Author: admin
ಮಂಗಳೂರು: ಎಂಸಿಸಿ ಬ್ಯಾಂಕಿನ ಬ್ರಹ್ಮಾವರ ಶಾಖೆ ಆರಂಭವಾಗಿ ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ರೂ. ವ್ಯವಹಾರದ ಸಾಧನೆ ಮತ್ತು ನೂತನ ಎಟಿಎಂ ಲೋಕಾರ್ಪಣಾ ಸಮಾರಂಭ ಸೋಮವಾರ ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. https://chat.whatsapp.com/EbVKVnWB6rlHT1mWtsgbch ಎಂಸಿಸಿ ಬ್ಯಾಂಕಿನ ೮ನೇ ಎಟಿಎಂ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರು ಫಾ|ಜೋನ್ ಫೆರ್ನಾಂಡಿಸ್ ಆಶೀರ್ವದಿಸಿದರು. ಎಟಿಎಂ ಯಂತ್ರವನ್ನು ಎಎಸ್ ಯೂಸ್ಡ್ ಕಾರ‍್ಸ್ ಮಾಲೀಕ ಸೌರಬ್ ಶೆಟ್ಟಿ ಎಟಿಎಂನಿಂದ ಹಣ ತೆಗೆಯುವ ಮೂಲಕ ಉದ್ಘಾಟಿಸಿದರು. ಉದ್ಯಮಿ ಶಂಶುದ್ದಿನ್ ಮೊಯಿದಿನ್ ಮುಖ್ಯ ಅತಿಥಿಯಾಗಿದ್ದರು. ಶಾಖಾ ನಿರ್ದೇಶಕ ಎಲ್‌ರೋಯ್ ಕಿರಣ್ ಕ್ರಾಸ್ಟೊ ಹಾಜರಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ, ಬ್ರಹ್ಮಾವರದಲ್ಲಿ ಎಂಸಿಸಿ ಬ್ಯಾಂಕಿನ ಶಾಖೆ ಆರಂಭಗೊಳ್ಳಲು ಹಾಗೂ ರೂ. ೧೦ ಕೋಟಿ ವ್ಯವಹಾರ ದಾಖಲಿಸಲು ಸಹಕರಿಸಿದ ಬ್ರಹ್ಮಾವರದ ಗ್ರಾಹಕರಿಗೆ ವಂದನೆಗಳನ್ನು ಸಲ್ಲಿಸಿದರು. ಬ್ರಹ್ಮಾವರದ ಜನ…
ತುಮಕೂರು ಮರ್ಚಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಮಧುಗಿರಿಯಲ್ಲಿ ಎಟಿಎಂ, ಗ್ರಾಹಕ ಸೇವಾ ಕೇಂದ್ರ ಉದ್ಘಾಟನೆ
ತುಮಕೂರು: ಇಲ್ಲಿನ ಪ್ರತಿಷ್ಠಿತ ಮರ್ಚಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಧುಗಿರಿಯಲ್ಲಿ ಎಟಿಎಂ ಸೇವೆ ಹಾಗೂ ಗ್ರಾಹಕ ಸೇವಾ ಕೇಂದ್ರವನ್ನು ಲೋಕಾರ್ಪಣೆ ಮಾಡಿದೆ. https://chat.whatsapp.com/EbVKVnWB6rlHT1mWtsgbch ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಎಟಿಎಂ ಸೆಂಟರ್ ಅನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಹಕಾರಿ ಮತ್ತು ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು, ಸಹಕಾರಿ ಮುಖಂಡರು ಮತ್ತು ಸ್ಥಳೀಯ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಎನ್.ಎಸ್. ಜಯಕುಮಾರ್, ತಮ್ಮ ಸಂಸ್ಥೆಯ ಸದಸ್ಯರು ಮತ್ತು ಸಾರ್ವಜನಿಕರಿಗೆ ಹಣಕಾಸು ಸೇವೆಗಳನ್ನು ವಿಸ್ತರಿಸುವ ಸಹಕಾರಿಯ ಬದ್ಧತೆಯ ಬಗ್ಗೆ ಮಾಹಿತಿ ನೀಡಿದರು. ಹೊಸದಾಗಿ ಪ್ರಾರಂಭಿಸಲಾದ ಎಟಿಎಂ ಮತ್ತು ಗ್ರಾಹಕ ಸೇವಾ ಕೇಂದ್ರ ಜನರಿಗೆ ಬ್ಯಾಂಕಿಂಗ್ ಸೇವೆಯಲ್ಲಿ ಸಹಾಯ ಮಾಡಲಿದೆ. ವಿಶೇಷವಾಗಿ ಈ ಪ್ರದೇಶದ ಸಣ್ಣ ವ್ಯವಹಾರಗಳು, ವ್ಯಾಪಾರಿಗಳು ಮತ್ತು ದಿನಗೂಲಿ ಪಡೆಯುವವರಿಗೆ ಪ್ರಯೋಜನ ನೀಡುತ್ತದೆ. ಹೊಸ ಸೌಲಭ್ಯವು ತಡೆರಹಿತ ಮತ್ತು ಸುರಕ್ಷಿತ ಹಣಕಾಸು ವಹಿವಾಟುಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ನಗದು ಹಿಂಪಡೆಯುವಿಕೆ, ಖಾತೆ ವಿಚಾರಣೆ, ನಿಧಿ…
