Author: admin
ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಬೆಳಗ್ಗೆ 10.30ರಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ಸಹಕಾರ ಸಂಘಗಳ…
ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಹಾಸನದ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಮಂಡಳಿ ಭೇಟಿ
ಮಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಸದಸ್ಯರು ಸಹಕಾರಿಯ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಅಧ್ಯಯನಕ್ಕಾಗಿ ಮಂಗಳವಾರ ಭೇಟಿ ನೀಡಿದರು. https://chat.whatsapp.com/EbVKVnWB6rlHT1mWtsgbch ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ತಮ್ಮ ಸೊಸೈಟಿ ನಡೆದು ಬಂದ ದಾರಿ ಮತ್ತು ಸುಗಮ ಹಾಗೂ ಪಾರದರ್ಶಕ ಆಡಳಿತದ ಬಗ್ಗೆ ವಿವರಣೆ ನೀಡಿದರು. ಸಹಕಾರಿಯ ಎಲ್ಲಾ ವಿಭಾಗಗಳಲ್ಲೂ ಅಂದರೆ ಠೇವಣಿ ಸಂಗ್ರಹ, ಅದರ ವಸ್ತುನಿಷ್ಠ ವಿನಿಯೋಗ, ಸಾಲ ಮರುಪಾವತಿ, ಲಾಭ ಗಳಿಕೆ ಮುಂತಾದ ವಿಷಯಗಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಣೆ ನೀಡಿದರು. ಗಳಿಸಿದ ಲಾಭಾಂಶವನ್ನು ಸ್ಥಳೀಯವಾಗಿ ಜನೋಪಯೋಗಿ ಕಾರ್ಯಗಳಿಗೆ ಹೇಗೆ ವಿನಿಯೋಗಿಸಬಹುದು ಎಂಬುದರ ಬಗ್ಗೆಯೂ ಆಡಳಿತ ಮಂಡಳಿಯವರು ಚರ್ಚಿಸಿದರು. ಶ್ರೀಶಾ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ಮತ್ತು ಹಿರಿಯ ಶಾಖಾ ಪ್ರಬಂಧಕಿ ಲಕ್ಷ್ಮೀ ಉಪಸ್ಥಿತರಿದ್ದರು. ವೀರಶೈವ ಲಿಂಗಾಯತ ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ಶ್ರೀಶಾ ಸೊಸೈಟಿಯ ಶಿಸ್ತುಬದ್ಧ ಹಾಗೂ ವಸ್ತುನಿಷ್ಠ…
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣಾ ಕಾರ್ಯಕ್ರಮ
ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕಾರ್ಕಳ ಇದರ ವತಿಯಿಂದ ಕಾರ್ಕಳದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ರೆಫ್ರಿಜರೇಟರ್ ಕೊಡುಗೆ ಹಾಗೂ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. https://chat.whatsapp.com/EbVKVnWB6rlHT1mWtsgbch ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ ಸಂಘ ಸಂಸ್ಥೆಗಳು ಇಂಥ ಕೊಡುಗೆಗಳನ್ನು ನೀಡುವುದರಿಂದ ಹಲವಾರು ಬಡವರಿಗೆ ಉಪಯೋಗವಾಗುತ್ತದೆ. ಎಲ್ಲವನ್ನೂ ಸರಕಾರದಿಂದ ಭರಿಸುವುದು ಕಷ್ಟ. ಇಂಥ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ನೀಡುವ ಕೊಡುಗೆಗಳಿಂದ ನೆರವಾಗುತ್ತದೆ ಎಂದು ತಿಳಿಸಿ ಸಂಘಕ್ಕೆ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸಂತೋಷ್ ರಾವ್ ಮಾತನಾಡಿ ಸಂಘವು ಈ ಹಿಂದೆಯೂ ಸರಕಾರಿ ಆಸ್ಪತ್ರೆಗೆ ಕೊರೋನ ಸಂದರ್ಭದಲ್ಲಿ ಆಮ್ಲಜನಕ ಘಟಕಕ್ಕೆ ಧನಸಹಾಯ ನೀಡಿದೆ. ಇದರ ಜೊತೆಗೆ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಹಾಗೆಯೇ ಶಾಸಕರ ಸಹಕಾರ ಸಂಘಕ್ಕೂ ಇರಲಿ ಎಂದು ಆಶಿಸಿದರು. ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಶಶಿಕಲಾ, ಸಹ ವೈದ್ಯರಾದ ಡಾ| ಅನಂತ್ ಕಾಮತ್, ಡಾI ಉದಯ ಕುಮಾರ್ ಹಾಗೂ ಸಂಘದ ಉಪಾಧ್ಯಕ್ಷ ವೃಷಭರಾಜ್ ಕಡಂಬ, ಮುಖ್ಯ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್‌ವೆಲ್ ಶಾಖೆಯ ಹದಿಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಜಂಟಿ ಸಹಯೋಗದೊಂದಿಗೆ ಬೋಳೂರು ಮಾತಾ ಅಮೃತಾನಂದಮಯಿ ಮಠ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು, ಇವರುಗಳ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಕಂರ್ಬಿಬೈದೇದಿ ಚಾವಡಿಯಲ್ಲಿ ಇತ್ತೀಚೆಗೆ ಜರುಗಿತು. https://chat.whatsapp.com/EbVKVnWB6rlHT1mWtsgbch ಉದ್ಯಮಿ ಶ್ರೀ ಲಕ್ಷ್ಮೀನಾರಾಯಣ ಉದ್ಘಾಟಿಸಿದರು. ಲಯನ್ಸ್ ಕ್ಲಬ್, ಎಂಜೆಎಫ್ ಅಧ್ಯಕ್ಷ ಲಯನ್ ಜಯರಾಜ್ ಪ್ರಕಾಶ್ ಮಾತನಾಡಿ “ಇಂದಿನ ಜನರ ಜೀವನಶೈಲಿಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಇಂತಹ ಶಿಬಿರಗಳಿಂದ ಜನರು ಆರೋಗ್ಯದ ತಪಾಸಣೆ ಮಾಡಿಸುವುದು ಉತ್ತಮ” ಎಂದರು. ಯೆನೆಪೋಯ ದಂತ…
ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ಚುನಾವಣೆ 17 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಾಮಾನ್ಯ ಕ್ಷೇತ್ರದಿಂದ ಅರುಣ್, ಅರುಣ್ ಕುಮಾರ್ ಕೆ., ಕಿರಣ್ ಕುಮಾರ್ ಎ, ಪ್ರೇಮನಾಥ ಬಂಟ್ವಾಳ, ಭೋಜ ಸಾಲಿಯಾನ್, ರಮೇಶ್ ಸಾಲಿಯಾನ್, ಸತೀಶ್, ರಮೇಶ್ ಸಾಲಿಯಾನ್, ಸುರೇಶ್ ಕುಲಾಲ್, ಸುರೇಶ್ ಕಲಾಲ್ ಎನ್, ಹರೀಶ್, ಮಹಿಳಾ ಕ್ಷೇತ್ರದಿಂದ ಮಾಲತಿ ಮಚ್ಚೇಂದ್ರ, ವಿದ್ಯಾ, ಹಿಂದುಳಿದ ವರ್ಗ ‘ಎ’ ಕ್ಷೇತ್ರದಿಂದ ಜನಾರ್ದನ ಬೊಂಡಾಲ, ಹಿಂದುಳಿದ ವರ್ಗ ‘ಬಿ’ ಕ್ಷೇತ್ರದಿಂದ ಜಗನ್ನಿವಾಸ ಸಮಗಾರ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಗಣೇಶ್, ಪರಿಶಿಷ್ಟ ಪಂಗಡದಿಂದ ರೇಖಾ ನಾಯ್ಕ ಗೆಲುವು ಸಾಧಿಸಿದ್ದಾರೆ. ಬ್ಯಾಂಕಿನ ಹಾಲಿ ಅಧ್ಯಕ್ಷ ಸುರೇಶ್ ಕುಲಾಲ್ ಬಂಟ್ವಾಳ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗಿತ್ತು. ಬಂಟ್ವಾಳ ಬೈಪಾಸ್ ನಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆಯಿತು. ಪುತ್ತೂರು ತಾಲೂಕು ಸಹಕಾರಿ ಅಧಿಕಾರಿ ರಘು ಚುನಾವಣಾಧಿಕಾರಿಯಾಗಿದ್ದರು.…
