಾ ಕೊಠಡಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರರ್ದೇಶಕಿ ಭಾರತಿ ಭಟ್ ಶಾಖಾಧಿಕಾರಿ ಕೊಠಡಿ, ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್…
ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಲಹೆ ಮಂಗಳೂರಿನಲ್ಲಿ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಮಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರು ಕೂಡ ಸಹಕಾರ ಆಂದೋಲನದಲ್ಲಿ ತೊಡಗಿಸಿಕೊಂಡು ಸಹಕಾರ ಚಳವಳಿಯನ್ನು ಮುನ್ನಡೆಸಬೇಕು. ಯುವಕರು ಸಹಕಾರ ಆಂದೋಲನದಲ್ಲಿ ಭಾಗಿಗಳಾಗಿ ಈ ಕ್ಷೇತ್ರವನ್ನು ವಿಸ್ತರಿಸಿ ಸ್ವಾವಲಂಬನೆಯ ಬದುಕು ಸಾಗಿಸಬಹುದು ಎಂದು ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್, ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಮಂಗಳೂರಿನ ಕರಾವಳಿ ಉತ್ಸವ…
ಮಂಗಳೂರು: ಇಲಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ರಾಜ್ಯದ “ಉತ್ತಮ ಸೌಹಾರ್ದ ಸಹಕಾರ ಸಂಘ” ಪ್ರಶಸ್ತಿಗಳನ್ನು ನೀಡಲಾಗಿದ್ದು, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘಕ್ಕೆ ಈ ಪ್ರಶಸ್ತಿ ಲಭಿಸಿದೆ. https://chat.whatsapp.com/Ge11n7QCiMj5QyPvCc0H19 ಸಹಕಾರ ಸಚಿವ ಕೆ.ಎನ್ ರಾಜಣ್ಣ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಲ। ಎ. ಸುರೇಶ್ ರೈ ಪಿ.ಎಂ.ಜೆ.ಎಫ್ ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೆಗೌಡ, ಶಾಸಕರಾದ ಡಾ। ವೈ.ಭರತ್ ಶೆಟ್ಟಿ ಯಶ್‌ಪಾಲ್ ಎ.ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಒಡಿಯೂರು ಶ್ರೀ ಗುರುದೇವದತ್ತ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ…
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ನವಂಬರ್ 18ರಂದು ಮಡಂತ್ಯಾರಿನ ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಾರ್ಗದರ್ಶಕಿ ಸಾಧ್ವಿ ಶ್ರೀ ಮಾತಾನಂದಮಯೀ ಗೌರವ ಉಪಸ್ಥಿತಿ ಇರಲಿದ್ದಾರೆ. https://chat.whatsapp.com/Ge11n7QCiMj5QyPvCc0H19 ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ರೆ.ಫಾ.ಸ್ಟ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ, ಪ್ರಗತಿಪರ ಕೃಷಿಕ ಚಂದ್ರಶೇಖರ ಭಟ್, ವೇದಮೂರ್ತಿ ಚಂದ್ರಶೇಖರ ಉಪಾಧ್ಯಾಯ ನಂದಿಬೆಟ್ಟ, ದಂತವೈದ್ಯ ಡಾ.ವಿಶುಕುಮಾರ್ ಶೆಟ್ಟಿ, ಪಾರೆಂಕಿ ಶ್ರೀ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಬಿ.ರತ್ನಾಕರ ಶೆಟ್ಟಿ ಮುಡಾಯೂರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು…