ಬಂಟ್ವಾಳ: ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭ ಮಾರ್ಚ್ 6ರಂದು ಗುರುವಾರ ಬೆಳಗ್ಗೆ 9ಕ್ಕೆ ಬಿ.ಸಿ.ರೋಡ್‌ನ ವಿವೇಕನಗರ ಶಕ್ತಿ ಕಾಂಪೌಂಡ್ ಒಂದನೇ ಮಹಡಿಯಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಆಡಳಿತ ಕಚೇರಿ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ವೆಂಕಟರಮಣ ಆಸ್ರಣ್ಣ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಮತ್ತು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಸಹಕಾರಿಯ ನಾಮಫಲಕ ಅನಾವರಣ ಮಾಡುವರು. ಪುತ್ತೂರು ಶ್ರೀಮಾತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ್ ಕುಲಾಲ್ ನಗದು ಕೌಂಟರ್ ಉದ್ಘಾಟನೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್…
ಉಪ್ಪಿನಂಗಡಿ: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಪ್ಪಿನಂಗಡಿ ಇದರ ಉಪ್ಪಿನಂಗಡಿ, ನೆಲ್ಯಾಡಿ ಹಾಗೂ ಕಡಬ ಶಾಖಾ ಸಿಬ್ಬಂದಿಗಳಿಗೆ ವೃತ್ತಿ ತರಬೇತಿ ಕಾರ್ಯಕ್ರಮ ನಡೆಯಿತು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿಯಮಿತದ ಮೈಸೂರು ಪ್ರಾಂತ್ಯದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್. ತರಬೇತಿ ನೀಡಿದರು. ಸಹಕಾರಿ ಸಂಸ್ಥೆಯಲ್ಲಿ ಸಿಬ್ಬಂದಿಯ ಕಾರ್ಯಚಟುವಟಿಕೆ, ಕಡತ ನಿರ್ವಹಣೆ, ಸಾಲ ವಸೂಲಾತಿಗೆ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ಇತರ ವಿಷಯಗಳಲ್ಲಿ ಮಾಹಿತಿ ನೀಡಿದರು. ಸಂಘದ ಎಲ್ಲಾ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಂಘದ ಅಧ್ಯಕ್ಷ ರೋಬರ್ಟ್ ಡಿಸೋಜ, ಉಪಾಧ್ಯಕ್ಷ ಜೆರೋಮ್ ಬ್ರಾಕ್ಸ್, ನಿರ್ದೇಶಕರಾದ ಹೆನ್ರಿ ಲೋಬೊ, ಸೆಬೆಸ್ಟಿಯನ್ ಲೋಬೊ, ವಿನ್ಸೆಂಟ್ ವೇಗಸ್, ಮ್ಯಾಕ್ಸಿಂ ಲೋಬೊ ಹಾಗೂ ಐರಿನ್ ಲೋಬೊ ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಉತ್ತರ ಪ್ರದೇಶ ಬಜೆಟ್‌ನಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ ಲಖ್ನೋ: ಉತ್ತರ ಪ್ರದೇಶ ಹಣಕಾಸು ಸಚಿವ ಸುರೇಶ್ ಖನ್ನಾ ಮಂಡಿಸಿರುವ ರಾಜ್ಯ ಬಜೆಟ್ ಸಹಕಾರಿ ವಲಯವನ್ನು ಬಲಪಡಿಸುವ ಇರಾದೆ ವ್ಯಕ್ತಪಡಿಸಿದ್ದು 2025ರ ವರ್ಷವನ್ನು ಸಹಕಾರಿ ಮಹಾಕುಂಭ ವರ್ಷವೆಂದು ಘೋಷಿಸಿದೆ. https://chat.whatsapp.com/EbVKVnWB6rlHT1mWtsgbch