ಮಂಗಳೂರು: ವಜ್ರಮಹೋತ್ಸವ ಸಂಭ್ರಮ ಆಚರಣೆಯಲ್ಲಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಇದರ ವಜ್ರಮಹೋತ್ಸವ ಪ್ರಯುಕ್ತ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ. ಸುರತ್ಕಲ್, ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ. ಕೃಷ್ಣಾಪುರ, ಶ್ರೀ ಕಾಳಿಕಾಂಬಾ ದೇವಸ್ಥಾನ ಕುಳಾಯಿ, ಶ್ರೀ ವಿಶ್ವಬ್ರಾಹ್ಮಣ ಯುವ ಬಳಗ ಕಾಟಿಪಳ್ಳ-ಕೃಷ್ಣಾಪುರ, ವಿಶ್ವಕರ್ಮ ಸಮಾಜ ಸೇವಾ ಸಂಘ ಕುಳಾಯಿ, ವಿಶ್ವಬ್ರಾಹ್ಮಣ ಯುವ ಸೇವಾದಳ ಕುಳಾಯಿ ಇವರ ಸಹಕಾರದೊಂದಿಗೆ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ ಮತ್ತು ಕೆ.ಎಂ.ಸಿ. ಆಸ್ಪತ್ರೆ, ಬಿ.ಆರ್.ಅಂಬೇಡ್ಕರ್ ವೃತ್ತ, ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸುರತ್ಕಲ್‌ನ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ ವೈದ್ಯಕೀಯ ಶಿಬಿರವನ್ನು ಡಾ| ಅಮಲ್ ಉದ್ಘಾಟಿಸಿದರು. ಸುರತ್ಕಲ್ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ್ ಆಚಾರ್ಯ ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ., ಕೃಷ್ಣಾಪುರದ ಅಧ್ಯಕ್ಷ ಸುಧಾಕರ ಆಚಾರ್ಯ ಶುಭ ಹಾರೈಸಿದರು.…
ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಬಳಿಯ ಗೋಕುಲ್ ಸಭಾಂಗಣದಲ್ಲಿ ಭಾನುವಾರ ತರಬೇತಿ ಕಾರ್ಯಕ್ರಮ ಜರುಗಿತು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷ ಭಾಸ್ಕರ್ ದೇವಸ್ಯ ಕಾರ್ಯಕ್ರಮ ಉದ್ಘಾಟಿಸಿದರು. ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್, ಉಪಾಧ್ಯಕ್ಷ ಪ್ರೇಮಾನಂದ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಎಸ್.ಡಿ.ಎಂ. ಸ್ನಾತಕೋತ್ತರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಮೀಳಾ ಎಸ್.ಶೆಟ್ಟಿ,ಅಸಿಸ್ಟೆಂಟ್ ಪ್ರೊಫೆಸರ್ ಡಾಕ್ಟರ್ ರಮ್ಯಾ ಶೆಟ್ಟಿ ಮತ್ತು ಕೊನ್ನಾರ್ ಅಸೋಸಿಯೇಟ್ಸ್ ಮಾಲಕಿ ಸಿ.ಎ. ವೃಂದಾ ಕೊನ್ನಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಗೋಪಾಲ ಶೇಟ್ ಚಿನ್ನಾಭರಣ ಸಾಲ ನೀಡುವಾಗ ವಹಿಸಬೇಕಾದ ಎಚ್ಚರಿಕೆ, ಪರಿಶೀಲನೆ ಮತ್ತು ಮೌಲ್ಯಮಾಪನ ಮಾಡುವ ಬಗ್ಗೆ ಪ್ರಾತ್ಯಕ್ಷಿತ ಮಾಹಿತಿ ನೀಡಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಎ.ಲೋಕೇಶ್ ಭಂಡಾರಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಎಸ.್‌ಧನಂಜಯ ಬಂಗೇರ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಬಿ.ನಾಗೇಂದ್ರ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರತಿನಿಧಿ ನವೀನ್ ಕುಮಾರ್ ಶೆಟ್ಟಿ ಎಂ., ಬ್ಯಾಂಕಿನ ನಿರ್ದೇಶಕರಾದ ಸಿತೇಶ್ ಕೊಂಡೆ, ಬಿ.ವಿಠಲ್ ಶೆಟ್ಟಿ, ಸುಮಂತ್ ರಾವ್, ಗಣೇಶ್ ಶೆಟ್ಟಿ, ನೇಮಿರಾಜ್ ಶೆಟ್ಟಿ, ಶ್ರೀರಂಜಿನಿ, ಪ್ರೇಮ, ಶರ್ಮಿಳಾ, ಬ್ಯಾಂಕಿನ ಆಡಳಿತಾಧಿಕಾರಿ ಕಿರಣ್ ಕುಮಾರ್ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಪ್ರೀತಮ್ ಪಿ. ಪೂಜಾರಿ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮಂಗಳೂರು: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆ ಶನಿವಾರ ನಡೆದಿದ್ದು, ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾಗಿ 20 ವರ್ಷ ಕಾಲ ಮುನ್ನಡೆಸಿದ ಕೆ.