Author: admin
ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಐದನೇ ಶಾಖೆ ಮೆಲ್ಕಾರ್‌ನಲ್ಲಿ ನವಂಬರ್ 18ರಂದು ಸೋಮವಾರ ಕಾರ್ಯಾರಂಭಗೊಳ್ಳಲಿದೆ. ಮೆಲ್ಕಾರ್‌ನ ಆರ್.ಆರ್ ಕಮರ್ಷಿಯಲ್ ಸೆಂಟರ್‌ನ ನೆಲಮಹಡಿಯಲ್ಲಿ ಬೆಳಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ದೀಪ ಬೆಳಗಿಸಿ ಶಾಖಾ ಕಚೇರಿ ಉದ್ಘಾಟಿಸುವರು. ಕಟ್ಟಡದ ಮಾಲೀಕ ಎಂ.ರಾಮರಾಜ್ ರಾವ್ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಸಹಕಾರ ರತ್ನ ರಾಜಶೇಖರ ಗಾಣಿಗ ಭದ್ರತಾ ಕೋಶ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್ ಶಾಖಾಧಿಕಾರಿ ಕೊಠಡಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ ನಗದು ಕೊಠಡಿ ಉದ್ಘಾಟಿಸಲಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಗಣಕಯಂತ್ರ ಉದ್ಘಾಟಿಸುವರು. 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಂಬೈನ ಸಾಫಲ್ಯ ಸೇವಾ…
ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಕಚೇರಿಯಲ್ಲಿ ಗುರುವಾರ ದೀಪಾವಳಿ ಲಕ್ಷ್ಮೀಪೂಜೆ ನಡೆಯಿತು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎ.ಸುರೇಶ್ ರೈ, ಶ್ರೀದೇವಿ ಕಾಲೇಜು ಪ್ರಾಂಶುಪಾಲ ಸುಧೀಶ್ ಪೂಜಾರಿ, ಸ್ಪಂದನ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ನವೀನ್ ಎಲ್.ಆರ್ ಕಾವೂರು, ಯುವ ಸ್ಪಂದನ ಸೊಸೈಟಿಯ ಅಧ್ಯಕ್ಷ ಜಿತಿನ್ ಜೀಜೊ, ಉಪಾಧ್ಯಕ್ಷೆ ದೀಕ್ಷಾ ಡಿ.ಎಂ, ನಿರ್ದೇಶಕರಾದ ಚೇತನ್ ಕೊಟ್ಟಾರಿ, ಶೆಲ್ಡನ್ ಹರ್ಮನ್ ತಾವ್ರೊ, ಗುರು ಆದಿತ್ಯ, ನಿಶ್ಮಾ ವಿ.ಕೆ, ನರಸಿಂಹ ಎಸ್.ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಎ.ಎಲ್, ಸಿಬ್ಬಂದಿ ಧನುಶ್ರೀ, ಸಹಕಾರ ಸ್ಪಂದನ ಸಂಪಾದಕ ಮೋಹನ್‌ದಾಸ್ ಮರಕಡ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಹಬ್ಬದ ಆಚರಣೆಯಿಂದ ಸಹೋದರತ್ವ ಭಾವ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅಭಿಪ್ರಾಯ ಉಡುಪಿ: ಎಂ.ಸಿ.ಸಿ. ಬ್ಯಾಂಕ್‌ನ ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಾವರ ಶಾಖೆಯ ಆವರಣದಲ್ಲಿ ಬುಧವಾರ ದೀಪಾವಳಿ ಹಬ್ಬ ಆಚರಿಸಲಾಯಿತು. ಎಂಸಿಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಸಿಬ್ಬಂದಿ ಪ್ರಾರ್ಥನಾ ಗೀತೆಯೊಂದಿಗೆ ಸಂಭ್ರಮಾಚರಣೆಗೆ ಮೆರುಗು ನೀಡಿದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅತಿಥಿಗಳೊಂದಿಗೆ ದೀಪ ಬೆಳಗಿಸಿದರು. https://chat.whatsapp.com/Ge11n7QCiMj5QyPvCc0H19 ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೀಪಾವಳಿ ಆಚರಣೆಯ ಮಹತ್ವದ ಬಗ್ಗೆ ಹೇಳಿದರು. ಹಬ್ಬವು ಜನರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿ ಬ್ಯಾಂಕಿಗೆ ನಿರಂತರ ಬೆಂಬಲ ನೀಡಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಈಶ್ವರ ಮಲ್ಪೆ ಅವರ ಸಾಧನೆ ಮತ್ತು ಸಮಾಜಸೇವೆಗೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಅನಿಲ್ ಲೋಬೊ ಸನ್ಮಾನಿಸಿದರು. ಇನ್ನೋರ್ವ ಅತಿಥಿ ಬಿ.ಎನ್.ಶಂಕರ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಿ.ಎ. ಹೆಗ್ಡೆ ಶುಭ ಹಾರೈಸಿದರು. ಬ್ರಹ್ಮಾವರದ…
ಮಂಗಳೂರು: ಗುರುಪುರ ಕೈಕಂಬದ ಬೆನಕ ಸೌಧದ ಒಂದನೇ ಮಹಡಿಯಲ್ಲಿರುವ ಸಫಲ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯನ್ನು ಬೆನಕ ಸೌಧದ ಎರಡನೇ ಮಹಡಿಗೆ ಸ್ಥಳಾಂತರ ಮಾಡುವ ಕಾರ್ಯಕ್ರಮ ನವಂಬರ್ 1ರಂದು ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಮಧ್ಯಾಹ್ನ 12.05ಕ್ಕೆ ಕಾರ್ಯಕ್ರಮ ನಡೆಯಲಿದ್ದು ಉಳ್ಳಾಲ ಉಳಿಯದ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಭಾರತಿ ಭಟ್, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಜಿಲ್ಲಾಧ್ಯಕ್ಷ ಭಾಸ್ಕರ ದೇವಸ್ಯ, ಗುರುಪುರ ಕೈಕಂಬ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ವಿನೋದ್ ಮಾಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು…
ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಾಗರ ಉಪವಿಭಾಗದ ಪತ್ತಿನ ಮತ್ತು ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನವಂಬರ್ 6ರಂದು ಶಿಕಾರಿಪುರ ಶಾಂತಿನಗರದ ಶ್ರೀ ಕಂತೇಸಿದ್ಧೇಶ್ವರ ಸಭಾಂಗಣದಲ್ಲಿ ಬೆಳಗ್ಗೆ ಒಂದು ದಿನದ ತರಬೇತಿ ಶಿಬಿರ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ವಿ.ರಾಜು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಡಿ.ಎಲ್.ಬಸವರಾಜ್, ಶಿವಮೊಗ್ಗ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಕಲ್ಮನೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನೇತ್ರಾ ದೇವರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ…
ಮಂಗಳೂರು: 112 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ಕರಾವಳಿ ಭಾಗದ ಕುಂದಾಪುರ, ಬ್ರಹ್ಮಾವರ, ಉಡುಪಿ ಶಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ. https://chat.whatsapp.com/Ge11n7QCiMj5QyPvCc0H19 ಎಂ.ಸಿ.ಸಿ. ಬ್ಯಾಂಕ್ ತನ್ನ ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದ್ದು, ಇದೇ ವರ್ಷದ ಮಾರ್ಚ್ ತಿಂಗಳಲ್ಲಿ 17ನೇ ಹೊಸ ಶಾಖೆಯನ್ನು ಬ್ರಹ್ಮಾವರದಲ್ಲಿ ಪ್ರಾರಂಭಿಸಿದೆ. ಈ ಸ್ಪರ್ಧೆಯ ಪೋಸ್ಟರ್ ಅನಾವರಣ ಕಾರ್ಯಕ್ರಮ ಗುರುವಾರ ಎಂ.