ಸಹಕಾರಿ ವಲಯಕ್ಕೆ ಒಟ್ಟು 16 ಕೋಟಿ ರೂ. ವೆಚ್ಚದ ಮೂರು ಹೊಸ ಯೋಜನೆಗಳನ್ನು ರಾಜ್ಯ ಬಜೆಟ್‌ನಲ್ಲಿ ಪರಿಚಯಿಸಲಾಗಿದೆ. ಅಂತಾರಾಷ್ಟ್ರೀಯ ಸಹಕಾರಿ ವರ್ಷ (ಐವೈಸಿ) 2025 ಕಾರ್ಯಕ್ರಮಗಳಿಗೆ 5 ಕೋಟಿ ರೂ., ಯುಪಿ ರಾಜ್ಯ ಸಹಕಾರಿ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಿಗೆ ತಂತ್ರಜ್ಞಾನ ನವೀಕರಣ ಮತ್ತು ಸೈಬರ್ ಭದ್ರತೆಗಾಗಿ 10 ಕೋಟಿ ರೂ. ಮತ್ತು ಬಲರಾಂಪುರ ಮತ್ತು ಗೊಂಡಾದಲ್ಲಿ ಎರಡು ಹೊಸ ಜಿಲ್ಲಾ ಸಹಕಾರಿ ಬ್ಯಾಂಕ್‌ಗಳನ್ನು ನಿರ್ಮಿಸಲು 1 ಕೋಟಿ ರೂ. ಘೋಷಿಸಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಗಣಕೀಕರಣ ಮತ್ತು ಆರ್ಥಿಕ ಬೆಂಬಲಕ್ಕಾಗಿ 647.27 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನ್ಯಾನೊ ಯೂರಿಯಾ ಸೇರಿದಂತೆ ಕೃಷಿ…
ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಭಾನುವಾರ ಹಿಂದೂ ಯುವ ಸೇನೆ ಕಾವುಬೈಲ್, ಬಜಾಲ್ ಶಾಖೆ ಹಾಗೂ ಶ್ರೀಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಯೋಗದೊಂದಿಗೆ ಕಾವುಬೈಲ್, ಬಜಾಲ್‌ನಲ್ಲಿನ ಹಿಂದೂ ಯುವಸೇನೆಯ ಸಭಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ -ದಂತ -ಕಣ್ಣಿನ ತಪಾಸಣಾ ಚಿಕಿತ್ಸಾ ಶಿಬಿರ ಆಯೋಜಿಸಿತ್ತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆ ಹಾಗೂ ದೇರಳಕಟ್ಟೆ ಯೇನಪೊಯ ದಂತ ಕಾಲೇಜಿನ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. 365 ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದ 65 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕ ಹಾಗೂ ಎಲ್ಲಾ ಖಾಯಿಲೆಗಳಿಗೆ ಉಚಿತವಾಗಿ ಔಷಧ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯುಳ್ಳ 76 ಜನರಿಗೆ ಬುಧವಾರ KMC ಅತ್ತಾವರ ಆಸ್ಪತ್ರೆಗೆ ಹಾಗೂ ಹಲ್ಲಿನ ಸಮಸ್ಯೆಯುಳ್ಳವರಿಗೆ ದೇರಳಕಟ್ಟೆ ಯೆನೆಪೋಯ ದಂತ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಅವಶ್ಯಕತೆಯಿದ್ದು ಅವರಿಗೆ ಸಂಪೂರ್ಣ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಶ್ರೀಶಾ ಸೊಸೈಟಿಯು ಪ್ರತಿ ತಿಂಗಳೂ ಮಂಗಳೂರು…