ಲವ ಶೆಟ್ಟಿ ನೇತೃತ್ವದ ತಂಡ ಚುನಾವಣೆಯಲ್ಲಿ ಗಳಿಸಿದೆ. ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನಗಳಿಗೆ ಪುರಂದರ ಎಂ.ಶೆಟ್ಟಿ, ರಘುರಾಮ ಅಡ್ಯಂತಾಯ, ಡಾಲ್ಫಿ ಸಾಂತುಮಯೋರ್, ನಾರಾಯಣ ಕುಂದರ್ ಹಾಗೂ ಶೇಷರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಲಗಾರರ ಮಹಿಳಾ ಮೀಸಲಾತಿ ಸ್ಥಾನಗಳಿಗೆ ಸುನಂದಾ ಡಿ.ಶೆಟ್ಟಿ ಹಾಗೂ ಶಾಲಿನಿ ಡಿಸೋಜ ಆಯ್ಕೆಯಾಗಿದ್ದಾರೆ. ಸಾಲಗಾರಲ್ಲದ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಜೋಸೆಫ್ ಕ್ವಾಡ್ರಸ್ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಲ್ಲಿ ಲೋಕಯ್ಯ ಸಾಲ್ಯಾನ್, ಪ್ರವರ್ಗ ಬಿ ಮೀಸಲು ಸ್ಥಾನದಲ್ಲಿ ಪ್ರವೀಣ್ ಮಾಡ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ರಘುರಾಮ ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಬೇಬಿ ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ವಿಲಾಸ್ ನಡೆಸಿಕೊಟ್ಟರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ…
ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ ಸತತ ಎರಡನೇ ಬಾರಿ ಅಧ್ಯಕ್ಷರಾಗಿ ಜೀವನ್ ಲಾಯ್ಡ್ ಪಿಂಟೊ, ಉಪಾಧ್ಯಕ್ಷರಾಗಿ ವಲೇರಿಯನ್ ಬರೆಟ್ರೊ ಪುನರಾಯ್ಕೆಯಾಗಿದ್ದಾರೆ. https://chat.whatsapp.com/HEBD1pVmyHz0E5Ycp5rC7h ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಗೆ 2ನೇ ಬಾರಿಗೆ ಅಧ್ಯಕ್ಷರಾಗಿ ಜೀವನ್ ಲಾಯ್ಡ್ ಪಿಂಟೊ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ಸಂಘದ ಪ್ರಧಾನ ಕಛೇರಿಯಲ್ಲಿ ಚುನಾವಣಾಧಿಕಾರಿ ಡಾ.ಜ್ಯೋತಿ ಡಿ(ಸಹಕಾರ ಅಭಿವೃದ್ಧಿ ಅಧಿಕಾರಿ, ಬಂಟ್ವಾಳ ತಾಲೂಕು) ಇವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಇತ್ತೀಚೆಗೆ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಮೂವರು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ನಿರ್ದೇಶಕರಾಗಿ ಅನಿಲ್ ಹೆರಾಲ್ಡ್ ಫ್ರಾಂಕ್, ಲಾದ್ರು ಮಿನೇಜಸ್, ರೊನಾಲ್ಡ್ ವಿಜಯ್ ಫರ್ನಾಂಡಿಸ್, ಗ್ಲೋರಿಯಾ ಪ್ರೇಮಾ ಕುಟಿನ್ಹ, ವಿನ್ಸೆಂಟ್ ಕ್ಲೋಡಿ ಕಾರ್ಲೊ, ಲಾರೆನ್ಸ್ ಕ್ಲಿಫರ್ಡ್ ಡಿಸೋಜ, ಫ್ರಾನ್ಸಿಸ್ ಮೆಂಡೊನ್ಸಾ, ಹಿಲರಿ ಕ್ರಾಸ್ತಾ, ಪ್ಯೂಬರ್ಟ್ ಲೋಬೊ, ಮಹಿಳಾ ಮೀಸಲಾತಿ ಸ್ಥಾನದಿಂದ ಅನಿತಾ ನೂರೊನ್ಹಾ, ಬೆನೆಡಿಕ್ಷಾ ಸಲ್ದಾನ್ಹ ಹಾಗೂ ಹಿಂದುಳಿದ ವರ್ಗ ಪ್ರವರ್ಗ ‘ಬಿ’ ಸ್ಥಾನದಿಂದ ವಿಶಾಲ್ ಡಿಸೋಜ…