ಸಿ.ಸಿ. ಬ್ಯಾಂಕಿನ ಬ್ರಹ್ಮಾವರ ಶಾಖೆಯಲ್ಲಿ ಜರಗಿತು. ಬ್ರಹ್ಮಾವರ ಪರಿಸರದ ಖ್ಯಾತ ಉದ್ಯಮಿ ಅರುಣ್ ವಾರಂಬಳ್ಳಿ ಸ್ಪರ್ಧೆಗಳ ಪೋಸ್ಟರ್ ಅನಾವರಣಗೊಳಿಸಿದರು. ಸ್ಥಳೀಯ ಉದ್ಯಮಿಗಳಾದ ರೋಶನ್, ರವಿ, ಯೋಗೀಶ್, ಗಣೇಶ್ ಮತ್ತು ಗ್ರಾಹಕರಾದ ಆನಂದ್, ಪ್ರತಿಮಾ, ಪ್ರವೀಣ್ ಹಾಗೂ ಬ್ರಹ್ಮಾವರ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು. ಎಂ.ಸಿ.ಸಿ. ಬ್ಯಾಂಕಿನ ನಿರ್ದೇಶಕ ಎಲ್ರಾಯ್ ಕಿರಣ್ ಕ್ರಾಸ್ಟೊ ಪ್ರಾಸ್ತಾವಿಕ ಮಾತನಾಡಿದರು. ಬ್ರಹ್ಮಾವರ ಶಾಖೆಯ ಪ್ರಬಂಧಕ ಒವಿನ್ ರೆಬೆಲ್ಲೊ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ದೀಪಗಳ ಜೊತೆಯಿರುವ ಭಾವಚಿತ್ರ ಹಾಗೂ 15 ಸೆಕೆಂಡುಗಳ…
ನವದೆಹಲಿ: ಭಾರತದ ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರನ್ನು ನೇಮಿಸಲಾಗಿದೆ. ಇವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಹೆಸರು ಸೂಚಿಸಿದ್ದು ಇದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ. https://chat.whatsapp.com/Ge11n7QCiMj5QyPvCc0H19 ಹಾಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8 ರಂದು ನಿವೃತ್ತಿ ಹೊಂದಲಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುವಂತೆ ಕಾನೂನು ಸಚಿವಾಲಯ ಕೋರಿದ ಹಿನ್ನೆಲೆಯಲ್ಲಿ ಚಂದ್ರಚೂಡ್, ಸಂಜೀವ್ ಖನ್ನಾ ಅವರ ಹೆಸರು ಶಿಫಾರಸು ಮಾಡಿದ್ದರು. ನವಂಬರ್ 11ರಂದು ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕರಿಸಲಿದ್ದು, 2025ರ ಮೇ 13ರಂದು ನಿವೃತ್ತಿಯಾಗಲಿದ್ದಾರೆ. ಅಂದರೆ ಆರು ತಿಂಗಳುಗಳ ಕಾಲ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಸಂಜೀವ ಖನ್ನಾ ಅವರು, 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ವಕೀಲರಾಗಿ ದಾಖಲಾಗಿದ್ದರು.…
ಶಿಕಾರಿಪುರ: ಇಲ್ಲಿನ ಶಾಂತಿನಗರದ ಬನಸಿರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿಯಮಿತ, ಬನಸಿರಿ ಮಹಿಳಾ ಪತ್ತಿನ ಸಹಕಾರ ಸಂಘ ನಿಯಮಿತ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಆಯ್ದ ಶ್ರೀ ಸಪ್ತಗಿರಿ ಸ್ವ ಸಹಾಯ ಸಂಘ ಮತ್ತು ಧರ್ಮಸ್ಥಳ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಮತ್ತು ಮಹಿಳಾ ಸಹಕಾರ ಸಂಘಗಳ ನಿರ್ದೇಶಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://chat.whatsapp.com/Ge11n7QCiMj5QyPvCc0H19 ಬನಸಿರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶಶಿಕಲಾ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಂತಲಾ ಭೂಕಾಂತ್ ಕಾರ್ಯಕ್ರಮ ಉದ್ಘಾಟಿಸಿದರು. ಪಶು ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಕೆ.ಎಂ ಮತ್ತು ಸುನಿತಾ ಮೂಡೇರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಿರ್ಮಲ ಅನುಜಾಜ್ ಪ್ರಾರ್ಥಿಸಿದರು, ಗೀತಾ ಸತೀಶ್ ಸ್ವಾಗತಿಸಿದರು, ಆಶಾ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಇದರ ನಿರ್ದೇಶಕ ಮಂಡಳಿ ಸದಸ್ಯರು ಬುಧವಾರ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಧಾನ ಕಛೇರಿಗೆ ಅಧ್ಯಯನ ಪ್ರವಾಸ ಕೈಗೊಂಡರು. https://chat.whatsapp.com/Ge11n7QCiMj5QyPvCc0H19 ಈ ಸಂದರ್ಭ ಸಂಘದ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ ಹಾಗೂ ನಿರ್ದೇಶಕ ಮಂಡಳಿ ಸದಸ್ಯರನ್ನು ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ರವೀಂದ್ರ ಪ್ರಭು ಆಡಳಿತ ಮಂಡಳಿ ಪರವಾಗಿ ಗೌರವಿಸಿದರು. ಸೊಸೈಟಿ ಉಪಾಧ್ಯಕ್ಷ ನೀರೆ ರವೀಂದ್ರ ನಾಯಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ನಾಯಕ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಇಂಗ್ಲಿಷ್, ಫ್ರೆಂಚ್, ಸ್ಪಾನಿಷ್, ಅರೆಬಿಕ್, ಚೈನೀಸ್ ಮತ್ತು ರಷ್ಯನ್ ಭಾಷೆಗಳಲ್ಲಿ ಬಿಡುಗಡೆ ನವದೆಹಲಿ: ವಿಶ್ವಸಂಸ್ಥೆಯು 2025ರ ವರ್ಷವನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷವೆಂದು ಘೋಷಿಸಿದ್ದು ಅದರ ಲೋಗೋವನ್ನು ಸೋಮವಾರ ಬಿಡುಗಡೆ ಮಾಡಿದೆ ಎಂದು ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟ ತಿಳಿಸಿದೆ. ಲೋಗೋ ಇಂಗ್ಲಿಷ್, ಫ್ರೆಂಚ್, ಸ್ಪಾನಿಷ್, ಅರೆಬಿಕ್, ಚೈನೀಸ್ ಮತ್ತು ರಷ್ಯನ್ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಇದನ್ನು ಬಳಸುವ ಸಂಸ್ಥೆಗಳು ನಿಗದಿಪಡಿಸಿರುವ ಸೂಚನೆಗಳ್ನು ಪಾಲಿಸಬೇಕು ಎಂದು ಒಕ್ಕೂಟವು ತಿಳಿಸಿದೆ. https://chat.whatsapp.com/Ge11n7QCiMj5QyPvCc0H19 ಬಿಡುಗಡೆಯಾಗಿರುವ ಲೋಗೋವು ಸಹಕಾರ ಕ್ಷೇತ್ರದಲ್ಲಿ ಜನಕೇಂದ್ರಿತ ಸಾಮೂಹಿಕ ಸಹಭಾಗಿತ್ವ ಮತ್ತು ಅದರಲ್ಲಿರುವ ಬಣ್ಣಗಳು 2030ರ ವೇಳೆಗೆ ಸಹಕಾರಿಗಳು ಹೇಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಸಹಕಾರಿ ಆಯಾಮಕ್ಕೆ ಒಡುಗೆ ನೀಡಬಹುದು ಎಂಬುದನ್ನು ಪ್ರತಿಬಿಂಬಿಸುತ್ತವೆ ಎಂದು ಸಹಕಾರ ಒಕ್ಕೂಟದ ಮಹಾನಿರ್ದೇಶಕ ಜೆರೋನ್ ಡಗ್ಲಾಸ್ ತಿಳಿಸಿದ್ದಾರೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಸಂಸ್ಥೆಗಳು ಮತ್ತು ಸಹಕಾರಿಗಳು ಏನು ಮಾಡಬಹುದು ಎಂಬುದನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷ 2025ರ ವೇಳೆ ಚರ್ಚೆಗೆ ತೆಗೆದುಕೊಳ್ಳಬಹುದು ಎಂದು ಡಗ್ಲಾಸ್ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…