ಮುಂದಿನ ದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿಕೆ ಬೆಳ್ಮಣ್: ಎಂಸಿಸಿ ಬ್ಯಾಂಕಿನ ೧೯ನೇ ಶಾಖೆಯು ಬೆಳ್ಮಣ್ ಮುಖ್ಯರಸ್ತೆಯ ಎಲ್ವಿನ್ ಟವರ್ಸ್‌ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನುವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಉದ್ಘಾಟಿಸಿದರು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ದೀಪ ಬೆಳಗಿಸಿದರು. ಬೆಳ್ಮಣ್ ಸಂತ ಜೋಸೆಫ್ ಚರ್ಚ್‌ನ ಧರ್ಮಗುರು ವಂ.ಫಾ| ಫ್ರೆಡ್ರಿಕ್ ಮಸ್ಕರೇನ್ಹಸ್ ಆಶೀರ್ವದಿಸಿದರು. ಭದ್ರತಾ ಕೊಠಡಿಯನ್ನು ದಾಯ್ಜಿವಲ್ದ್ ಮೀಡಿಯಾ ಸಂಸ್ಥಾಪಕ ವಾಲ್ಟರ್ ನಂದಳಿಕೆ ಉದ್ಘಾಟಿಸಿದರು. ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಬೆಳ್ಮಣ್ ಗ್ರಾಮ ಪಂಚಾಯತ್ ಅಧಕ್ಷೆ ರಾಮೇಶ್ವರಿ ಎಮ್. ಶೆಟ್ಟಿ ಉದ್ಘಾಟಿಸಿದರು. ಅನಿವಾಸಿ ಭಾರತೀಯ ಉದ್ಯಮಿ ಶ್ರೀ ರೋನ್ ರೊಡ್ರಿಗಸ್ ಉಪಸ್ಥಿತರಿದ್ದರು. https://chat.whatsapp.com/EbVKVnWB6rlHT1mWtsgbch ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅನಿಲ್ ಲೋಬೊ, ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಬೆಳ್ಮಣ್ ಪರಿಸರದಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಭೇಟಿ ಮಾಡಿದ ಸಂದರ್ಭ ಪರಿಸರದ ಜನ ನೀಡಿದ ಸ್ವಾಗತ, ಸಹಕಾರ ಮತ್ತು ಬೆಂಬಲಕ್ಕಾಗಿ ವಂದನೆ ಸಲ್ಲಿಸಿ,…
ಮಂಗಳೂರು: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಮಾರ್ಚ್ 2ರಂದು ಬೆಳ್ಮಣ್ ಮುಖ್ಯರಸ್ತೆಯ ಎಲ್ವಿನ್ ಟವರ್ಸ್‌ನ ನೆಲಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಶಾಖೆಯ ಉದ್ಘಾಟನೆಯ ಕಾರ್ಯಕ್ರಮ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಶಾಖೆಯ ಉದ್ಘಾಟನೆ ಮಾಡಲಿದ್ದಾರೆ. ಸಂತ ಜೋಸೆಫ್ ಚರ್ಚ್, ಬೆಳ್ಮಣ್ ಇದರ ಧರ್ಮಗುರು ವಂ. ಫಾ| ಫ್ರೆಡ್ರಿಕ್ ಮಸ್ಕರೇನ್ಹಸ್ ಆಶಿರ್ವಚನ ನೀಡುವರು. ದಾಯ್ಜಿವಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಯಾಗಿದ್ದು, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಮೇಶ್ವರಿ ಎಮ್. ಶೆಟ್ಟಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. https://chat.whatsapp.com/EbVKVnWB6rlHT1mWtsgbch ಪ್ರಸ್ತುತ ಎಂ.ಸಿ.ಸಿ ಬ್ಯಾಂಕ್ ಸುಸಜ್ಜಿತ ಆಡಳಿತ ಕಛೇರಿ ಮತ್ತು ಸಂಸ್ಥಾಪಕರ ಶಾಖೆ ಹಂಪನಕಟ್ಟ, ಅಶೋಕನಗರ, ಕಂಕನಾಡಿ, ಕುಲಶೇಕರ, ಮೋರ್ಗನ್ಸ್‌ಗೇಟ್, ಮೂಡಬಿದ್ರಿ, ಶಿರ್ವ, ಬಜಪೆ, ಕಿನ್ನಿಗೋಳಿ, ಸುರತ್ಕಲ್, ಉಳ್ಳಾಲ, ಉಡುಪಿ, ಕುಂದಾಪುರ, ಪುತ್ತೂರು, ಬಿ.ಸಿ.ರೋಡ್, ಕಾರ್ಕಳ, ಬ್ರಹ್ಮಾವರ ಮತ್ತು ಬೆಳ್ತಂಗಡಿ ಹೀಗೆ 18 ಶಾಖೆಗಳನ್ನು ಹೊಂದಿರುತ್ತದೆ. ಬ್ಯಾಂಕಿನ ಆಡಳಿತ ಮಂಡಳಿ…
ನಾಮನಿರ್ದೇಶಿತರಿಗೆ ಮತದಾನದ ಹಕ್ಕು ನೀಡಿದರೆ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಎಂದ ಗೆಹ್ಲೋತ್ ಬೆಂಗಳೂರು: ಸಹಕಾರ ವಲಯದಲ್ಲಿ ಮಹತ್ವದ ಬದಲಾವಣೆ ತರಬಲ್ಲ ಎರಡು ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಎರಡನೇ ಬಾರಿ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸದನದಲ್ಲಿ ಪಾಸ್ ಆಗಿ ರಾಜ್ಯಪಾಲರ ಅಂಕಿತಕ್ಕೆ ಬಂದಿದ್ದ ‘ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ-2024’ ಮತ್ತು ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ- 2024’ ಈ ಎರಡನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಹಿ ಹಾಕದೆ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದು, ಈ ವಿಷಯದಲ್ಲಿ ಕೆಲವೊಂದು ಸ್ಪಷ್ಟನೆಯನ್ನೂ ಕೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಕೆಲವು ದಿನಗಳ ಹಿಂದಷ್ಟೇ ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024’ಯನ್ನು ಸಹಿ ಹಾಕದೆ ವಾಪಸ್ ಕಳುಹಿಸಿದ್ದ ರಾಜ್ಯಪಾಲರು ಇದೀಗ ಮತ್ತೆರಡು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ. ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಹಲವು ಆಕ್ಷೇಪಗಳನ್ನು ಮಾಡಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ…
ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ನೂತನ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಮುಂದಿನ 3 ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. https://chat.whatsapp.com/EbVKVnWB6rlHT1mWtsgbch ಹಣಕಾಸು ಕಾರ್ಯದರ್ಶಿ ಆಗಿದ್ದ ತುಹಿನ್ ಕಾಂತ ಪಾಂಡೆ ಅವರು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಈ ನೇಮಕ ನಡೆದಿದೆ. ಸೆಬಿ ಹಾಲಿ ಮುಖ್ಯಸ್ಥ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2ರಂದು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು. ತುಹಿನ್ ಕಾಂತ ಪಾಂಡೆ ಅವರು ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳಲ್ಲಿ ಒಬ್ಬರಾಗಿದ್ದು, ತೆರಿಗೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಇವರು ಏರ್ ಇಂಡಿಯಾ ಖಾಸಗೀಕರಣ ಹಾಗೂ ಎಲ್‌ಐಸಿ ಸಂಸ್ಥೆ ಸಾರ್ವಜನಿಕ ಹೂಡಿಕೆಯಲ್ಲಿ ಸೇರಲು ಪ್ರಮುಖ ಪಾತ್ರ…
